ಡಬಲ್ ಸ್ಟ್ಯಾಂಡರ್ಡ್ ನನಗಿಲ್ಲ, ಅವಕಾಶ ಕೊಟ್ಟರೆ ಈಗಲೂ ಕೆಲಸ ಮಾಡುವೆ: ಮಾಜಿ ಸಚಿವ ವಿ ಸೋಮಣ್ಣ

Date:

ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಈಗ ಸೋತು ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಬೇಸರ ವ್ಯಕ್ತಪಡಿಸಿದರು.

ವಿಧಾನಸಭೆ ಚುನಾವಣೆ ಸೋಲಿಕ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

“ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿ ರೂ.ಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ನಡೆದುಕೊಂಡೆ. ಈಗ ಸೋತಿರುವೆ. ಬಿಜೆಪಿಯ ಕಾನೂನು ಪ್ರಕೋಷ್ಠ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪಕ್ಷದ ಕಚೇರಿಗೆ ಆಗಮಿಸಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಮಾನ್ಯ ಸಭಾಧ್ಯಕ್ಷ ಖಾದರ್ ಅವರು ನೂತನ ಶಾಸಕರಿಗೆ ಯಾವ ದಿಕ್ಕು ತೋರಿಸುತ್ತಿದ್ದಾರೆ?

ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿ, “ನಾನು ಈಗಾಲೇ ಹೈಕಮಾಂಡ್​​​​​​​ ಬಳಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನನಗೆ ಇತಿಮಿತಿ ಇದೆ. ಫೋರ್ ಸಿಕ್ಸ್ ಎಲ್ಲ ಇಲ್ಲೆ ಹೊಡೆಯುತ್ತೇನೆ ಅಂತ ಹೇಳಿದ್ದೇನೆ. ಈಗ ಬೋಲ್ಡ್ ಕೂಡ ಆಗಿದ್ದೇನೆ. ಪಕ್ಷ ಕೊಡುವ ಸಂದೇಶದ ಪ್ರಕಾರ ಕೆಲಸ ಮಾಡುತ್ತೇನೆ” ಎಂದು ಹೇಳಿದರು.

“ಡಬಲ್ ಸ್ಟ್ಯಾಂಡರ್ಡ್ ನನಗೆ ಇಲ್ಲ. ಎಲ್ಲ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಬಿಜೆಪಿಗೆ ಬಂದು ಎಂತೆಂತಹ ಸಂದರ್ಭದಲ್ಲೂ ಕೆಲಸ ಮಾಡಿದ್ದೇನೆ. ಈಗಲೂ ಅವಕಾಶ ಕೊಟ್ಟರೆ ಮಾಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...