ದಾವಣಗೆರೆ | ನಾನು ‌ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧ, ಅವರೂ ಸ್ವತಂತ್ರವಾಗಿ ಸ್ಪರ್ಧಿಸಲಿ: ಸಂಸದ ಸಿದ್ದೇಶ್ವರ್‌ಗೆ ಮಲ್ಲಿಕಾರ್ಜುನ್ ಸವಾಲು

Date:

ಬಿಜೆಪಿ ಸಂಸದ‌‌ ಜಿ.ಎಂ ಸಿದ್ದೇಶ್ವರ ಅವರು ಮೋದಿ ಫೋಟೋ ಇಟ್ಟುಕೊಂಡು ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ. ಅವರು ವೈಯಕ್ತಿಕ ವರ್ಚಸ್ಸಿನಿಂದ ಚುನಾವಣೆಯಲ್ಲಿ ಸ್ಪರ್ಧಿಸಲು. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ದನಿದ್ದೇನೆ. ಅವರೂ ಪಕ್ಷ ಬಿಟ್ಟು ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಸವಾಲು ಹಾಕಿದ್ದಾರೆ.

ತಮ್ಮ ವಿರುದ್ಧದ ಸಂಸದರ ಟೀಕೆಗೆ ಉತ್ತರ ನೀಡಿದ ಅವರು, “ನಾನು ಕಾಂಗ್ರೆಸ್ ಕಟ್ಟಾಭಿಮಾನಿ. ನಮ್ಮ ಇಡೀ ಕುಟುಂಬ ಕಾಂಗ್ರೆಸ್ ಬೆಂಬಲಿಸುತ್ತದೆ. ಯಾವುದೇ ಪಕ್ಷದ ಬೆಂಬಲ ಇಲ್ಲದೆ, ವೈಯಕ್ತಿಕವಾಗಿ ನಾನು ಲೋಕಸಭೆಗೆ ಸ್ಪರ್ಧಿಸುತ್ತೇನೆ. ನನಗೆ ಯಾರ ಆಶೀರ್ವಾದವೂ ಬೇಡ, ಜನರ ಆಶೀರ್ವಾದವೊಂದು ಇದ್ರೆ ಸಾಕು. ಅವರು ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧರಿದ್ದಾರಾ” ಎಂದು ಪ್ರಶ್ನಿಸಿದ್ದಾರೆ.

“ನಾನು ಸಿದ್ದೇಶ್ವರ ಅವರಿಂದ ಸಂಸ್ಕಾರ ಕಲಿಯಬೇಕಿಲ್ಲ. ನಮ್ಮ ಅಪ್ಪ, ಅಜ್ಜ ಹಾಗೂ ಅ‌ವ್ವ ನಮ್ಮವ್ವ ಸಂಸ್ಕಾರ ಕಲಿಸಿದ್ದಾರೆ. ಬೇಕಾದರೆ ನಾನೇ ಕಲಿಸಿಕೊಡುವೆ. ನಾನು, ನಮ್ಮ ಅಪ್ಪ ಈವರೆಗೆ ಬಡ್ಡಿ ವ್ಯವಹಾರ ಮಾಡಿಲ್ಲ. ಅವರ ಕುಟುಂಬದ ಜೊತೆ ಕೈಗಡ ವ್ಯವಹಾರವಿತ್ತು ಅಷ್ಟೇ. ಅವರು ಒಂದಕ್ಕೆ ನಾಲ್ಕು ರೂಪಾಯಿ ಬಡ್ಡಿ ವಸೂಲಿ ಮಾಡಿ ಊರು ಹಾಳುಮಾಡಿದ್ದಾರೆ‌” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಳೇ ದಾವಣಗೆರೆಯಲ್ಲಿ ಉದ್ಯಾನವನ್ನು ನೋಂದಣಿ ಮಾಡಿಕೊಟ್ಟಿರುವ ಪ್ರಕರಣ ಹೊರಬಂದಿದೆ. ಪಾಲಿಕೆ ಸದಸ್ಯರೊಬ್ಬರ ಅಕ್ಕ ಮತ್ತು ಅಪ್ಪ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. 2021ರಲ್ಲಿ ಉದ್ಯಾನದ ಜಾಗವನ್ನು ಖಾತೆ ಮಾಡಿ 2022ರಲ್ಲಿ ನೋಂದಣಿ ಮಾಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಸಬ್ ರಿಜಿಸ್ಟರ್ ಮೇಲೆ ಕ್ರಮ ಕೈಗೊಳ್ಳಲಾಗುವುದು.‌ ಇದಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಕಾರಣ‌. ಗಣಿಗಾರಿಕೆಯಲ್ಲಿ ನಾವು ಏನು ಮಾಡಿಲ್ಲ ಎಂದು ಹೇಳುವ ಅವರ ಮೇಲೆ 220 ಕೋಟಿ ಅಕ್ರಮ ದಾಖಲೆ ಇದೆ. ಬೇಕಾದರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಚರ್ಚೆಗೆ ಬರಲಿ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...