ಹುನಗುಂದ | ಸರ್ಕಾರಿ ಕಾಲೇಜಿನ ಕಟ್ಟಡದಲ್ಲಿಯೇ ಪ್ರಾಂಶುಪಾಲ ಆತ್ಮಹತ್ಯೆ

Date:

ಸರ್ಕಾರಿ ಕಾಲೇಜಿನ ಪ್ರಾಂಶುಪಾಲರೊಬ್ಬರು ಕಾಲೇಜು ಕಟ್ಟಡದೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದಿದೆ.

ನಾಗರಾಜ ಮುದಗಲ್ (55) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಇವರು ಹುನಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆಗಸ್ಟ್‌ 22ರ ಬೆಳಿಗ್ಗೆ 6 ಗಂಟೆಗೆ ಕಾಲೇಜ್ ಕ್ಯಾಂಟಿನ್​ ಸ್ಟೇರ್ ಕೇಸ್ ಗ್ರಿಲ್​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ಸರ್ಕಾರಿ ಕಾಲೇಜಿನಲ್ಲಿ ಜಾನಪದ ಜಾತ್ರೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಸಿದ್ಧತೆಯ ಹಿನ್ನೆಲೆ ಪ್ರಾಂಶುಪಾಲರು ಸೋಮವಾರ ರಾತ್ರಿ ಕಾಲೇಜಿನಲ್ಲಿಯೇ ತಂಗಿದ್ದರು. ಮಂಗಳವಾರ ಬೆಳಗಿನ ಜಾವ ಕೊಠಡಿಯಿಂದ ಹೊರಗಡೆ ಬಂದ ಪ್ರಾಂಶುಪಾಲರು ಶವವಾಗಿ ಪತ್ತೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬ್ರ್ಯಾಂಡ್ ಬೆಂಗಳೂರು | ಉನ್ನತ ಮಟ್ಟದ ಶಿಕ್ಷಣಕ್ಕೆ ಯೋಜನೆ ಅಗತ್ಯ: ಬಿಬಿಎಂಪಿ ವಿಶೇಷ ಆಯುಕ್ತ

ಮುದಗಲ್ ಇವರು ಇಳಕಲ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 14 ವರ್ಷ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಆರು ತಿಂಗಳ ಹಿಂದೆ ಇಳಕಲ್ ಕಾಲೇಜಿನಿಂದ ಹುನಗುಂದ ಕಾಲೇಜಿಗೆ ವರ್ಗಾವಣೆಗೊಂಡು ಬಂದಿದ್ದರು. ಪ್ರಾಂಶುಪಾರಿಗೆ ಪತ್ನಿ ಹಾಗೂ ಮೂವರು ಮಕ್ಕಳು ಇದ್ದಾರೆ.

ಘಟನಾ ಸ್ಥಳಕ್ಕೆ ಹುನಗುಂದ ಡಿವೈಎಸ್ಪಿ, ಸಿಪಿಐ, ಪಿಎಸ್​ಐ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುನುಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...