ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಪತ್ತೆ, ತೋಟದ ಮನೆಗಳಲ್ಲೂ ವಿಸ್ತರಣೆ

Date:

ಮಂಡ್ಯದ ಆಲೆಮನೆ, ಹೆಲ್ತ್ ಕ್ವಾಟರ್ಸ್‌ ಬಳಿಕ ಇದೀಗ ತೋಟದ ಮನೆಗಳಲ್ಲೂ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಕೃತ್ಯ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ ನಡೆಯುತ್ತಿರುವ ಸಂದರ್ಭದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಗುರುವಾರ ತಡ‌ರಾತ್ರಿ ಡಿಹೆಚ್​ಒ ಡಾ. ಮೋಹನ್ ‌ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದಾಗ ಮನೆಯಲ್ಲಿ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಮಷೀನ್ ಪತ್ತೆಯಾಗಿದೆ. ಇದೇ ವೇಳೆ ಸ್ಥಳದಲ್ಲಿ‌ ಹಾಸನ ಮೂಲದ ಗರ್ಭಿಣಿಯೂ ಇದ್ದರು. ಭ್ರೂಣಲಿಂಗ ಪತ್ತೆಗಾಗಿ ಗರ್ಭಿಣಿಯನ್ನು ಕರೆತರಲಾಗಿತ್ತು. ಗರ್ಭಿಣಿ ಮೂರನೇ ಹೆಣ್ಣುಭ್ರೂಣ ಅಬಾರ್ಷನ್​ಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಯಂತ್ರವನ್ನು ಸೀಜ್ ಮಾಡಿದ ಪೊಲೀಸರು, ಗರ್ಭಿಣಿಯ ಪತಿಯನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಮನೆ ಮಾಲೀಕ ಧನಂಜಯ್ ಆರೋಗ್ಯ ಇಲಾಖೆಯ ಗ್ರೂಪ್​ ಡಿ ಸಿಬ್ಬಂದಿ ಎನ್ನಲಾಗಿದೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಪತ್ತೆ

ಮಂಡ್ಯ ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಪತ್ತೆ, ಹತ್ಯೆ ನಡೆಯುತ್ತಿರುವ ವಿಚಾರ ಕರ್ನಾಟಕದಾದ್ಯಂತ ಈಗಾಗಲೇ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಪಾಂಡವಪುರ ಪಟ್ಟಣದ ಆರೋಗ್ಯ ಇಲಾಖೆಯ ಕ್ವಾರ್ಟಸ್‌ನಲ್ಲೇ ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದ ಆರೋಪದ ಮೇಲೆ ಸರಕಾರಿ ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ ಸೇರಿದಂತೆ ನಾಲ್ಕು ಮಂದಿಯನ್ನು ಪೊಲೀಸರು ಮೇ ತಿಂಗಳಲ್ಲಿ ಬಂಧಿಸಿದ್ದರು.

ಕಳೆದ 2023ರ ನವೆಂಬರ್‌ನಲ್ಲಿ ಮಂಡ್ಯ ತಾಲೂಕು ಹಾಡ್ಯ-ಹುಳ್ಳೇನಹಳ್ಳಿ ನಡುವಿನ ಆಲೆಮನೆಯೊಂದರ ಕೊಠಡಿಯಲ್ಲಿ ಅಕ್ರಮವಾಗಿ ಹೆಣ್ಣು ಭ್ರೂಣ ಲಿಂಗ ಪತ್ತೆ ಕಾರ್ಯ ನಡೆಯುತ್ತಿದ್ದುದು ಬೆಳಕಿಗೆ ಬಂದಿತ್ತು. ಇಲ್ಲಿ ಭ್ರೂಣ ಲಿಂಗ ಪತ್ತೆ ಕಾರ್ಯದ ವೇಳೆ ಮಗು ಹೆಣ್ಣು ಎಂದು ಗೊತ್ತಾದ ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಕಾನೂನುಬಾಹಿರವಾಗಿ ಭ್ರೂಣ ಹತ್ಯೆ ಮಾಡಿದ್ದು ಬೆಳಕಿಗೆ ಬಂದಿತ್ತು. ಈ ಪ್ರಕರಣ ಬೆನ್ನು ಹತ್ತಿದ ಬೆಂಗಳೂರು ಪೊಲೀಸರು ಹತ್ತು ಜನರನ್ನು ಬಂಧಿಸಿದ್ದರು. ಜತೆಗೆ, ಒಬ್ಬ ಆಯುರ್ವೇದ ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದ. ಈ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಸಾಮಾಜೀಜ ಪಿಡುಗಾದ ಹೆಣ್ಣು ಭ್ರೂಣ ಹತ್ಯೆ ಚಟುವಟಿಕೆಯ ಆರೋಪದ ಹೊತ್ತಿದ್ದ ಮಂಡ್ಯ ಜಿಲ್ಲೆಯು ನಾಡಿನೆದುರು ತಲೆತಗ್ಗಿಸುವಂತಾಗಿತ್ತು.

“ಹೆಣ್ಣು ಭ್ರೂಣಹತ್ಯೆಯಲ್ಲಿ ತೊಡಗಿರುವ ವೈದ್ಯರು ಮತ್ತು ವಂಚಕರಿಗೆ ಸುಲಭವಾಗಿ ಜಾಮೀನು ಸಿಗದಂತೆ ರಾಜ್ಯ ಸರ್ಕಾರ ಕಾನೂನನ್ನು ಬಲಪಡಿಸಲಿದೆ” ಎಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. ಅಲ್ಲಿಗೆ ಆ ವಿಚಾರ ಸಂಬಂಧಿತ ಚರ್ಚೆ ತಣ್ಣಗಾಗಿತ್ತು. ಈಗ ಮತ್ತೆ ಮಂಡ್ಯದಲ್ಲೇ ಹೆಣ್ಣು ಭ್ರೂಣ ಪತ್ತೆ ಪ್ರಕರಣ ಬೆಳಕಿಗೆ ಬಂದಿರುವುದು ಆರೋಗ್ಯ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...