ಯಾದಗಿರಿ ನಗರಸಭೆಯಲ್ಲಿ ಅಕ್ರಮ ನೋಂದಣಿ : ಮೂವರ ಸಿಬ್ಬಂದಿ ಬಂಧನ

Date:

ಬೇರೆಯವರ ಹೆಸರಿಗೆ ಅಕ್ರಮವಾಗಿ ನಿವೇಶನ ನೋಂದಣಿ ಮಾಡಿಕೊಟ್ಟು, ದಾಖಲೆಗಳನ್ನು ನಾಶಪಡಿಸಲು ಮುಂದಾಗಿದ್ದ ಆರೋಪದಡಿ ಯಾದಗಿರಿ ನಗರಸಭೆಯ ಇಬ್ಬರು ಹಾಗೂ ಶಹಾಪುರದ ನಗರಸಭೆಯ ಒಬ್ಬ ಸಿಬ್ಬಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಯಾದಗಿರಿ ನಗರಸಭೆಯ ಕಂದಾಯ ನಿರೀಕ್ಷಕ ಮಾನಪ್ಪ ಬಡಿಗೇರ, ಪ್ರಭಾರ ಆರ್‌ಐ ಮೈನೋದ್ದೀನ್ ಮಹಮ್ಮದ್‌ ಹಜರತ್‌ ಹಾಗೂ ಶಹಾಪುರ ನಗರಸಭೆಯಲ್ಲಿ ನೀರು ಸರಬರಾಜು ವಿಭಾಗದ ಮೇಲ್ವಿಚಾರಕ ಹಣಮಂತಪ್ಪ ಆಶನಾಳ ಬಂಧಿತರು ಎಂದು ತಿಳಿದು ಬಂದಿದೆ.

ಮಲ್ಲಮ್ಮ ಎಂಬುವವರಿಗೆ ನಿವೇಶನವನ್ನು ಅಕ್ರಮವಾಗಿ ನೋಂದಣಿ ಮಾಡಿಕೊಟ್ಟ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಚಾರಣೆ ನಡೆದಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆದೇಶವಾಗಿದೆ. ಈ ವಿಷಯ ತಿಳಿದ ಈ ಮೂವರು ಸಿಬ್ಬಂದಿ ರಜೆ ದಿನವಾದ ಭಾನುವಾರ (ಜೂ.1) ಅಕ್ರಮವಾಗಿ ನಗರಸಭೆ ಕಚೇರಿಗೆ ನುಗ್ಗಿ ಅಲ್ಲಿನ ದಾಖಲೆಗಳನ್ನು ಮರೆಮಾಚಿ ನಾಶಪಡಿಸುವ ಹುನ್ನಾರಕ್ಕೆ ಮುಂದಾಗಿದ್ದಾರೆ ಎಂದು ಯಾದಗಿರಿ ನಗರಸಭೆ ಪೌರಾಯುಕ್ತ ಉಮೇಶ ಚವಾಣ್‌ ಅವರು ನಗರ ಠಾಣೆಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾದಗಿರಿ ಸೀಮಾಂತರದ ಸರ್ವೆ ನಂ.151ರಲ್ಲಿನ ನಿವೇಶನ ಸಂಖ್ಯೆ 42 ಅನ್ನು ಮಲ್ಲಮ್ಮ ರಾಮಣ್ಣ ಅವರ ಹೆಸರಿಗೆ ಮಾಡಿಕೊಟ್ಟಿದ್ದ ಈ ಮೂವರು, ಭಾನುವಾರ ಸಂಜೆ 4ರ ಸುಮಾರಿಗೆ ನಗರಸಭೆ ಕಚೇರಿಗೆ ಬಂದು, ಅಲ್ಲಿದ್ದ ಕಾವಲುಗಾರ ತಿಪ್ಪಣ್ಣ ಅವರನ್ನು ಬೆದರಿಸಿ ಕಚೇರಿ ಬೀಗ ತೆಗೆದುಕೊಂಡು ಕೋಣೆಗಳಿಗೆ ಹೋಗಿ ಹಲವು ಕಡತಗಳನ್ನು ಪರಿಶೀಲಿಸಿ ಅಕ್ರಮ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ವೇಳೆ ಒಬ್ಬ ಸಾರ್ವಜನಿಕ ವ್ಯಕ್ತಿ ಅಲ್ಲಿರುವುದು ಕಾಣಿಸಿದೆ ಎಂದು ನಗರಸಭೆ ಪೌರಾಯುಕ್ತರು ದೂರಿನಲ್ಲಿ ತಿಳಿಸಿದ್ದಾರೆ

ಇದನ್ನೂ ಓದಿ : ಕಲಬುರಗಿ | ಆನ್‌ಲೈನ್ ಗೇಮಿಂಗ್‌ : ಸಾಲ ತೀರಿಸಲಾಗದೆ ವ್ಯಕ್ತಿ ಆತ್ಮಹತ್ಯೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...