ವರ್ಗಾವಣೆ ದಂಧೆ | ಹಗಲು ದರೋಡೆಗೆ ಇಳಿದ ಕಾಂಗ್ರೆಸ್‌ ಬಗ್ಗೆ ದಾಖಲೆ ಕೊಡುವೆ: ಎಚ್‌ ಡಿ ಕುಮಾರಸ್ವಾಮಿ

Date:

  • ದಾಖಲೆ ನೋಡಿದ ಮೇಲೆ ಆ ಸಚಿವರನ್ನು ಸಂಪುಟದಿಂದ ವಜಾ ಮಾಡುತ್ತೀರಾ?
  • ‘ಕಾಂಗ್ರೆಸ್‌ ಯೋಗ್ಯತೆಗೆ ಎರಡು ವರ್ಷ ಬಿಜೆಪಿ ವಿರುದ್ಧ ಒಂದೇ ಒಂದು ದಾಖಲೆ ನೀಡಲಿಲ್ಲ’

ಅಧಿಕಾರಕ್ಕೆ ಬಂದ ಒಂದೂವರೆ ತಿಂಗಳು ಆಗಿಲ್ಲ. ಆಗಲೇ ಕಾಂಗ್ರೆಸ್‌ನವರು ಹಗಲು ದರೋಡೆಗೆ ಇಳಿದಿದ್ದಾರೆ. ವರ್ಗಾವಣೆ ದಂಧೆಗೆ ಎಷ್ಟು ಹಣ ನಿಗದಿ ಮಾಡಿದ್ದೀರೆಂದು ಗೊತ್ತಿದೆ. ಟೈಮ್ ಬಂದಾಗ ಎಲ್ಲ ದಾಖಲೆ ಕೊಡುವೆ. ಸದನದಲ್ಲೇ ದಾಖಲೆ ನೀಡುವೆ, ನಾನು ನೀಡುವ ದಾಖಲೆ ನೋಡಿ ಆ ಸಚಿವರನ್ನು ಸಂಪುಟದಿಂದ ವಜಾ ಮಾಡುತ್ತೀರಾ? ಎಂದು ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಕಮಿಷನ್​ ಆರೋಪ ಕುರಿತು ದಾಖಲೆ ಕೊಟ್ಟು ಆರೋಪ ಮಾಡಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದ ಹೇಳಿಕೆಗೆ ಕುಮಾರಸ್ವಾಮಿ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ.

“ಬಿಜೆಪಿ ಸರ್ಕಾರದ ವಿರುದ್ಧ ಎರಡು ವರ್ಷ ಭ್ರಷ್ಟಾಚಾರ ಬಗ್ಗೆ ಆರೋಪ ಮಾಡಿ, ಪ್ರತಿದಿನ ತನಿಖೆ ತನಿಖೆ ಎಂದು ಗುಮ್ಮ ತೋರಿಸುತ್ತಿದ್ದರು. ಅವರ ಯೋಗ್ಯತೆಗೆ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಯಾವುದೇ ಒಂದೇ ಒಂದು ದಾಖಲೆ ನೀಡಿರಲಿಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ಸಚಿವರು ದಾಖಲೆ ಕೊಡಲಿ ಎಂದು ಕೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ದಾಖಲೆ ಕೊಡುತ್ತೇನೆ ತನಿಖೆ ಮಾಡೋ ಧಮ್ ನಿಮಗೆ ಇದೆಯಾ? ನನ್ನ ಕಾಲದಲ್ಲಿ ನಡೆದ ವರ್ಗಾವಣೆ ಬಗ್ಗೆಯೂ ತನಿಖೆ ಮಾಡಲಿ” ಎಂದು ಆಗ್ರಹಿಸಿದರು.

“ಕೆಲವರು ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಆದರೆ ಈಗಾಗಲೇ ಡಿಕೆ ಶಿವಕುಮಾರ್ ಸಿಎಂ ಕುರ್ಚಿಗೆ ಟವೆಲ್ ಹಾಕಿದ್ದಾರೆ. ನೋಡೋಣ ಎಷ್ಟು ದಿನ ಇರುತ್ತೆ ಈ ಸರ್ಕಾರ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...