ಹೋಬಳಿವಾರು ಸಭೆ ಮಾಡಿ ಸಮಸ್ಯೆಗಳು ಇದ್ದರೆ ಪರಿಹಾರಕ್ಕೆ ಕ್ರಮ: ಅಧ್ಯಕ್ಷ ವಿ.ಎಂ ಮುನಿಯಪ್ಪ

Date:

ಕೋಲಾರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಹೋಬಳಿವಾರು ಸಾಧ್ಯವಾದರೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಭೆಗಳನ್ನು ನಡೆಸುವ ಮೂಲಕ ಸಮಸ್ಯೆಗಳಿದ್ದಲ್ಲಿ ಬಗೆಹರಿಸುವ ಕೆಲಸ ಮಾಡಲು ಅಧಿಕಾರಿಗಳು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವೇಮಗಲ್ ವಿ.ಎಂ ಮುನಿಯಪ್ಪ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯೋಜನೆಯ ಪ್ರಾರಂಭದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಿತ್ತು ಕ್ರಮೇಣ ಸಮಸ್ಯೆಗಳು ಒಂದೊಂದಾಗಿ ಪರಿಹಾರ ಮಾಡಲಾಗುತ್ತಿದೆ ಇದೇ ರೀತಿಯಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸಮಿತಿ ಸದಸ್ಯರೊಂದಿಗೆ ಅಧಿಕಾರಿಗಳು ಜವಾಬ್ದಾರಿ ವಹಿಸಬೇಕಾಗಿದೆ ಎಂದರು.

ತಾಲೂಕು ವ್ಯಾಪ್ತಿಯಲ್ಲಿ ಬಡವರ ಬಿಪಿಎಲ್ ಕಾರ್ಡ್‌ಗಳೂ ರದ್ದಾಗಿವೆ ಕೆಲವರಿಗೆ ತಾಂತ್ರಿಕ ದೋಷಗಳಿಂದ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿಲ್ಲ ಅಕ್ಕಿ ವಿತರಣೆಯಲ್ಲಿ ಸಹ ದೂರುಗಳಿವೆ ಆದ್ದರಿಂದ ಪ್ರತಿ ಹೋಬಳಿವಾರು ಸಾಧ್ಯವಾದರೆ ಗ್ರಾಪಂ ವ್ಯಾಪ್ತಿಯಲ್ಲಿ ಸಮಸ್ಯೆಗಳು ಗುರುತಿಸಿ ಅವುಗಳನ್ನು ಅಲ್ಲಿಯೇ ಬಗೆಹರಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಜನಪರ ಕಾಳಜಿಯಿಂದ ಹಾಗೂ ಅಭಿವೃದ್ದಿ ಉದ್ದೇಶದಿಂದ ಇಂತಹ ಅನೇಕ ಯೋಜನೆಗಳನ್ನು ಜಾರಿ ಮಾಡುತ್ತಿದ್ದು, ಈ ನಿಟ್ಟಿನಿಂದ ತಾಲ್ಲೂಕು ಮಟ್ಟದ ಪ್ರಾಧಿಕಾರದ ಸದಸ್ಯರುಗಳು ಕಾರ್ಯಕ್ಷಮತೆಯಿಂದ ಕೆಲಸ ಮಾಡಬೇಕು. ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗದವರೆಗೂ ಮೀಸಲಾಗಿದೆ. ಆದರೆ ದುರ್ಬಲ ಹಾಗೂ ಬಡವರಿಗೆ ಸರಿಯಾದ ಮಾಹಿತಿ ಇಲ್ಲದೆ ಪಡೆಯಲು ಸಾಧ್ಯವಿಲ್ಲ ಜನರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಪ್ರಯತ್ನದಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಆಗ ಮಾತ್ರವೇ ಸರ್ಕಾರದ ಉದ್ದೇಶ ಈಡೇರಲಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಕುಂಬಾರ ಮಹಾಸಭಾ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿ ಡಾ.ಕೆ.ನಾಗರಾಜ್ ನೇಮಕ

ಸಭೆಯಲ್ಲಿ ತಾಲೂಕು ಪಂಚಾಯತಿ ಇಒ ಮಂಜುನಾಥ್, ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಮಿತಿ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...