- ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರೇ ನಿರ್ಧಾರ ತೆಗೆದುಕೊಳ್ತಾರೆ.
- ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ.
ಒಂದು ವಾರದಿಂದ ಸಿನಿಮಾ ಶೂಟಿಂಗ್ ನಲ್ಲಿ ಮಗ್ನನಾಗಿದ್ದೇನೆ. ಸದ್ಯಕ್ಕೆ ಚುನಾವಣಾ ರಾಜಕೀಯದಿಂದ ದೂರವಿರಲು ತೀರ್ಮಾನಿಸಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾನುವಾರ ಬೀದರ್ ನಗರಕ್ಕೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಜೆಡಿಎಸ್ – ಬಿಜೆಪಿ ಮೈತ್ರಿ ಮತ್ತು ಟಿಕೆಟ್ ಹಂಚಿಕೆ ವಿಷಯದ ಬಗ್ಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅತಿ ಶೀಘ್ರದಲ್ಲೇ ಮಾಧ್ಯಮಗಳ ಮೂಲಕ ಮಾಹಿತಿ ಹಂಚಿಕೊಳ್ಳುತ್ತಾರೆ. ಲೋಕಸಭೆ ಟಿಕೇಟ್ ಹಂಚಿಕೆ, ಹಾಗೂ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ದೇವಗೌಡರು ಹಾಗೂ ಕುಮಾರಸ್ವಾಮಿಯವರು ನಿರ್ಣಯ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ತೆಲಂಗಾಣದಲ್ಲೂ ‘ಗ್ಯಾರಂಟಿ’ಯ ಭರವಸೆ ನೀಡಿದ ಕಾಂಗ್ರೆಸ್; ಆದರೆ ಐದಲ್ಲ, ಆರು!
ಒಂದು ಪ್ರಾದೇಶಿಕ ಪಕ್ಷ ಕಟ್ಟಿ ಅದನ್ನು ಮುನ್ನಡೆಸಿಕೊಂಡು ಹೋಗುವುದು ಕಷ್ಟದ ಕೆಲಸ, ಹೋರಾಟದ ಮೂಲಕ ಬಂದಿರುವ ದೇವೇಗೌಡರು ಕಟ್ಟಿ ಬೆಳೆಸಿದ ಪಕ್ಷವನ್ನು ಅನೇಕ ಹಿರಿಯ ನಾಯಕರೊಂದಿಗೆ ಕಳೆದ 25 ವರ್ಷಗಳಿಂದ ಕುಮಾರಸ್ವಾಮಿ ಪಕ್ಷ ಮುನ್ನಡೆಸಿಕೊಂಡು ಸಾಗುತ್ತಿದ್ದಾರೆ” ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವ, ಜೆಡಿಎಸ್ ನಾಯಕ ಬಂಡೆಪ್ಪಾ ಖಾಶೆಂಪುರ ಸೇರಿದಂತೆ ಜೆಡಿಎಸ್ ಪ್ರಮುಖರು ಇದ್ದರು.




