ಕೊಪ್ಪಳ | ಜಾತಿ ದೌರ್ಜನ್ಯ: ದಲಿತರು ಬಂದರೆ ಹೋಟೆಲ್, ಕ್ಷೌರದ ಅಂಗಡಿಗೆ ಬೀಗ ಹಾಕುವ ಸವರ್ಣೀಯರು

Date:

‘ದಲಿತರು ಬರುವರು ದಾರಿ ಬಿಡಿ, ದಲಿತರ ಕೈಗೆ ರಾಜ್ಯ ಕೊಡಿ..’ – ಇದು ದಲಿತ ಚಳುವಳಿ ದೇಶದಲ್ಲಿ ಅಬ್ಬರಿಸುತ್ತಿದ್ದ ಸಮಯದಲ್ಲಿ ಕವಿ ಡಾ. ಸಿದ್ದಲಿಂಗಯ್ಯ ಅವರು ಬರೆದ ಕ್ರಾಂತಿಗೀತೆ ಸಾಲು. ಶೋಷಿತ ದಲಿತರು ಸಮಾನತೆ, ಸ್ವಾತಂತ್ರ್ಯ, ಸ್ವಾಭಿಮಾನದ ಬದುಕಿನೊಂದಿಗೆ ರಾಜ್ಯವಾಳಬೇಕು ಎಂಬುದು ಈ ಸಾರಿ ತಾತ್ಪರ್ಯ. ಆದರೆ, ವಾಸ್ತವ ಇಂದಿಗೂ ಘೋರವಾಗಿದೆ. ದಲಿತರ ಮೇಲಿನ ಶೋಷಣೆ ಹೆಚ್ಚುತ್ತಿದೆ. ದಲಿತರು ಬಂದರೆಂಬ ಕಾರಣಕ್ಕೆ ಹೋಟೆಲ್‌ಗಳನ್ನೇ ಮುಚ್ಚುವಂತಹ ಅಮಾನವೀಯ ಘಟನೆಗಳು ಕರ್ನಾಟಕದಲ್ಲಿಯೂ ನಡೆಯುತ್ತಿವೆ.

ದಲಿತರಿಗೆ ಹೋಟೆಲ್‌ಗಳು, ಕ್ಷೌರದ ಅಂಗಡಿಗಳಲ್ಲಿ ಪ್ರವೇಶ ನಿರಾಕರಿಸಿರುವ ಘಟನೆಗಳು ಧಾರವಾಡ, ಗದಗ, ದಾವಣಗೆರೆ, ಮಂಡ್ಯ ಜಿಲ್ಲೆಗಳಲ್ಲಿ ವರದಿಯಾಗಿವೆ. ಅಂತದ್ದೇ ಮತ್ತೊಂದು ಘಟನೆ ಕೊಪ್ಪಳ ಜಿಲ್ಲೆಯ ಹಾಲವರ್ತಿ ಗ್ರಾಮದಲ್ಲಿಯೂ ನಡೆದಿದೆ. ಗ್ರಾಮದಲ್ಲಿ ದಲಿತರು ಹೋಟೆಲ್‌ಗೆ ಬಂದರೆ, ಹೋಟೆಲ್‌ ಬಂದ್‌ ಮಾಡಲಾಗುತ್ತಿರುವ ಜಾತಿ ದೌರ್ಜನ್ಯದ ಘಟನೆ ಬೆಳಕಿಗೆ ಬಂದಿದೆ.

ಗ್ರಾಮದ ಸವರ್ಣೀಯರು ಹೋಟೆಲ್‌ ಮತ್ತು ಕ್ಷೌರದ ಅಂಗಡಿಗಳಿಗೆ ದಲಿತರು ಪ್ರವೇಶಿಸುದನ್ನು ತಡೆಯುತ್ತಿರುವ ಬಗ್ಗೆ ದಲಿತ ಯುವಕರು ಪ್ರಶ್ನಿಸಿದ್ದು, ಹೋಟೆಲ್ ಮತ್ತು ಕ್ಷೌರದ ಅಂಗಡಿಗಳ ಮಾಲೀಕರನ್ನು ಬುಧವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತರಿಗೆ ಹೋಟೆಲ್‌ಗಳಿಗೆ ‘ಬಳಸಿ ಬಿಸಾಡುವ’ ತಟ್ಟೆಗಳನ್ನು ನೀಡುತ್ತಾರೆ. ಪ್ರಬಲ ಜಾತಿಯವರಿಗೆ ಉಕ್ಕಿನ ತಟ್ಟೆಯಲ್ಲಿ ಆಹಾರ ಕೊಡುತ್ತಾರೆ. ಕ್ಷೌರದ ಅಂಗಡಿಗಳಲ್ಲಿ ದಲಿತರಿಗೆ ಕ್ಷೌರ ಮಾಡುವುದಿಲ್ಲ. ಈ ದೌರ್ಜನ್ಯವನ್ನು ಪ್ರಶ್ನಿಸಿದರೆ, ಹೋಟೆಲ್, ಅಂಗಡಿಗಳನ್ನೇ ಮುಚ್ಚಿಕೊಂಡು ಹೋಗುತ್ತಾರೆ ಎಂದು ದಲಿತ ಯುವಕರು ಕಿಡಿಕಾರಿದ್ದಾರೆ.

“ದಲಿತ ಯುವಕನೊಬ್ಬ ನಡೆಯಲಾಗದ ಪರಸ್ಥಿತಿಯಲ್ಲಿದ್ದಾನೆ. ಆತನಿಗೆ ಕ್ಷೌರ ಮಾಡುವಂತೆ ಮನವಿ ಮಾಡಿದರೂ, ಕ್ಷೌರದ ಅಂಗಡಿ ಮಾಲೀಕ, ಕ್ಷೌರ ಮಾಡದೆ, ಅಂಗಡಿಗೆ ಬೀಗ ಹಾಕಿಕೋಂಡು ಹೋದರು. ಗ್ರಾಮದ ಕರೆಯ ನೀರನ್ನು ದಲಿತರು ಮುಟ್ಟಲು ಬಿಡುವುದಿಲ್ಲ. ಕೆರೆಗೆ ದಲಿತರು ಬರದಂತೆ ನೋಡಿಕೊಳ್ಳಲು ಕಾವಲುಗಾರರನ್ನು ನೇಮಿಸಲಾಗಿದೆ” ಎಂದು ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಘಟನೆ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಗುರುವಾರ ಗ್ರಾಮಕ್ಕೆ ಭೇಟಿ ನೀಡಿ, ಹೋಟೆಲ್ ಮತ್ತು ಕ್ಷೌರದ ಅಂಗಡಿಯ ಮಾಲೀಕನ್ನು ವಿಚಾರಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಗ್ರಾಮದಲ್ಲಿ ಸಭೆ ನಡೆಸುತ್ತೇವೆ” ಎಂದು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಹೇಳಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, “ಹೋಟೆಲ್‌ಗಳಲ್ಲಿ ದಲಿತರಿಗೆ ಪ್ರವೇಶ ನೀಡದೇ ಇರುವುದು ಅಕ್ಷಮ್ಯ. ಜಾತಿ ದೌರ್ಜನ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...