ಬಾರದ ಮಳೆ – ಬತ್ತಿದ ಕೆರೆ: ಜಾನುವಾರುಗಳಿಗಾಗಿ ಕೆರೆಗೆ ನೀರು ಹರಿಸುತ್ತಿರುವ ರೈತ

Date:

ಜೂನ್‌ ತಿಂಗಳು ಕಳೆದರೂ, ಮುಂಗಾರು ಮಳೆತರುವ ನೈರುತ್ಯ ಮಾರುತಗಳ ಕಾಣೆಯಾಗಿವೆ. ಎಲ್ಲೆಡೆ ಬರದ ಛಾಯೆ ಕಾಣಿಸುತ್ತಿದೆ. ಜಲಾಶಯ, ನದಿ, ಕೆರೆ, ಕಟ್ಟೆಗಳಲ್ಲಿ ನೀರು ಬತ್ತಿ ಹೋಗುತ್ತಿದೆ. ಜನರೂ ಸೇರಿದಂತೆ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ. ಹಾವೇರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಈಗಾಗಲೇ ಕೆರೆ-ಕಟ್ಟೆ ಸಂಪೂರ್ಣ ಬರಿದಾಗಿದ್ದು, ಜಿಲ್ಲೆಯ ಅರಳೇಶ್ವರ ಗ್ರಾಮದ ರೈತರೊಬ್ಬರು ಜಾನುವಾರು ಮತ್ತು ಪಕ್ಷಿಗಳ ದಾಹ ತಣಿಸಲು ತಮ್ಮ ಪಂಪ್‌ಸೆಟ್‌ನಿಂದ ಕೆರೆಗೆ ನೀರು ಹರಿಸುತ್ತಿದ್ದಾರೆ.

ಗ್ರಾಮದ ರೈತ ರವಿ ತಿರುಮಲೆ ಅವರು ಕಳೆದ ಎರಡು ತಿಂಗಳಿಂದ ಚಿಕ್ಕಕೆರೆಗೆ ನೀರು ಹರಿಸುತ್ತಿದ್ದಾರೆ. ರವಿ ಅವರಿಗೆ ನಾಲ್ಕು ಎಕರೆ ಕೃಷಿ ಭೂಮಿ ಮತ್ತು ಒಂದು ಬೋರ್‌ವೆಲ್ ಇದೆ. ಕಳೆದ 15 ವರ್ಷಗಳಿಂದ ಬೋರ್‌ವೆಲ್ ಮೂಲಕ ಜಮೀನಿಗೆ ನೀರುಣಿಸುತ್ತಾ ಕೃಷಿ ಮಾಡುತ್ತಿದ್ದಾರೆ.

ಅವರ ಕೃಷಿ ಭೂಮಿಯ ಪಕ್ಕದಲ್ಲೇ ಇರುವ ಸಣ್ಣ ಕೆರೆ ಬತ್ತಿ ಹೋಗಿದೆ. ಜಾನುವಾರುಗಳುಮ ಪಕ್ಷಿಗಳು ಹಾಗೂ ಇತರ ಪ್ರಾಣಿಗಳಿಗೆ ಕುಡಿಯುವ ನೀರು ದೊರೆಯದೆ ಕಷ್ಟಕರವಾಗಿದೆ. ಇದನ್ನು ಕಂಡ ರವಿ, ಬಾಯಾರಿದ ಜಾನುವಾರುಗಳಿಗೆ ನೆರವಾಗಲು ತಮ್ಮ ಬೋರ್‌ವೆಲ್‌ನಿಂದ ಕೆರೆಗೆ ನೀರು ಬಿಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಮಾನ್ಯವಾಗಿ, ಪ್ರತಿ ವರ್ಷ ಜೂನ್ ಮೊದಲ ವಾರದಲ್ಲಿ ಮಾನ್ಸೂನ್ ಬರುತ್ತದೆ. ಆದರೆ, ಈ ವರ್ಷ ಮುಂಗಾರು ಒಂದು ತಿಂಗಳು ವಿಳಂಬವಾಗಿದೆ. ಜಾನುವಾರು, ಪಕ್ಷಿ ಸಂಕುಲಕ್ಕೆ ತೊಂದರೆಯಾಗಿದೆ. ಕಳೆದ ಎರಡು ತಿಂಗಳಿಂದ ಕೆರೆಗೆ ನೀರು ಹರಿಸುತ್ತಿದ್ದೇನೆ. ನನ್ನ ಪಂಪ್‌ಸೆಟ್‌ನಲ್ಲಿ ಉತ್ತಮವಾರಿ ನೀರು ಬರುತ್ತಿದೆ. ಕಷ್ಟಕಾಲದಲ್ಲಿ ಅದನ್ನು ಎಲ್ಲರಿಗೂ ಉಪಯೋಗವಾಗುವಂತೆ ಬಳಸುವುದು ಒಳ್ಳೆಯದು” ಎಂದು ರವಿ ಹೇಳಿದ್ದಾರೆ.

“ನಮ್ಮೂರಲ್ಲಿ ಹಲವಾರು ಜಾನುವಾರುಗಳಿವೆ. ಆದರೆ, ಅವುಗಳಿಗೆ ನೀರು ಸಿಗುವುದು ಕಷ್ಟವಾಗಿತ್ತು. ರವಿ ಅವರು ಕೆರೆಗೆ ನೀರು ಬಿಡುತ್ತಿರುವುದರಿಂದ ಈಗ ನಿರಾಳರಾಗಿದ್ದೇವೆ. ಇದರಿಂದ ನಮಗೆ ಸಾಕಷ್ಟು ಸಹಾಯವಾಗುತ್ತಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...