ಇದ್ರೀಸ್‌ ಪಾಷ ಸಾವು ಪ್ರಕರಣ | ಪುನೀತ್‌ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

Date:

  • ಪೊಲೀಸ್‌ ಠಾಣೆಯ 100 ಮೀಟರ್ ದೂರದಲ್ಲಿ ಇದ್ರೀಸ್‌ ಪಾಷ ಶವ ಪತ್ತೆಯಾಗಿತ್ತು
  • ತಲೆ ಮರೆಸಿಕೊಂಡಿದ್ದ ಪುನೀತ್‌ ಕೆರೆಹಳ್ಳಿಯನ್ನು ರಾಜಸ್ಥಾನದಲ್ಲಿ ಬಂಧಿಲಾಗಿತ್ತು

ರಾಮನಗರ ಜಿಲ್ಲೆ ಕನಕಪುದ ಸಾತನೂರು ಬಳಿ ಜಾನುವಾರು ಸಾಗಣೆ ಸಂದರ್ಭದಲ್ಲಿ ಇದ್ರೀಸ್‌ ಪಾಷ (45) ಎಂಬುವವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಮತ್ತು ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳನ್ನು ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ ಜಿ ಉಮಾ ಮಂಗಳವಾರ ವಿಚಾರಣೆ ನಡೆಸಿ, ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಎ ಎನ್ ಪವನ್ ಕುಮಾರ್, ಪಿ ಲಿಂಗಪ್ಪ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ ಅರುಣ್ ಶ್ಯಾಮ್, “ಮರಣೋತ್ತರ ಪರೀಕ್ಷೆಯಲ್ಲಿ ಇದೀಸ್‌ ಪಾಷ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಿದೆ. ಗಂಭೀರ ಗಾಯಗಳ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಪ್ರಕರಣವು ಸಾತನೂರು ಠಾಣೆಯ 100 ಮೀಟರ್ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ತನಿಖೆ ಪೂರ್ಣಗೊಂಡಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ. ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕಿದ್ದು, ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದ್ದರು. ನ್ಯಾಯಪೀಠ ಈ ವಾದವನ್ನು ಪುರಸ್ಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಸಿಕಾಂತ್‌ ಸೆಂಥಿಲ್ | ಹಿಂದೆ ಜನಪರ ಅಧಿಕಾರಿ, ಈಗ ಕಾಂಗ್ರೆಸ್ ಅಭೂತಪೂರ್ವ ಗೆಲುವಿನ ರೂವಾರಿ

ಪ್ರಕರಣದ ಹಿನ್ನೆಲೆ

ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು 2023ರ ಮಾರ್ಚ್‌ 31ರಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಕನಕಪುರದ ಸಾತನೂರು ಪೊಲೀಸ್ ಠಾಣೆ ಸಮೀಪ ಅಡ್ಡಗಟ್ಟಿ ವಾಹನದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದರು.

ಏಪ್ರಿಲ್ 1ರಂದು ಬೆಳಗ್ಗೆ ಘಟನಾ ಸ್ಥಳದಿಂದ ಅಂದರೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿ ಇದ್ರೀಸ್‌ ಪಾಷ ಶವ ಪತ್ತೆಯಾಗಿತ್ತು. ಪುನೀತ್ ಮತ್ತು ಸಹಚರರಿಂದ ಇದ್ರೀಸ್‌ ಪಾಷ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಇದ್ರೀಸ್‌ ಪಾಷ ಸಹೋದರ ಯೂನುಸ್ ಪಾಷ ದೂರು ನೀಡಿದ್ದರು.

ಈ ದೂರು ಆಧರಿಸಿ ಆರೋಪಿಗಳ ವಿರುದ್ಧ ಸಾತನೂರು ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 302, 324, 341, 504, 506 ಜೊತೆಗೆ 34 ಅಡಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಗಳನ್ನು ರಾಜಸ್ಥಾನದಲ್ಲಿ ಪೊಲೀಸರು ಏಪ್ರಿಲ್ 5ರಂದು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...