ಬೀದರ್‌ | ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

Date:

ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶಿಸಬೇಕು ಎಂದು ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಬೀದರ್‌ ತಾಲೂಕು ಘಟಕದಿಂದ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ನಗರದ ತಹಶೀಲ್ದಾರ್ ಕಚೇರಿ ಎದುರುಗಡೆ ಗುರುವಾರ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.

ʼಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುವ ಕಾರಣ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಬೇಕು. ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕುʼ ಎಂದು ಆಗ್ರಹಿಸಿದರು.

ʼಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅಲ್ಮರಾ, ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಕಲ್ಪಿಸಬೇಕು. ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 26 at 8.55.12 PM

ʼಮನೆ ಹಾನಿ ಪ್ರಕರಣಗಳ ಜವಾಬ್ದಾರಿಯಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈ ಬಿಡಬೇಕು. ಪುಯಾಣ ಭತ್ಯೆ ದರವನ್ನು 500 ರೂ.ಗಳಿಂದ 3 ಸಾವಿರಕ್ಕೆ ಹೆಚ್ಚಿಸಬೇಕು. ಕರ್ತವ್ಯ ನಿರ್ವಹಿಸುವಾಗ ಜೀವಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮಂಜೂರು ಮಾಡಬೇಕು. ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಬೇಕು. ಪ್ರೊಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳ ಕೈ ಬಿಡುವಂತೆ ಸೂಕ್ತ ಆದೇಶ ಜಾರಿಗೊಳಿಸಬೇಕುʼ ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂತೆ ಸೂಕ್ತ ಆದೇಶ ನೀಡಬೇಕು. ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಮೊದಲಾದ ಬೇಡಿಕೆಗಳ ಹಕ್ಕೊತ್ತಾಯ ಪತ್ರವನ್ನು ಪ್ರತಿಭಟನಾ ಸ್ಥಳಕ್ಕೆಆಗಹಿಸಿದ ಬೀದರ್‌ ತಹಸೀಲ್ದಾರ್‌ ದಿಲ್ಸಾದ್‌ ಮೇಹತ್‌ ಅವರಿಗೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಸದಸ್ಯರ ನೇಮಕ

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಬಬ್ರುವಾಹನ ಬೆಳಮಗಿ, ಬೀದರ್‌ ತಾಲೂಕಾಧ್ಯಕ್ಷ ವೀರೇಶ ಬಟಕುರ್ಕಿ, ಕಾರ್ಯದರ್ಶಿ ಲಕ್ಷ್ಮೀ ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿಗಳಾದ ಪ್ರದೀಪ ಅಂಗಡಿ, ತಿಪ್ಪೇಶ, ಬಸವರಾಜ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...