ಕಾಂಗ್ರೆಸ್ ನಾಯಕರು ಸತ್ಯ ಹರಿಶ್ಚಂದ್ರರೇ ಆಗಿದ್ದರೆ 2013ರಿಂದ ತನಿಖೆ ಮಾಡಿಸಲಿ: ಕೆ.ಸುಧಾಕರ್ ಸವಾಲು

Date:

  • 2013ರ ಅವಧಿಯಲ್ಲಿ ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿತ್ತು
  • ವಿಚಾರಣೆಗಾಗಿ ಸಮಿತಿ ರಚಿಸಿ ದ್ವೇಷ ರಾಜಕಾರಣ ಮಾಡುತ್ತಿದೆ ಕಾಂ‌ಗ್ರೆಸ್‌

2013ರ ಅವಧಿಯಲ್ಲಿ ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿತ್ತು. ಕಾಂಗ್ರೆಸ್ ನಾಯಕರು ಸತ್ಯ ಹರಿಶ್ಚಂದ್ರರೇ ಆಗಿದ್ದರೆ 2013ರಿಂದ ಈವರೆಗೂ ತನಿಖೆ ಮಾಡಿಸಲಿ. ಆಗ ಕಾಂಗ್ರೆಸ್‌ನವರು ಕೂಡ ನ್ಯಾಯಬದ್ದವಾಗಿ ಇದ್ದಾರೆ ಎಂದು ಜನರು ಒಪ್ಪಿಕೊಳ್ಳುತ್ತಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಸವಾಲು ಹಾಕಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ, “ಕೆಲಸವಿಲ್ಲದ ಕಾಂಗ್ರೆಸ್ ನಾಯಕರು ವಿಚಾರಣೆಗಾಗಿ ಸಮಿತಿ ರಚಿಸಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ತಮ್ಮ ಸರ್ಕಾರದ ಅಕ್ರಮ ಬಗ್ಗೆ ತನಿಖೆ ಮಾಡಿಸಲು ಎದೆಗಾರಿಕೆ ಇಲ್ಲ” ಎಂದು ಕಿಡಿಕಾರಿದರು.

“ಸರ್ಕಾರ ಎಷ್ಟೇ ವಿಚಾರಣಾ ಸಮಿತಿ ರಚಿಸಿದರೂ, ಅದನ್ನು ಎದುರಿಸುವ ತಾಕತ್ತು ಹಾಗೂ ಮನೋಸ್ಥೆರ್ಯ ನಮಗೆ ಇದೆ. ಕಳ್ಳರೇ ಸಾಚಾಗಳಂತೆ ಓಡಾಡುತ್ತಿರುವಾಗ, ಸಾಚಾಗಳಾದ ನಾವೇಕೆ ಹೆದರಬೇಕು? ನಮ್ಮ ವಿರುದ್ಧ ಒಂದಲ್ಲ, ನಾಲ್ಕು ವಿಚಾರಣೆಗಳನ್ನು ಮಾಡಿದರೂ ಹೆದರಿಕೆ ಇಲ್ಲ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಾವು ಯಾರೂ ತಪ್ಪು ಮಾಡಿಲ್ಲ ಎಂದು ವಿಶ್ವಾಸದಿಂದ ಹೇಳುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

“ಕೋವಿಡ್ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂಜಾನೆ ಐದೂವರೆಗೆ ಕರೆ ಮಾಡಿ ಸಭೆ ಕರೆಯುತ್ತಿದ್ದರು. ಆಗ ಕಾಂಗ್ರೆಸ್ ನಾಯಕರು ಮಾಸ್ಕ್ ಧರಿಸಿಕೊಂಡು, ಮನೆಗೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕಿಕೊಂಡು ಕುಳಿತಿದ್ದರು. ಆದರೆ ನಾವೆಲ್ಲರೂ ಆಸ್ಪತ್ರೆ, ರೋಗಿಗಳ ಬಳಿ ತೆರಳಿ ಪರಿಶೀಲನೆ ನಡೆಸಿ ರಾಜ್ಯದ ಜನರ ರಕ್ಷಣೆ ಮಾಡಿದ್ದೇವೆ. ಬಿಜೆಪಿ ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರಣೆ ಮಾಡಿದರೂ ನಾವು ಹೆದರುವುದಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಆದರೆ ಈಗಿನ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಭ್ರಷ್ಟಾಚಾರ ಆರಂಭಿಸಿದೆ” ಎಂದು ವಾಗ್ದಾಳಿ ನಡೆಸಿದರು. ‌

“ಸರ್ಕಾರ ಯಾರಪ್ಪಂದೂ ಅಲ್ಲ. ಇದು ರಾಜ್ಯದ ಜನರ ಸರ್ಕಾರ. ತೆರಿಗೆ ಹಣ ಆರೂವರೆ ಕೋಟಿ ಜನರದ್ದು. ಯಾವುದೇ ಪಂಚಾಯಿತಿಗೆ ಅನುದಾನವನ್ನು ಖೋತಾ ಮಾಡಲು ಸರ್ಕಾರಕ್ಕೆ ಸಾಧ್ಯವಿಲ್ಲ. ಗ್ಯಾರಂಟಿ ಗಿಮಿಕ್‌ ಮಾಡಿ 2 ಸಾವಿರ ರೂಪಾಯಿಗೆ ರಾಜ್ಯವನ್ನು ಮಾರಾಟ ಮಾಡುವ ಸ್ಥಿತಿ ಬಂದಿದೆ. ಕಾಂಗ್ರೆಸ್‌ ಸರ್ಕಾರ ಈಗಲೇ 85 ಸಾವಿರ ಕೋಟಿ ರೂ. ಸಾಲ ಮಾಡಿದ್ದು, ಇನ್ನು ಐದು ವರ್ಷದಲ್ಲಿ 5 ಲಕ್ಷ ಕೋಟಿ ರೂ. ಸಾಲ ಆಗಲಿದೆ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...