- ಮೇಕೆದಾಟು ಯೋಜನೆ ಬಗ್ಗೆ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದೇವೆ
- ಮೇಕೆದಾಟು ಜಲಾಶಯ ನಿರ್ಮಾಣವಾದಲ್ಲಿ ಕುಡಿಯುವ ನೀರು ಪೂರೈಕೆ
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಂದರೆ ತಮಿಳುನಾಡಿಗೆ ನೀರು ಹರಿಸುವ ಸಮಸ್ಯೆಗೆ ಪರಿಹಾರ ಸಿಗಲಿದೆ. ಮೇಕೆದಾಟು ಜಲಾಶಯ ನಿರ್ಮಾಣವಾಗಿದ್ದರೆ ತಮಿಳುನಾಡಿಗೆ ನೀರು ಹರಿಸುವ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ” ಎಂದರು.
ಮೇಕೆದಾಟು ಯೋಜನೆ ಬಗ್ಗೆ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದೇವೆ. ಮೇಕೆದಾಟು ಜಲಾಶಯ ನಿರ್ಮಾಣವಾದರೆ ಅದರಲ್ಲಿ ಸಂಗ್ರಹಿಸುವ ನೀರನ್ನು ನಾವು ಕುಡಿಯುವ ನೀರು ಪೂರೈಕೆ ಉದ್ದೇಶಕ್ಕೆ ಮಾತ್ರ ಬಳಸಬಹುದು. ಉಳಿದಂತೆ ಅಗತ್ಯ ಸಂದರ್ಭಗಳಲ್ಲಿ ತಮಿಳುನಾಡಿಗೆ ನೀರು ಹರಿಸಲು ಅನುಕೂಲವಾಗುತ್ತದೆ” ಎಂದರು.
ಈ ಸುದ್ದಿ ಓದಿದ್ದೀರಾ? ಬೀದರ್ | ರಾಜ್ಯ ಬಿಜೆಪಿ ನಾವಿಕನಿಲ್ಲದ ದೋಣಿಯಾಗಿದೆ: ಸಚಿವ ಕೃಷ್ಣಭೈರೇಗೌಡ
“ತನ್ನ ಪಾಲಿನ ನೀರನ್ನು ಯಾವ ಉದ್ದೇಶಕ್ಕೆ ಬೇಕಿದ್ದರೂ ತಮಿಳುನಾಡು ಬಳಸಬಹುದು. ಅದನ್ನು ತಡೆಯಲು ಅಧಿಕಾರ ನಮಗಿಲ್ಲ. ತಮಿಳುನಾಡಿಗೆ ನೀರು ಹರಿಸುವುದಕ್ಕೆ ರಾಜ್ಯದಲ್ಲಿ ಕೆಲವರ ವಿರೋಧವಿದೆ. ಆದರೆ, ನ್ಯಾಯಾಲಯದ ಆದೇಶ ಪಾಲಿಸಬೇಕಲ್ಲವೇ?” ಎಂದು ಹೇಳದರು.





