ಬೆಳಗಾವಿ | ದುರಂತಗಳಿಂದ ಕಾರ್ಮಿಕರ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿ: ಮಾನವ ಹಕ್ಕುಗಳ ಆಯೋಗ

Date:

ಕಾರ್ಖಾನೆಗಳಲ್ಲಿ ಸಂಭವಿಸುವ ದುರಂತಗಳಿಂದ ಕಾರ್ಮಿಕರ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿ ಎಂದು ಮಾನವ ಹಕ್ಕುಗಳ ಆಯೋಗದ ನಿಯೋಗ ತಿಳಿಸಿತು.

ಅಗ್ನಿ ದುರಂತ ನಡೆದಿದ್ದ ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.

ಬಳಿಕ ಮಾತನಾಡಿದ ಮಾನವ ಹಕ್ಕುಗಳ ಆಯೋಗದ ಸದಸ್ಯರು, ಕಾರ್ಖಾನೆಗಳಲ್ಲಿ ಸಂಭವಿಸುವ ದುರಂತಗಳಿಂದ ಕಾರ್ಮಿಕರ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿ. ಕಾರ್ಮಿಕರಿಗೆ ಅಗತ್ಯ ರಕ್ಷಣಾತ್ಮಕ ಪರಿಕರಗಳನ್ನು ನೀಡಿರುವ ಬಗ್ಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಮಿಕರು ಗಾಯಗೊಂಡಲ್ಲಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ಸೇರಿಸಲು ವಾಹನ ವ್ಯವಸ್ಥೆ ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆ ಒದಗಿಸಲು ವೈದ್ಯಕೀಯ ಕಿಟ್ ಕಡ್ಡಾಯವಾಗಿ ಇರಬೇಕು. ಕಾರ್ಮಿಕ ಇಲಾಖೆ ಅಧಿಕಾರಿಗಳು ನಿರಂತರ ಪರಿಶೀಲನೆ ನಡೆಸಬೇಕು” ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಸೂಚನೆ ನೀಡಿದರು.

WhatsApp Image 2024 08 20 at 11.01.10 AM

ಸಕ್ಕರೆ ಕಾರ್ಖಾನೆಗಳಲ್ಲಿ ಕಾರ್ಮಿಕರಿಗೆ ಬಹಳಷ್ಟು ಅನಾನುಕೂಲಗಳು ಇರುತ್ತವೆ. ಅಂಥವುಗಳನ್ನು ಕೂಡ ಪರಿಶೀಲಿಸಬೇಕು. ದುರಂತ ಪ್ರಕರಣಗಳು ಮರುಕಳಿಸದಂತೆ ಮುಂಜಾಗ್ರತೆ ವಹಿಸಬೇಕು. ಜಿಲ್ಲಾಡಳಿತದಿಂದ ಈ ಬಗ್ಗೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ವಿವಿಧ ಇಲಾಖೆಯ ವಸತಿನಿಯಗಳಲ್ಲಿ ಹಕ್ಕು ಉಲ್ಲಂಘನೆಯಾದಲ್ಲಿ ಕೂಡಲೇ ದೂರು ನೀಡಬೇಕು. ಬಸ್ ನಿಲ್ದಾಣ, ವಸತಿ ನಿಲಯಗಳು, ಪೊಲೀಸ್ ಠಾಣೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾನವ ಹಕ್ಕುಗಳು ಉಲ್ಲಂಘನೆ ಪ್ರಕರಣಗಳ ಹೆಚ್ಚಾಗಿ ಕಂಡು ಬರುತ್ತವೆ. ಪ್ರಕರಣಗಳ ಮಾಹಿತಿ ಬಂದರೆ ತಕ್ಷಣವೇ ಸಂಬಂಧಿಸಿದ ತಹಶೀಲ್ದಾರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲಾಡಳಿತಗಳಿಂದ ಮಾನವ ಹಕ್ಕುಗಳು ಆಯೋಗದಿಂದ ಜಾಗೃತಿ, ಸಂವಾದ ಕಾರ್ಯಕ್ರಮ ಏರ್ಪಡಿಸಲಾಗುವುದು. ಬಳಿಕ ವಿವಿಧ ಇಲಾಖೆಗಳ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ವಹಿಸಲಾಗುವುದು ಎಂದೂ ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ದಾವಣಗೆರೆ | ಚಳುವಳಿಯಲ್ಲಿ ಪ್ರಯೋಗಶೀಲ ಗುಣಧರ್ಮವಿರಬೇಕು: ಪ್ರೊ.ಎ.ಬಿ.ರಾಮಚಂದ್ರಪ್ಪ

ಬೆಳಗಾವಿ ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ, ತಹಶೀಲ್ದಾರ್ ಬಸವರಾಜ ನಾಗರಾಳ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೂರ್ಯನಾರಾಯಣ ಭಟ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಅಗ್ನಿಶಾಮಕ ದಳದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...