ಬೀದರ್‌ | ಜಿಲ್ಲೆಯಲ್ಲಿ ಎಫ್‌ ಎಂ. ಕೇಂದ್ರ ಆರಂಭಕ್ಕೆ ಮಂಜೂರಾತಿ : ಸಚಿವ ಭಗವಂತ ಖೂಬಾ

Date:

ನನ್ನ ಸತತ ಪ್ರಯತ್ನಕ್ಕೆ ನರೇಂದ್ರ ಮೋದಿ ಸರ್ಕಾರದಿಂದ ಸಂಕ್ರಾಂತಿ ಹಬ್ಬದ ಉಡುಗೊರೆಯಾಗಿ ಬೀದರ ಜಿಲ್ಲೆಯಲ್ಲಿ ಎಫ್.ಎಂ.ಕೇಂದ್ರ ಆರಂಭಕ್ಕೆ ಮಂಜೂರಾತಿ ದೊರೆತಿದೆ ಎಂದು ಕೇಂದ್ರ ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಹಾಗೂ ನೂತನ ಮತ್ತು ನವೀಕರಿಸಬಹುದಾದ ಇಂಧನ ಮೂಲ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

“ಬೀದರನಲ್ಲಿರುವ ದೂರದರ್ಶನ ಕೇಂದ್ರದಲ್ಲಿ 100 ವ್ಯಾಟ್ ಸಾಮರ್ಥ್ಯವುಳ್ಳ ಎಫ್.ಎಂ. ಕೇಂದ್ರಕ್ಕೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ಈ ಎಫ್.ಎಮ್. ಕೇಂದ್ರವು ಸದ್ಯ ಮರುಪ್ರಸಾರಣ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಜಿಲ್ಲೆಯಲ್ಲಿ ಎಫ್.ಎಂ. ಕೇಂದ್ರ ತರಬೇಕೆಂದು ನಿರಂತರವಾಗಿ ಪ್ರಯತ್ನಿಸಿದ್ದೆ, ಆದರೆ ಎಫ್.ಎಂ.ಕೇಂದ್ರದ ಮಂಜೂರಾತಿಗೆ ಅವಶ್ಯಕವಾಗಿರುವ ಎಲ್ಲಾ ಪ್ರಕ್ರಿಯೆಗಳು ಮುಗಿಸಿಕೊಂಡು, ಮಂಜೂರಾತಿ ಪಡೆದುಕೊಂಡಿದ್ದರ ಪರಿಣಾಮ, ಮುಂದಿನ ಎರಡು ವಾರದೊಳಗೆ ಲೋಕಾರ್ಪಣೆಗೊಳ್ಳಲಿದೆ, ಜಿಲ್ಲೆಯ ಜನತೆಯ ಆಸೆ ಈಡೇರಲಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದ್ಯ ಬೆಂಗಳೂರು ಆಕಾಶವಾಣಿ ಕೇಂದ್ರದಿಂದ ಪ್ರಸಾರವಾಗುವ ಎಲ್ಲಾ ಕಾರ್ಯಕ್ರಮಗಳು ಬೀದರನಿಂದ ಮರುಪ್ರಸಾರಗೊಳ್ಳುತ್ತವೆ, ನಂತರ ಮುಂದಿನ ಕೆಲವೇ ದಿನಗಳಲ್ಲಿ ಬೀದರ ಕೇಂದ್ರದಿಂದ ಖಾಸಗಿ ಎಫ್.ಎಂ. ಕೇಂದ್ರಗಳು ಇಲ್ಲಿಂದಲೇ ಕಾರ್ಯಾರಂಭ ಮಾಡಲಿವೆ, ಅದಕ್ಕೆ ಬೇಕಾದ ಸಿದ್ದತೆ ಈಗಾಗಲೇ ನಮ್ಮಲ್ಲಿ ಮಾಡಿಕೊಳ್ಳಲಾಗುತ್ತಿದೆ. ಖಾಸಗಿ ಎಫ್.ಎಂ.ಚಾನೇಲ್‌ಗಳನ್ನು ಪ್ರಾರಂಭಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ, ರಿಲಯನ್ಸ್ ಎಫ್.ಎಂ. ಹಾಗೂ ಇನ್ನೊಬ್ಬರು ಎಫ್.ಎಂ.ಚಾನೆಲ್ ಪ್ರಾರಂಭಿಸಲು ಆಸಕ್ತಿ ತೋರಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ಮೊದಲು ಸರ್ಕಾರದ ಎಫ್.ಎಂ. ಕೇಂದ್ರ ಪ್ರಾರಂಭವಾದ ಮೇಲೆ ಇವುಗಳ ಕಾರ್ಯಾರಂಭಕ್ಕೆ ಅವಕಾಶವಿರುತ್ತದೆ. ಆದ್ದರಿಂದ ಶೀಘ್ರದಲ್ಲಿ ಎಫ್.ಎಂ. ಕೇಂದ್ರ ಪ್ರಾರಂಭವಾದ ಮೇಲೆ ಖಾಸಗಿ ಚಾನೆಲ್ ಪ್ರಾರಂಭವಾಗುತ್ತವೆ. ಈ ಎಫ್.ಎಂ. ಮರುಪ್ರಸಾರಣ ಕೇಂದ್ರದಿಂದ ಸ್ಥಳೀಯ ಕಲಾವಿದರಿಗೆ, ಉದ್ಯಮಗಳ ಪ್ರಚಾರಕ್ಕೆ, ಪ್ರಸರಣಕ್ಕೆ, ವೇಗದ ಮಾಹಿತಿ ಪ್ರಸರಣಕ್ಕೆ ತುಂಬಾ ಅನುಕೂಲವಾಗಲಿದೆ, ಉದ್ಯಮದ ಜೊತೆಗೆ ನಮ್ಮ ಭಾಗದ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆಗೆ ಪ್ರಾಶಸ್ತ್ಯ ಸಿಗಲಿದೆ” ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎರಡು ವರ್ಷ ಗತಿಸಿದರೂ ಬದಲಾಗದ ʼಬಸ್‌ ನಿಲ್ದಾಣʼ ನಾಮಫಲಕ

ಕಳೆದ 10 ವರ್ಷಗಳಲ್ಲಿ ನಾನು ಸಂಸದನಾದ ನಂತರ ಹತ್ತಾರು ಹೊಸ ಯೋಜನೆಗಳು ಬೀದರ ಲೋಕಸಭಾ ಕ್ಷೇತ್ರಕ್ಕೆ ತಂದಿರುವೆ, ಅದಕ್ಕೆ ಹೊಸ ಸೇರ್ಪಡೆ ಈ ಎಫ್.ಎಂ. ಕೇಂದ್ರವೂ ಒಂದಾಗಿದೆ, ಕ್ಷೇತ್ರದ ಜನತೆಯ ಆಸೆಯಂತೆ, ಬೀದರನಲ್ಲಿ ಎಫ್.ಎಂ. ಕೇಂದ್ರ ಪ್ರಾರಂಭಕ್ಕೆ ಮಂಜೂರಾತಿ ನೀಡಿರುವ  ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ ಠಾಕೂರ್‌ ಅವರಿಗೆ ಕೇಂದ್ರ ಸಚಿವ ಭಗವಂತ ಖೂಬಾ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...