ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ: CITU ಮಂಗಳೂರು ಜಿಲ್ಲಾ ಘಟಕ ಬೆಂಬಲ

Date:

ಕೇಂದ್ರ ಸರ್ಕಾರವು ಬಿಸಿಯೂಟ ನೌಕರರ ವೇತನ ಹೆಚ್ಚಿಸಬೇಕು ಹಾಗೂ ಕನಿಷ್ಠ ಕೂಲಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಹೋರಾಟದ ಭಾಗವಾಗಿ ಈಗಾಗಲೇ ತುಮಕೂರು, ಹುಬ್ಬಳ್ಳಿ, ಬೆಂಗಳೂರು, ಮಂಡ್ಯ ಜಿಲ್ಲೆಗಳಲ್ಲಿ ಕೇಂದ್ರ ಸಚಿವರುಗಳ ಕಚೇರಿ ಮತ್ತು ಮನೆಗಳ ಎದುರು ಧರಣಿ ಆರಂಭವಾಗಿದೆ.

ತುಮಕೂರಿನಲ್ಲಿ ವಿ ಸೋಮಣ್ಣನವರ ಮನೆ ಎದುರು, ಹುಬ್ಬಳ್ಳಿಯಲ್ಲಿ ಪ್ರಲ್ಹಾದ್‌ ಜೋಶಿ ಕಚೇರಿ ಎದುರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ಈ ಹೋರಾಟವನ್ನು ಬೆಂಬಲಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ 400ಕ್ಕೂ ಅಧಿಕ ಬಿಸಿಯೂಟ ನೌಕರರು CITU ನೇತ್ರತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ಬದುಕು ನಡೆಸಲು ಪೂರಕವಾದ ಕನಿಷ್ಠ ಕೂಲಿಯನ್ನು ನೀಡದೆ ಅತ್ಯಂತ ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹ ಹುಬ್ಬಳ್ಳಿ

ಜಿಲ್ಲೆಯ ಕಾರ್ಮಿಕ ಚಳುವಳಿಯ ಹಿರಿಯ ನೇತಾರ ಜೆ ಬಾಲಕೃಷ್ಣ ಶೆಟ್ಟಿಯವರು ಧರಣಿ ಉದ್ಘಾಟಿಸಿ ಮಾತನಾಡಿ, “ಅತ್ಯಂತ ನಿಕೃಷ್ಠವಾಗಿ ಕೂಲಿಯನ್ನು ಪಡೆದು, ದಮನೀಯ ಬದುಕು ಸಾಗಿಸುತ್ತಿರುವ ಬಿಸಿಯೂಟ ನೌಕರರಿಗೆ ಪ್ರಸ್ತುತ ಸಿಗುತ್ತಿರುವ ₹4,500 ವೇತನದಿಂದ ಬದುಕು ಸಾಗಿಸಲು ಖಂಡಿತ ಸಾಧ್ಯವಿಲ್ಲ. ಗೌರವಧನದ ಹೆಸರಿನಲ್ಲಿ ಅಗೌರವ ತೋರಿಸುತ್ತ ಮಾತೆ ಮಾತೆ ಎಂದು ಬೊಗಳೆ ಬಿಡುತ್ತ, ಬಿಸಿಯೂಟ ನೌಕರರಾದ ಎಲ್ಲ ಮಹಿಳೆಯರನ್ನೂ ಕೀಳಾಗಿ ಕಾಣುವ ಕೇಂದ್ರ ಸರ್ಕಾರದ ವಿರುದ್ಧ ಸಮರಧೀರ ಹೋರಾಟಕ್ಕೆ ಅಣಿಯಾಗಬೇಕು” ಎಂದು ಕರೆ ನೀಡಿದರು.

ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹ ಹುಬ್ಬಳ್ಳಿ 1
ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಅನಿರ್ದಿಷ್ಟಾವಧಿ ಧರಣಿ

CITU ದ ಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “2001ರಲ್ಲಿ ಜಾರಿಗೆ ಬಂದತಹ ಬಿಸಿಯೂಟ ಯೋಜನೆಗೆ 2014ರಲ್ಲಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ತನ್ನ ಪಾಲನ್ನು ಕಡಿತಗೊಳಿಸುತ್ತ ಬಂದಿದೆ. ದೇಶಾದ್ಯಂತ 26ಕ್ಕೂ ಅಧಿಕ ಬಿಸಿಯೂಟ ನೌಕರರು, ಸರ್ಕಾರದ ಆದೇಶದಲ್ಲಿ 4 ಗಂಟೆಯ ಕೆಲಸವೆಂದು ಹೇಳಿ‌ದ್ದು, 8 ಗಂಟೆಯಷ್ಟು ದುಡಿಯುತ್ತಿದ್ದರೂ ಕೂಡ ಸರ್ಕಾರಗಳು ಮಾತ್ರ ದಿವ್ಯಮೌನ ವಹಿಸಿದೆ‌” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹ ತುಮಕೂರು
ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ತುಮಕೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ

ಬಿಸಿಯೂಟ ನೌಕರರ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷೆ ಪದ್ಮಾವತಿ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿ, “ಮುಂಬರುವ ಬಜೆಟ್‌ನಲ್ಲಿ ಕನಿಷ್ಠ ವೇತನ ಜಾರಿಯಾಗಬೇಕು. ಯಾವುದೇ ಕಾರಣಕ್ಕೂ ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಬಾರದು. ILC ಶಿಫಾರಸಿನಂತೆ ಖಾಯಂ ಉದ್ಯೋಗಸ್ಥರಂತೆ ಪರಿಗಣಿಸಿ ಎಲ್ಲ ಶಾಸನಬದ್ಧ ಸವಲತ್ತುಗಳನ್ನು ನೀಡಬೇಕು” ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಬಗ್ಗೆ ಗಮನ ಸೆಳೆದರು.

ಈ ಸುದ್ದಿ ಓದಿದ್ದೀರಾ? ಕೃಷಿ ಜೊತೆಗೆ ಆಹಾರ ಸಂಸ್ಕರಣಾ ಘಟಕ ಉದ್ದಿಮೆ ಸ್ಥಾಪಿಸಿ

ಹೋರಾಟವನ್ನು ಬೆಂಬಲಿಸಿ ಬೀಡಿ ಕಾರ್ಮಿಕರ ಸಂಘಟನೆಯ ಜಿಲ್ಲಾ ನಾಯಕ ಜಯಂತ ನಾಯಕ್, ಸಮುದಾಯ ಸಂಘಟನೆಯ ಹಿರಿಯ ನಾಯಕ ವಾಸುದೇವ ಉಚ್ಚಿಲ್ ಅವರು ಮಾತನಾಡಿದರು.

ಪ್ರತಿಭಟನೆಯಲ್ಲಿ CITU ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೊಗರು, ಸುಂದರ ಕುಂಪಲ, ಪ್ರಮೋದಿನಿ, ಬಿಸಿಯೂಟ ನೌಕರರ ಸಂಘಟನೆಯ ಜಿಲ್ಲಾ ನಾಯಕಿಯರಾದ ರೇಖಾಲತಾ, ಬಬಿತಾ, ಲೀಲಾವತಿ, ಮೋಹಿನಿ, ಶೋಭಾ, ಸುಶೀಲಾ, ಚಿತ್ರಾವತಿ, ಸಬೀನಾ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...