ಮಂಡ್ಯ | ಅನುಮಾನಾಸ್ಪದವಾಗಿ ಪತ್ನಿ ಸಾವಿನ ಬಳಿಕ ಪತಿಯೂ ಆತ್ಮಹತ್ಯೆ; ಅನಾಥವಾದ ಪುಟ್ಟ ಮಗು!

Date:

ಪತ್ನಿಯ ಆತ್ಮಹತ್ಯೆ ಹಾಗೂ ಆಕೆಯ ಅನುಮಾನಾಸ್ಪದ ಸಾವಿನ ಪರಿಸ್ಥಿತಿಯನ್ನು ಎದುರಿಸಲಾಗದೆ ಪತಿಯೂ ಸಾವಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆ ತಾಲೂಕಿನ ಗದ್ದೆ ಹೊಸೂರು ಗ್ರಾಮದಲ್ಲಿ ನಡೆದಿದೆ.

ಸ್ವಾತಿ (21) ಎಂಬ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಗದ್ದೆ ಹೊಸೂರು ಗ್ರಾಮದ ಮೋಹನ್ (26) ಪತ್ನಿಯ ಸಾವಿಗೆ ಹೆದರಿ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮೋಹನ್ ತನ್ನ ಪತ್ನಿಯ ಸಾವಿನಿಂದಾಗಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಪತಿಯ ಮನೆಯವರೇ ಮಾಡಿದ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮಂಡ್ಯ 16

ಸ್ವಾತಿ ಮಂಗಳವಾರ ರಾತ್ರಿ ಮೋಹನ್ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಯ ನಂತರ ಪತಿ ಮೋಹನ್ ಮತ್ತು ಆತನ ಪೋಷಕರು ಮನೆಯಿಂದ ಪರಾರಿಯಾಗಿದ್ದಾರೆ. ಪತಿ ಮತ್ತು ಆತನ ಕುಟುಂಬದವರು ಸೇರಿ ಕೊಲೆ ಮಾಡಿದ್ದಾರೆ ಎಂದು ಮೃತ ಗೃಹಿಣಿಯ ಪೋಷಕರು ಆರೋಪಿಸಿದ್ದು, ರಾತ್ರಿ ವೇಳೆ ಗೃಹಿಣಿ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ.

ಬುಧವಾರ ಬೆಳಗ್ಗೆ ಗ್ರಾಮದ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಕಿಕ್ಕೇರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಅನಾಥವಾದ ಒಂದೂವರೆ ವರ್ಷದ ಮಗು!

ಇನ್ನು ಮೋಹನ್- ಸ್ವಾತಿ ದಂಪತಿಗೆ ಒಂದೂವರೆ ವರ್ಷದ ಮಗು ಇದ್ದು, ತಂದೆ-ತಾಯಿ ದಾರುಣ ಅಂತ್ಯದಿಂದ ಮಗು ಅನಾಥವಾಗಿದೆ.

ಇದನ್ನು ಓದಿದ್ದೀರಾ? ಚಿಂತಾಮಣಿ | ನಿರ್ಮಾಣ ಹಂತದ ಗೋಡೆ ಕುಸಿತ; ದಂಪತಿಯ ಸ್ಥಿತಿ ಗಂಭೀರ

ಕೆರೆಯಲ್ಲಿದ್ದ ಮೋಹನ್ ಮೃತದೇಹವನ್ನು ಪೊಲೀಸರು ಗ್ರಾಮಸ್ಥರ ಸಹಾಯದೊಂದಿಗೆ ಹೊರತೆಗೆದು ಮರಣೋತ್ತರ ಪರೀಕ್ಷೆಗೆ‌ ರವಾನಿಸಿದರು. ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...