ಬೀದರ್‌ | ʼನಿಗರಾಣಿʼ ವಿನೂತನ ಯೋಜನೆ ಜಾರಿ: ಎಸ್‌ಪಿ ಚನ್ನಬಸವಣ್ಣ

Date:

ಬೀಗ ಹಾಕಿದ ಮನೆಗಳ ಮೇಲೆ ಗಸ್ತು ಸಿಬ್ಬಂದಿ ನಿಗಾ ಇಡಲು ಬೀದರ ಜಿಲ್ಲಾ ಪೊಲೀಸ್ ವತಿಯಿಂದ ವಿನೂತನವಾದ ‘ನಿಮ್ಮ ಮನೆ ನಮ್ಮ ನಿಗರಾಣಿ’ ಯೋಜನೆಯನ್ನು  ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಮನೆ ಕಳ್ಳತನ ಪ್ರಕರಣಗಳು ಈ ಯೋಜನೆಯಿಂದ ಜಿಲ್ಲೆಯಲ್ಲಿ ಕಡಿಮೆಯಾಗಲಿವೆ. ರಾಜ್ಯದಲ್ಲಿ ವಿನೂತನ ಯೋಜನೆ ಇದಾಗಿದ್ದು ಇದನ್ನು ಮೊದಲಿಗೆ ತಾಲೂಕು ಕೇಂದ್ರಗಳಲ್ಲಿ ಜಾರಿಗೆ ತರಲಾಗುತ್ತಿದೆ. ಸಾರ್ವಜನಿಕರಿಗಾಗಿ ವ್ಯಾಟ್ಸಪ್ ನಂಬರ್ ಶೇರ್ ಮಾಡಲಾಗುವುದು” ಎಂದರು.

“ಮನೆ ಬೀಗ ಹಾಕಿ ಹೊರಗಡೆ ಹೋದಲ್ಲಿ 8277975068 ನಂಬರ್‌ಗೆ ವ್ಯಾಟ್ಸಪ್ ಗೆ ತಮ್ಮ ಹೆಸರು, ಮೊಬೈಲ್ ನಂಬರ್ ಠಾಣೆಯ ವ್ಯಾಪ್ತಿ, ಯಾವ ದಿನಾಂಕದಿಂದ ಎಲ್ಲಿಯವರೆಗೆ ತಾವು ಮನೆಯಲ್ಲಿ ಇರುವುದಿಲ್ಲ ಎಂಬ ಮಾಹಿತಿ ನೀಡಿದರೆ ನಿಮ್ಮ ಮನೆಗಳ ಮೇಲೆ ನಮ್ಮ ಪೊಲೀಸ್ ಸಿಬ್ಬಂದಿಗಳು ನಿಗರಾಣಿ ಮಾಡುವರು ಎಂದು ಹೇಳಿದರು. ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಂದ ನೆರೆಮನೆ ನಿಗರಾಣಿ ಮಾಡಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ಗೆ ರೆಡ್ ಕಾರ್ಪೆಟ್, ರೈತರಿಗೆ ಮುಳ್ಳಿನ ಬೇಲಿ- ಇದು ಮೋದಿ ಶೈಲಿ

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಮಹೇಶ ಮೇಘಣ್ಣವರ, ಡಿವೈಎಸ್ಪಿಗಳಾದ ಶಿವನಗೌಡ ಪಾಟೀಲ, ಜೆ.ಎಸ್.ನ್ಯಾಮೇಗೌಡ, ಸಿಪಿಐ ಹನುಮರೆಡ್ಡಿ, ಪಿಎಸ್‌ಐ ಸೇರಿದಂತೆ ಇತರರು
ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...