ಹುಲಿಕಲ್ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ; ಪರ್ಯಾಯ ಮಾರ್ಗ

Date:

ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ಭೂ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಗೂ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಸೂಚಿಸಿ ತಾತ್ಕಾಲಿಕ ಆದೇಶವನ್ನು ಶಿವಮೊಗ್ಗದ ಜಿಲ್ಲಾಧಿಕಾರಿಯವರು ಹೊರಡಿಸಿದ್ದಾರೆ.

ತೀರ್ಥಹಳ್ಳಿ -ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ (ಹುಲಿಕಲ್ ಘಾಟ್)ನ 42.10ರಿಂದ 42.20ರಲ್ಲಿನ ಹೇರ್‌ಪಿನ್ ತಿರುವಿನಲ್ಲಿ ಮೇ ಅಂತ್ಯದಲ್ಲಿ ಬಿದ್ದಂತಹ ಮಳೆಯಿಂದ ಕಾಂಕ್ರಿಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮತ್ತೆ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ, ಸುರಕ್ಷತಾ ದೃಷ್ಟಿಯಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟಿ ಮಾರ್ಗ ವ್ಯಾಪ್ತಿಯಲ್ಲಿ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲದವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಗೂ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಾತ್ಕಾಲಿಕವಾಗಿ ಜಿಲ್ಲಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...