ರಾಜ್ಯದಲ್ಲಿ ಅಕ್ಕಿ ಸಿಕ್ಕರೆ ಬಿ ವೈ ವಿಜಯೇಂದ್ರ ಕೊಡಿಸಲಿ: ಸಿಎಂ ಸಿದ್ದರಾಮಯ್ಯ

Date:

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಜೊತೆ ನಾನೇ ಖುದ್ದು ಮಾತಾಡಿದ್ದೇನೆ. ತಮ್ಮ ರಾಜ್ಯದಲ್ಲಿ ಅಕ್ಕಿ ದಾಸ್ತಾನು ಇಲ್ಲವೆಂದು ಅವರು ಹೇಳಿದ್ದಾರೆ. ಹೀಗಾಗಿ ಆಂಧ್ರಪ್ರದೇಶ ಸರ್ಕಾರದ ಜೊತೆ ಚರ್ಚಿಸಲು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಶಕ್ತಿಭವನದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, “ಛತ್ತೀಸ್‌ಘಡ ರಾಜ್ಯದವರು 1.5 ಮೆಟ್ರಿಕ್ ಲಕ್ಷ ಟನ್ ಅಕ್ಕಿ ಕೊಡಲು ಸಮ್ಮತಿಸಿದ್ದಾರೆ. ಆದರೆ ದರ ಸ್ವಲ್ಪ ದುಬಾರಿ ಇದೆ. ಸಾಗಣೆ ವೆಚ್ಚವೂ ಹೆಚ್ಚಾಗಲಿದೆ. ಈ ಬಗ್ಗೆ ಇಂದು (ಜೂ.17) ಸಂಜೆ ಸಭೆ ನಡೆಸಿ ನಿರ್ಧಾರ ತಿಳಿಸುತ್ತೇವೆ” ಎಂದರು.

ಕಮಿಷನ್‌ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿಸುತ್ತಿದ್ದಾರೆ ಎಂದು ಶಾಸಕ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ರಾಜ್ಯದಲ್ಲೇ ಅಕ್ಕಿ ಸಿಗುವುದಿದ್ದರೆ ವಿಜಯೇಂದ್ರ ಅವರೇ ಮುಂದೆ ನಿಂತು ಕೊಡಿಸಲಿ. ಅವರ ಮಿಲ್‌ನಲ್ಲಿ ಎಷ್ಟು ಅಕ್ಕಿ ಇದೆ ಅದನ್ನೂ ಕೊಡಲಿ. ಬಿಜೆಪಿಯವರು ಸುಮ್ಮನೆ ಮಾತನಾಡುತ್ತಾರೆ” ಎಂದು ಗರಂ ಆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...