ಕೊಪ್ಪಳ ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ: ಸೂಕ್ತ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

Date:

ಕೊಪ್ಪಳ ನಗರದ ಬೀದಿಗಳಲ್ಲಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಈ ಕುರಿತು ಹಲವಾರು ಬಾರಿ ಫೋನ್ ಕರೆ ಮೂಲಕ ಮತ್ತು ಅರ್ಜಿ ಮುಖಾಂತರ ದೂರು ನೀಡಿ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಕಾರ್ಯಕರ್ತರು ನಗರಸಭೆ ಚೀಫ್‌ ಆಫೀಸರ್‌ಗೆ‌ ಮನವಿ ಸಲ್ಲಿಸಿದರು.

“ನಗರದಲ್ಲಿ ಬೀದಿ ನಾಯಿಗಳು ಆಟವಾಡುವ ಮಕ್ಕಳಿಗೆ ಕಚ್ಚಿ ಗಾಯಗೊಳಿಸಿರುವ ಬಹಳಷ್ಟು ಘಟನರಗಳಿವೆ. ಈ ಕುರಿತು ಹಲವು ಬಾರಿ ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಮನವಿ ಸಲ್ಲಿಸಿದರೂ ನಗರಸಭೆ ನಾಯಿಗಳ ದಾಳ ತಪ್ಪಿಸಲು ಕ್ರಮ ಜರುಗಿಸಿಲ್ಲ” ಎಂದು ಆರೋಪಿಸಿದರು.

“ಶಾಲೆಗೆ ಹೊಗುವಂತಹ ಹಾಗೂ ಓಣಿಯಲ್ಲಿ ಆಡುವಂತಹ ಪುಟ್ಟ ಮಕ್ಕಳ ಮೇಲೆ ನಾಯಿ ಕಡಿಯುತ್ತಿರುವ ಘಟನೆಗಳು ದಿನೇ ದಿನೆ ವರದಿಯಾಗುತ್ತಲೇ ಇವೆ. ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಬೆಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಎಸ್‌ಡಿಪಿಐ ಸಾರ್ವಜನಿಕರಿಗೆ ಕರೆ ಕೊಡುವುದರ ಮೂಲಕ ನಗರಸಭೆ ಕಾರ್ಯಲಯದ ಎದುರು ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ವಿಫಲಗೊಂಡ ಬಾವಿಗಳ ಮುಚ್ಚಲು ಕ್ರಮವಹಿಸಿ: ಡಿಸಿ ಲತಾ ಕುಮಾರಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸೈ ಸಲೀಮ್ ಖಾದ್ರಿ, ಉಪಾಧ್ಯಕ್ಷ ಫಾರೂಕ್ ಅತ್ತಾರ, ತಾಲೂಕು ಸಮಿತಿಯ ಸದಸ್ಯ ರಿಜ್ವಾನ್ ಪೀರ್ಜಾದೆ, ಗೆಸು, ಭಾಷಾ ಗಂಗಾವತಿ, ಶಾರುಖ್ ಖಾನ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...