ಚಿಕ್ಕಬಳ್ಳಾಪುರ | ಅಕ್ರಮ ಟೋಲ್‌ ವಸೂಲಿಗೆ ಬೇಸತ್ತ ಜನ, ಇಶಾ ಫೌಂಡೇಶನ್‌ ವಿರುದ್ಧ ಪ್ರತಿಭಟನೆ

Date:

ಇಶಾ ಫೌಂಡೇಶನ್‌ನಿಂದ ಸರಕಾರಿ ಜಮೀನು ಒತ್ತುವರಿ ಮಾಡಲಾಗಿದೆ, ಸರಕಾರಿ ಜಾಗಕ್ಕೆ ಅಕ್ರಮವಾಗಿ ಟೋಲ್‌ ವಸೂಲಿ ಮಾಡಲಾಗುತ್ತಿದೆ, ಇಶಾಗೆ ಬರುವ ಪ್ರವಾಸಿಗರಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಶನಿವಾರ ಆವಲಗುರ್ಕಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ‌

ಶನಿವಾರ ಬೆಳಗ್ಗೆ ಇಶಾ ಫೌಂಡೇಶನ್‌ ಬಳಿ ಜಮಾಯಿಸಿದ 500ಕ್ಕೂ ಅಧಿಕ ಮಂದಿ ರೈತ ಸಂಘ ಮತ್ತು ದಲಿತ ಮುಖಂಡರು ಸ್ಥಳೀಯ ರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಇಶಾ ಫೌಂಡೇಶನ್‌ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಸ್ಥಳೀಯ ಮುಖಂಡರು, ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಬಳಿ ಇಶಾ ಫೌಂಡೇಶನ್‌ ಸಂಸ್ಥೆಯಿಂದ ಸರಕಾರಿ ಭೂಮಿ ಒತ್ತುವರಿ ಮಾಡಲಾಗಿದೆ. ಸರ್ವೆ ನಂಬರ್‌ 174, 175 ಮತ್ತು 137ರಲ್ಲಿ ಸಾಕಷ್ಟು ಭೂಮಿಯನ್ನು ಒತ್ತುವರಿ ಮಾಡಿ ರಸ್ತೆ ನಿರ್ಮಿಸಲಾಗಿದೆ. ಅಲ್ಲದೆ ಟೋಲ್‌ ನಿರ್ಮಿಸಿ ಇಲ್ಲಿಗೆ ಬರುವ ವಾಹನಗಳಿಂದ ಟೋಲ್‌ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಇಶಾ ಫೌಂಡೇಶನ್ ಅಕ್ರಮಗಳ ತನಿಖೆಗೆ ಹೈಕೋರ್ಟ್‌ ಆದೇಶ

ಒತ್ತುವರಿ ಮಾಡಿರುವ ಸರಕಾರಿ ಭೂಮಿಯನ್ನು ವಶಕ್ಕೆ ಪಡೆಯಬೇಕು. ಸರಕಾರಿ ಜಾಗಕ್ಕೆ ಟೋಲ್ ವಸೂಲಿ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ರಾತ್ರಿ ವೇಳೆ ಇಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಂದ ಸ್ಥಳೀಯ ರೈತರು ಬೇಸತ್ತು ಹೋಗಿದ್ದು, ಎಲ್ಲಾ ಅಕ್ರಮಗಳಿಗೂ ಶೀಘ್ರ ಬ್ರೇಕ್‌ ಹಾಕಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಬಳ್ಳಾಪುರ ತಹಶೀಲ್ದಾರ್‌ ಅನಿಲ್, ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಿಸುವಂತೆ ಇಶಾ ಫೌಂಡೇಶನ್‌ ಅವರಿಗೆ ನೋಟೀಸ್‌ ನೀಡಲಾಗಿದೆ. ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...