ಹುಬ್ಬಳ್ಳಿ | ನಿರಾಶ್ರಿತರಿಗೆ ನ್ಯಾಯ ಸಿಗದಿದ್ದರೆ ಹೋರಾಟ ಅನಿವಾರ್ಯ : ಕರಿಯಪ್ಪ ಗುಡಿಮನಿ

Date:

  • ನಮ್ಮ ಭೂಮಿ ನಮ್ಮ ಹಕ್ಕು ಭಿಕ್ಷೆಯಲ್ಲ, ನಮ್ಮ ವಸತಿ ನಮ್ಮ ಹಕ್ಕು ಭಿಕ್ಷೆಯಲ್ಲ
  • ವಸತಿಗಾಗಿ 94 ಮತ್ತು 94cc ಅರ್ಜಿ ಸಲ್ಲಿಸಿದ ವಸತಿಹೀನರಿಗೆ ನ್ಯಾಯ ನೀಡಬೇಕು.

ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ನ್ಯಾಯ ಸಿಗದೇ ಭೂ ವಂಚಿತರು ಸಂಕಷ್ಟದ ಜೀವನ ದೂಡುತ್ತಿದ್ದಾರೆ. ಕೂಡಲೇ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಸತಿಗಾಗಿ 94 ಮತ್ತು 94cc ಅರ್ಜಿಗಳನ್ನು ಸಲ್ಲಿಸಿದವರಿಗೆ ನ್ಯಾಯ ಕೊಡಬೇಕು. ಇಲ್ಲದಿದ್ದರೆ ವಸತಿಹೀನರನ್ನು ಸಂಘಟಿಸಿ ಉಗ್ರ ಹೋರಾಟಕ್ಕೆ ಅಣಿಗೊಳಿಸಲಾಗುವುದು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಕರಿಯಪ್ಪ ಗುಡಿಮನಿ ಎಚ್ಚರಿಕೆ ನೀಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಸತಿಹೀನ, ಭೂಮಿರಹಿತ ಬಡ ಜನರನ್ನು ವರ್ಗ, ಜಾತಿ, ಭೇದ ರಹಿತವಾಗಿ ಗುರುತಿಸಿ ಅವರಿಗೆ ಸಂವಿಧಾನಾತ್ಮಕವಾಗಿ ಸಿಗಬೇಕಾದ ಸೂರು ಒದಗಿಸುವುದು, ಸ್ವಾವಲಂಬನೆ ಜೀವನ ನಡೆಸಲು ಅವಶ್ಯಕವಾದ ಬೇಸಾಯದ ಭೂಮಿಯನ್ನು ಕೊಡಿಸುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಹೋರಾಟ ರೂಪಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆಗೆ ಸಮನ್ವಯ ಸಾಧಿಸಿ ನ್ಯಾಯ ಒದಗಿಸುವ ಗುರಿ ಹೊಂದಿದ್ದೇವೆ” ಎಂದರು.

“ನಮ್ಮ ಭೂಮಿ ನಮ್ಮ ಹಕ್ಕು, ಭಿಕ್ಷೆಯಲ್ಲ, ನಮ್ಮ ವಸತಿ ನಮ್ಮ ಹಕ್ಕು ಭಿಕ್ಷೆಯಲ್ಲ ಎಂಬ ಘೋಷಣೆಯೊಂದಿಗೆ ಹೋರಾಟವನ್ನು ಮುನ್ನಡೆಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದಾಧಿಕಾರಿಗಳ ಆಯ್ಕೆ:

ಮಂಜುನಾಥ ಕೊಂಡಪಲ್ಲಿ (ಜಿಲ್ಲಾ ಸಂಚಾಲಕರು), ಸಂತೋಷ ಚಲವಾದಿ, ಸರಸ್ವತಿ ಕಟ್ಟಿಮನಿ, ಹುಸೇನಬಾಷಾ ತಳೇವಾಡ (ಸದಸ್ಯರು), ಲಕ್ಷಣ ಬಕ್ಕಾಯ (ಕಾನೂನು ಸಲಹೆಗಾರ), ನಾಗೇಶ ಕತ್ರಿಮಾಲ (ಜಿಲ್ಲಾ ಖಜಾಂಚಿ), ಇಂದುಮತಿ ಸಿರಗಾವಿ ಹಾಗೂ ಮಮತಾ ಅರಿವೆಡು (ಸಹಾಯಕ ಖಜಾಂಚಿ), ಜನ್ನೆ ಜೈರಾಮ ಹಾಗೂ ಚಂದ್ರಕಾಂತ ಯಾದವ (ಜಿಲ್ಲಾ ಸಂಘಟನಾ ಸಂಯೋಜಕ) ಅವರನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಧಾರವಾಡ ಜಿಲ್ಲಾ ಸಮನ್ವಯ ಸಮಿತಿ ನೂತನ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...