ಹುಮನಾಬಾದ್‌ | ಸಮಾಜದ ಗ್ರಹಿಕೆಗೆ ಅಧ್ಯಯನ ಅಗತ್ಯ‌ : ಡಾ.ಭೀಮಾಶಂಕರ ಬಿರಾದಾರ್

Date:

ಗಂಭೀರವಾದ ಓದು ಅಧ್ಯಯನದಿಂದ ಬದುಕು ಹಾಗೂ ಸಮಾಜವನ್ನು ಹಲವು ಆಯಾಮಗಳಲ್ಲಿ ಗ್ರಹಿಸಬಹುದು ಎಂದು ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.

ಹುಮನಾಬಾದ್‌ ಪಟ್ಟಣದ ಎಸ್‌ಬಿಸಿಎಸ್ ಕಲಾ ಮತ್ತು ಎಸ್‌ವಿ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ʼಜಗತ್ತಿನ ಶ್ರೇಷ್ಠ ಕೃತಿಗಳನ್ನು ಅನುಸಂಧಾನ ಮಾಡುವ ಮೂಲಕ ಸಂವೇದನಾಶೀಲತೆ ಬೆಳೆಯುತ್ತದೆʼ ಎಂದರು.

ʼಬಹುಶಿಸ್ತೀಯ ಮತ್ತು ಅಂತರ್ಶಿಸ್ತೀಯ ಅಧ್ಯಯನದಿಂದ ಹೊಸ ತಿಳುವಳಿಕೆ ಹುಟ್ಟುತ್ತವೆ. ಗಾಢವಾದ ಅಧ್ಯಯನದಿಂದ ಲೋಕದರ್ಶನ ಕಂಡುಕೊಳ್ಳಲು ಸಾಧ್ಯ. ಸಾಮಾಜಿಕ ಬದುಕನ್ನು ಹೇಗೆ ಪ್ರವೇಶಿಸಬೇಕು ಎಂಬ ಅರಿವು ವಿದ್ಯಾರ್ಥಿಗಳಲ್ಲಿ ಶಿಕ್ಷಣ ಮೂಡಿಸುತ್ತದೆ. ವಿಜ್ಞಾನ, ತಂತ್ರಜ್ಞಾನ, ,ಮಾನವಿಕ ವಿಭಾಗಗಳಲ್ಲಿ ಈ ಕಾಲದಲ್ಲಿ ನಡೆಯುವ ಹೊಸ ಆವಿಷ್ಕಾರ, ಸಂಶೋಧನೆಗಳು ತಿಳಿದುಕೊಳ್ಳುವ, ಹೊಸ ಅಧ್ಯಯನಗಳು ಅರಿಯುವ ಮೂಲಕ ನಮ್ಮ ಜ್ಞಾನ ವಿಸ್ತರಿಸಿಕೊಳ್ಳಬೇಕಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಮ್ಮ ಓದು ಸಮಾಜದ ಹಲವು ತಾರತಮ್ಯಗಳು ನೀಗಿಸುವ ದಾರಿಯಾಗಬೇಕು. ವೈಚಾರಿಕ ಚಿಂತನೆ, ಪರಿಸರ ಪ್ರಜ್ಞೆ, ಬದುಕಿನ ಬಗ್ಗೆ ಆಳದ ಪ್ರೀತಿ ಮೂಡಿಸುವ ಕೆಲಸ ಶಿಕ್ಷಣದಿಂದ ಸಾಧ್ಯವಾಗುತ್ತದೆ. ಚರಿತ್ರೆ ನೆನಪು ಮತ್ತು ಸಮಕಾಲೀನ ಸ್ಪಂದನೆಗಳು ಸೃಷ್ಟಿಸುವ ಪ್ರಕ್ರಿಯೆ ಶಿಕ್ಷಣದಲ್ಲಿ ನಿರಂತರ ನಡೆಯಬೇಕುʼ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಪ್ರೊ. ರವೀಂದ್ರನಾಥಪ್ಪ ಶಾಯಪ್ಪ ಮಾತನಾಡಿ, ʼಶಿಸ್ತು, ಸಂಯಮ, ನಿರಂತರ ಅಧ್ಯಯನದಿಂದ ನಮ್ಮ ವ್ಯಕ್ತಿತ್ವದ ಬೆಳವಣಿಗೆಯಾಗುತ್ತದೆ. ಈ ಕಾಲದಲ್ಲಿ ಎದುರಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಸಿದ್ದರಾಗಬೇಕು. ಓದು-ಬರಹಗಳು ವಿದ್ಯಾರ್ಥಿಗಳ ಬದುಕು ರೂಪಿಸಿಕೊಳ್ಳಲು ಮಾರ್ಗವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಲೇಜು ವೇದಿಕೆಯಾಗಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ನಾತಕೋತ್ತರ ಪದವೀಧರ ಗ್ರಾಮ ಪಂಚಾಯತ್‌ ಸದಸ್ಯನಾಗಿ ಆಯ್ಕೆ

ಈ ಸಂದರ್ಭದಲ್ಲಿ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಐಕ್ಯೂಎಸಿ ಸಂಯೋಜಕ ಪ್ರೊ. ಕ್ರಾಂತಿ ಕುಮಾರ್ ಪಂಚಾಳ ಮಾತನಾಡಿದರು. ಪ್ರೊ.ಚಂದ್ರಕಾಂತ ಲದ್ದೆ, ಪ್ರೊ. ಸಂಗ್ರಾಮ್ ರೆಡ್ಡಿ, ಪ್ರೊ.ಅವಿನಾಶ ಪಾಟೀಲ, ಡಾ.ಅರವಿಂದ ರಾಠೋಡ, ಡಾ.ಪ್ರವೀಣ ಕಲಬುರ್ಗಿ, ಡಾ.ವಿಕಾಸ ಪೋಸ್ತೆ, ಡಾ.ರಮಾದೇವಿ, ಪ್ರೊ. ದೀಪಕ ಕಲಬುರ್ಗಿ ಸೇರಿದಂತೆ ಹಲವರಿದ್ದರು. ಮೆಹಕ್ ಸ್ವಾಗತಿಸಿದರು. ನಿತಿನ್ ನಿರೂಪಿಸಿದರು. ಮಹಾದೇವ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...