ಬಿಜೆಪಿಗೆ ಮಹಿಳೆಯರ ಮೇಲೆ ಗೌರವವಿದ್ದರೆ, ರವಿಕುಮಾರ್‌ರನ್ನು ಪಕ್ಷದಿಂದ ಉಚ್ಚಾಟಿಸಲಿ: ಸೌಮ್ಯಾ ರೆಡ್ಡಿ

Date:

ಮಹಿಳೆಯರ ಬಗ್ಗೆ ಬಿಜೆಪಿಗೆ ಗೌರವ ಇದ್ದರೆ ರವಿಕುಮಾರ್‌ ಅವರನ್ನು ಈ ಕೂಡಲೇ ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವಂತೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಆಗ್ರಹಿಸಿದರು.

ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಮುಂದೆ ವಿಧಾನ ಪರಿಷತ್‌ ಸದಸ್ಯ ರವಿಕುಮಾ‌ರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರ ವಿರುದ್ಧ ಆಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ನಡೆದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

“ಶಾಲಿನಿ ರಜನೀಶ್ ಅವರು, ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ತಾಯಿಯಂತೆ ನಿಂತು ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶ, ಸಂಸ್ಕೃತಿಯ ಪಾಠ ಮಾಡುವ ಇವರಿಗೆ ಮಹಿಳೆಯ ಬಗ್ಗೆ ಗೌರವ ಎಲ್ಲಿ ಹೋಯಿತು. ದೇಶ ಮುಂದೆ ಹೋಗುವ ಬದಲು ಬಿಜೆಪಿಯಿಂದಾಗಿ ಎಲ್ಲೋ ಒಂದು ಕಡೆ ಹಿಂದೆ ಹೋಗುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ಮೋದಿಯವರು ಬೇಟಿ ಬಚಾವೋ ಬೇಟಿ ಪಡಾವೋ ಎಂದು ಹೇಳ್ತಾರೆ. ಬೇಟಿ ಪಡೋಕೀ ಬಾದ್ ಐಎಎಸ್ ಆಫಿಸರ್ ಬನ್ ಗಯೀ, ಏ ಹಮಾರೆ ಲಿಯೇ ಬಹೂತ್ ಗೌರ್ ಕೀ ಬಾತ್ ಹೈ. ಆದರೆ ಬಿಜೆಪಿಯ ಮುಖಂಡರು ಮಹಿಳೆಯರ ಬಗ್ಗೆ ಅಗೌರವದಿಂದ ಮಾತನಾಡುತ್ತಿದ್ದಾರೆ. ಮಾಜಿ ಸಚಿವ ಸಿ.ಟಿ. ರವಿಯವರು ಸಚಿವರ ಬಗ್ಗೆ ಏನು ಮಾತನಾಡಿದ್ದಾರೆನ್ನುವುದು ಎಲ್ಲರಿಗೂ ಗೊತ್ತಿದೆ. ಗೌರವದಿಂದ ಮಾತನಾಡದ ಬಿಜೆಪಿಯ ಕೆಲವು ನಾಯಕರಿಗೆ ಸರಿಯಾಗಿ ಮಾತನಾಡುವಂತೆ ಹೈಕೋರ್ಟ್‌ ಎಚ್ಚರಿಗೆ ನೀಡಿದರೂ ಅವರಿಗೆ ಬುದ್ದಿ ಬಂದಿಲ್ಲ” ಎಂದರು.

ಇದನ್ನೂ ಓದಿ: ಮಂಗಳೂರು | ಬಂಟ್ವಾಳ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಮಾತನಾಡಿ, “ದೇಶ, ಸಂಸ್ಕೃತಿ ಬಗ್ಗೆ ಮಾತನಾಡುವ ಬಿಜೆಪಿಯವರೇ, ಮಹಿಳೆಯರನ್ನು ಅಗೌರವಿಸುವುದು ನಿಮ್ಮಸಂಸ್ಕೃತಿಯಾ? ಬಿಜೆಪಿಯಲ್ಲಿರುವ ಮಹಿಳೆಯರು ಕಣ್ಮುಚ್ಚಿ ಕೂತಿದ್ದೀರಲ್ವಾ? ನಿಮಗೆ ಸ್ವಾಭಿಮಾನ ಇಲ್ಲವಾ” ಎಂದು ಪ್ರಶ್ನಿಸಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಮತಾ ಗಟ್ಟಿ, ಮುಖಂಡರಾದ ಕೆ.ಕೆ ಶಾಹುಲ್ ಹಮೀದ್, ಶಾಲೆಟ್ ಪಿಂಟೊ, ಮಂಜುಳಾ ನಾಯಕ್, ಪಿ.ಪಿ. ವರ್ಗಿಸ್, ಉಷಾ ಅಂಚನ್, ಗೀತಾ ಅತ್ತಾವರ, ಎಸ್.ಅಪ್ಪಿ ಶಕುಂತಲಾ ಕಾಮತ್, ಸಬಿತಾ ಮಿಸ್ಕಿತ್, ಶಾಂತಲಾ ಗಟ್ಟಿ, ಕವಿತಾ ವಾಸು, ಸುರೇಖಾ ಚಂದ್ರಹಾಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...