ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ; ಇಬ್ಬರ ಬಂಧನ

Date:

ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದಲ್ಲಿನ ಸೈಗೋಲ್ಡ್ ಅಂಡ್ ಡೈಮಂಡ್ ಶಾಪ್ ಅಂಗಡಿಯಲ್ಲಿ ದಿನಾಂಕ-28-12-2025 ರಂದು ಮಧ್ಯಾಹ್ನ 2-04 ಗಂಟೆ ಸಮಯದಲ್ಲಿ 05 ಜನ ವ್ಯಕ್ತಿಗಳು ಮುಖಕ್ಕೆ ಮಾಸ್ಕ್ ಹಾಗೂ ಹೆಲೈಟ್ ಧರಿಸಿ, ಕೈಗಳಲ್ಲಿ ಪಿಸ್ತೂಲ್ ಗಳನ್ನು ಹಿಡಿದು ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದವರಿಗೆ ಹೆದರಿಸಿ, ಅಂಗಡಿಯಲ್ಲಿದ್ದ 450 ವಿವಿಧ ಮಾದರಿಯ 8,034 ಗ್ರಾಂ 200ಮಿಲಿ ತೂಕವಿರುವ ಅಂದಾಜು ₹10 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚಿನ್ನದಂಗಡಿ ಮಾಲೀಕ ಸೈನುದ್ದೀನ್ ನೀಡಿದ ದೂರಿನ ಅನ್ವಯ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದರು. ಪೊಲೀಸ್ ಮಹಾನಿರೀಕ್ಷಕರಾದ ಡಾ. ಎಂ.ಬಿ. ಬೋರಲಿಂಗಯ್ಯರವರ ಮಾರ್ಗದರ್ಶನದಲ್ಲಿ ಪ್ರಕರಣದ ಆರೋಪಿಗಳು ಮತ್ತು ದರೋಡೆ ಸ್ವತ್ತಿನ ಪತ್ತೆಗಾಗಿ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ಅಧೀಕ್ಷಕ ಎಲ್.ನಾಗೇಶ್ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಿ, ವಿವಿಧ ರಾಜ್ಯಗಳಲಿ ತನಿಖೆ ಕೈಗೊಂಡಿದ್ದರು.

ವಿಶೇಷ ವಿಡಿಯೋ ವೀಕ್ಷಿಸಿ: https://www.youtube.com/watch?v=NNlc_mA4os0&t=382s

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರ ರಾಜ್ಯಕ್ಕೆ ತೆರಳಿದ್ದ ಪೊಲೀಸ್ ನಿರೀಕ್ಷಕ ಸಂತೋಷ್ ಕಶ್ಯಪ್, ಟಿ.ಎಂ. ಪುನೀತ್, ಪಿಎಸ್ಐ ಅಜಯ್ ಕುಮಾರ್ ನೇತೃತ್ವದ ತಂಡವು ಬಿಹಾರ ರಾಜ್ಯದ ಪೊಲೀಸರ ಸಹಕಾರದೊಂದಿಗೆ ಆರೋಪಿತಗಳಾದ ಹರಿನಗರ ಬಡಾವಣೆ ವಾಸಿಯಾದ ರಿಷಿಕೇಶ್ ಕುಮಾರ್ ಸಿಂಗ್ ಹಾಗೂ ಬಾಗಲ್‌ಪುರ ಜಿಲ್ಲೆಯ ಪಂಕಜ್ ಕುಮಾರ್ ಎಂಬುವವರನ್ನು ದರ್ಬಾಂಗ್ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ, ಆರೋಪಿತಗಳು ದರೋಡೆ ಮಾಡಿದ್ದ 12.5 ಗ್ರಾಂ ತೂಕದ ಚಿನ್ನದ ಆಭರಣಗಳು, ₹92,000 ರೂಪಾಯಿ ನಗದು ಹಣ, ಸೈಗೋಲ್ಡ್ ಚಿಹ್ನೆ ಇರುವ ಒಂದು ಬಾಕ್ಸ್ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ರಾಯಲ್ ಎನ್‌ಫೀಲ್ಡ್ ಬೈಕನ್ನು ವಶಪಡಿಸಿಕೊಂಡಿದ್ದಾರೆ.

ಈ ವಿಶೇಷ ಸುದ್ದಿ ಓದಿದ್ದೀರಾ? ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಪ್ರಸ್ತಾವಿತ ಯೋಜನೆಯ ಸಾಧಕ-ಬಾಧಕಗಳೇನು?

ಕಾರ್ಯಾಚರಣೆಯಲ್ಲಿ ಭಾಗಿಯಾಗಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ತನಿಖಾ ತಂಡಕ್ಕೆ ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿಯವರು ಪ್ರಶಂಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...