ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಭರವಸೆ ನೀಡಿದರು.
ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ವಕೀಲ ಸಮೂಹ ಈ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ನಾನೂ ಬೆಂಬಲ ಸೂಚಿಸಿ ವಿಧಾನಸಭೆಯಲ್ಲಿ ವಕೀಲ ಸಮೂಹದ ಪರವಾಗಿ ಧ್ವನಿ ಎತ್ತಿದ್ದೆ. ಈಗ ನಾವೇ ಅಧಿಕಾರಕ್ಕೆ ಬಂದಿದ್ದೇವೆ. ಈಗ ಈ ಕಾಯ್ದೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಬದ್ದವಾಗಿದ್ದೇವೆ ಎಂದರು.
ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯಮಂತ್ರಿ @siddaramaiah ಅವರ ಮಾತುಗಳು:
— CM of Karnataka (@CMofKarnataka) May 31, 2023
ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ವಕೀಲ ಸಮೂಹ ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಆ ಪ್ರತಿಭಟನೆಗೆ ನಾನೂ ಬೆಂಬಲ ಸೂಚಿಸಿ ವಿಧಾನಸಭೆಯಲ್ಲಿ… pic.twitter.com/fhANMX2iuN
ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...
ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...
ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...
ಇದೇ ಸಂದರ್ಭದಲ್ಲಿ ವಕೀಲರ ಸಂಘ “ವಕೀಲರ ವಿಮೆ ಯೋಜನೆಯನ್ನೂ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆಯೂ ಸಮಗ್ರವಾಗಿ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.




