ಇಳಕಲ್ | ಶಾಲೆಗಳಲ್ಲಿ ಮಹಿಳಾ ಶಿಕ್ಷಕರಿದ್ದರೆ ವಿದ್ಯಾರ್ಥಿಗಳ ಸಾಧನೆಗೆ ಅನುಕೂಲ: ನಿವೃತ್ತ ಶಿಕ್ಷಕ ಗಂಗಯ್ಯ ಹಿರೇಮಠ

Date:

ಶಾಲೆಗಳಲ್ಲಿ ಹೆಚ್ಚಾಗಿ ಮಹಿಳಾ ಶಿಕ್ಷಕರಿದ್ದರೆ, ಅವರು ವಿದ್ಯಾರ್ಥಿಗಳಿಗೆ ಪ್ರೀತಿ, ವಾತ್ಸಲ್ಯ, ಮಮತೆಯಿಂದ ಬೋಧಿಸುತ್ತಾರೆ ಅದನ್ನು ವಿದ್ಯಾರ್ಥಿಗಳು ಗ್ರಹಿಸುವ ಮೂಲಕ ಪರೀಕ್ಷೆಯಲ್ಲಿ ಅಧಿಕ ಅಂಕ ಸಂಪಾದಿಸುತ್ತಾರೆ. ಮಹಿಳಾ ಶಿಕ್ಷಕರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಅನುಕೂಲ ಎಂದು ನಿವೃತ್ತ ಶಿಕ್ಷಕ ಗಂಗಯ್ಯ ಮಹಾಂತಯ್ಯ ಹಿರೇಮಠ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಇಳಕಲ್‌ನ ಬಸವೇಶ್ವರ ಶಿಕ್ಷಣ ಸಮಿತಿಯವರು ನಡೆಸುತ್ತಿರುವ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸ ವರ್ಷದ ಆಚರಣೆ ಅಂಗವಾಗಿ ಆಯುರ್ವೇದ ವೈದ್ಯ ದಿ. ಸೋಮನಾಥ ಹಂಚಾಟೆ ಅವರ ಸ್ಮರಣಾರ್ಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಳೆದ 22 ವರ್ಷಗಳಿಂದಲೂ ಡಾ. ಮಹೇಶ ಹಂಚಾಟೆ ಹಾಗೂ ಅವರ ಕುಟುಂಬ ಪರಿವಾರದವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಡ ಮಾಡುವ ದೋಸೆ, ಕೇಕ್, ನೋಟ್ ಪುಸ್ತಕ ಮತ್ತು ಪೆನ್ನುಗಳನ್ನು ವಿತರಿಸಿ ಅವರು ಮಾತನಾಡಿದರು.

ಬಸವೇಶ್ವರ ಶಿಕ್ಷಣ ಸಮಿತಿಯ ಕಾರ್ಯದರ್ಶಿ ರಾಜೇಶ್ವರ ಎಂ. ಹಂಚಾಟೆ ಮಾತನಾಡಿ, “ಹೊಸ ವರ್ಷವನ್ನು ಜೀವನದಲ್ಲಿ ಒಂದೇ ದಿನಕ್ಕೆ ಸೀಮಿತಗೊಳಿಸದೆ, ವರ್ಷದುದ್ದಕ್ಕೂ ಹರ್ಷವನ್ನು ಆಚರಿಸಿಕೊಂಡು ಬನ್ನಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ವಿಬಿ ಜಿ ರಾಮ್‌ ಜಿ ಅಂಗೀಕಾರ: ಕೇಂದ್ರದ ವಿರುದ್ಧ ಡಿ.22ರಂದು ಬೃಹತ್ ಪ್ರತಿಭಟನೆ

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಎಂ ಎಸ್ ಅಂಗಡಿ, ಸಮಿತಿ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಅಗ್ನಿ, ಡಾ. ಮಹೇಶ ಹಂಚಾಟೆ, ಮಹಾಂತೇಶ ಗೊರಜನಾಳ, ಗುರುನಗೌಡ ಗೌಡರ, ಸಮಾಜ ಸೇವಕ ರಮೇಶ ಹಂಚಾಟೆ, ಆರೋಗ್ಯ ಇಲಾಖೆಯ ನಿವೃತ್ತ ನೌಕರ ನಾರಣಪ್ಪ ಅಂಬೋರೆ, ಶಾಲೆಯ ಮುಖ್ಯಗುರು ಸಿದ್ದು ಕೊಪ್ಪದ, ವಿದ್ಯಾರ್ಥಿ ಪ್ರತಿನಿಧಿ ಪ್ರವೀಣ ಮಧುರಕರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...