ಹುನಗುಂದ | ನಮ್ಮ ಸಂವಿಧಾನ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ: ವಿಜಯಾನಂದ ಕಾಶಪ್ಪನವರ್

Date:

ನಮ್ಮ ದೇಶದ ಸಂವಿಧಾನ ಕೇವಲ ಜಾತಿ, ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಅದು ಸರ್ವರ ಏಳಿಗೆಗೆ ರಚಿಸಿದ ಪ್ರತಿ ಭಾರತೀಯನ ಘನತೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪಟ್ಟಣದ ಗುರುಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ದೇಶವನ್ನು ಒಡೆದು ಆಳಬೇಕು ಎನ್ನುವುದು ಮನುವಾದಿಗಳ ಉದ್ದೇಶ. ಹೀಗಾಗಿ ಅವರು ಸಂವಿಧಾನ ತಿರಸ್ಕರಿಸುವ ಹಾಗೂ ಸಂವಿಧಾನದ ಪ್ರತಿಗಳನ್ನು ಸುಟ್ಟುಹಾಕುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ.‌ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆ ಮತ್ತು ವಿಚಾರಗಳನ್ನು ತಿಳಿಸುವ ಕಾರ್ಯ ಆಗಬೇಕು. ಹೀಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡಲೇ ಸುತ್ತೋಲೆ ಹೊರಡಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ಕಬ್ಬು ಬೆಳೆಗಾರ ಜೊತೆಗಿನ ಸಂಧಾನ ಯಶಸ್ವಿ, ಪ್ರತಿ ಟನ್‌ ಕಬ್ಬಿಗೆ 3,300 ರೂ. ನಿಗದಿ

ಸತ್ಯಶೋಧಕ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪರಶುರಾಮ ಮಹಾರಾಜನವರ ಮಾತನಾಡಿದರು. ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಅವರು ಸಂವಿಧಾನದ ಪೀಠಿಕೆ ಓದಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಘಟಕದ ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೆದಾರ, ನಿವೃತ್ತ ಉಪನ್ಯಾಸ ಸಿದ್ದಲಿಂಗಪ್ಪ ಬೀಳಗಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಂ ಎಚ್ ಕಟ್ಟಿಮನಿ, ಮುಖಂಡರಾದ ಬಸವರಾಜ ಮಸ್ಕಿ, ಬಸವರಾಜ ಧನ್ನೂರು, ರಾಜು ಈಟಿ, ರವಿಮಸ್ತಿ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...