ಸ್ವಾತಂತ್ರ್ಯ ದಿನ | ಧ್ವಜಾರೋಹಣಕ್ಕೆ ಶಾಸಕರಿಗಿಲ್ಲ ಅವಕಾಶ; ತಮ್ಮ ಹಕ್ಕಿಗಾಗಿ ಸಿಎಂಗೆ ಎಂಎಲ್‌ಎ ಪತ್ರ

Date:

ಸ್ವಾತಂತ್ರ್ಯ ದಿನದಂದು ತಾಲೂಕು ಕೇಂದ್ರಗಳಲ್ಲಿ ಶಾಸಕರು ಧ್ವಜಾರೋಹಣ ಮಾಡಬೇಕು. ಆದರೆ, ಕೆ.ಆರ್‌ ಪೇಟೆಯಲ್ಲಿ ಶಾಸಕರಿಗೆ  ಅವಕಾಶ ನೀಡಲಾಗಿಲ್ಲ. ಇದು ಜನರ ಹೋರಾಟ ಮತ್ತು ಪ್ರಜಾಪ್ರಭತ್ವದ ಆಡಳಿತಕ್ಕೆ ವಂಚನೆ ಮಾಡುತ್ತದೆ. ಅಲ್ಲದೆ, ಜನಪ್ರತಿನಿಧಿಗಳ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಕೆ.ಆರ್‌ ಪೇಟೆಯ ಶಾಸಕ ಎಚ್‌.ಟಿ ಮಂಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಆಗಸ್ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆಯಲ್ಲಿಯೂ ತಾಲೂಕು ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಹಶೀಲ್ದಾರ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ಬಗ್ಗೆ ಅಸಮಾಧಾನಗೊಂಡಿರುವ ಶಾಸಕ ಎಚ್‌.ಟಿ ಮಂಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಧ್ವಜಾರೋಹಣವನ್ನು ಆಯಾ ಕ್ಷೇತ್ರಗಳ ಶಾಸಕರೇ ನೆರವೇರಿಸಬೇಂದು ಆದೇಶ ಹೊರಡಿಸುವಂತೆ ಮನವಿ ಮಾಡಿದ್ದಾರೆ.

“ಸ್ವಾತಂತ್ರ್ಯ ದಿನದಂದು ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುತ್ತಾರೆ. ಅದೇ ರೀತಿ ತಾಲೂಕು ಹಂತದಲ್ಲಿ ಶಾಸಕಾಂಗದ ಪ್ರತಿನಿಧಿಗಳಾದ ಶಾಸಕರು ಧ್ವಜಾರೋಹಣ ಮಾಡಬೇಕು. ಆದರೆ, ಕೆ.ಆರ್‌ ಪೇಟೆಯಲ್ಲಿ ತಹಶೀಲ್ದಾರ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಆಹ್ವಾನ ಪತ್ರಿಕೆಯಲ್ಲಿ ತಿಳಿಸಲಾಗಿದೆ. ಇದು ಪ್ರಜಾಪ್ರಭುತ್ವ ಆಡಳಿತಕ್ಕೆ ವಂಚನೆ ಯಾಗಿದೆ ಮತ್ತು ಜನಪ್ರತಿನಿಧಿಗಳ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆ.ಆರ್ ಪೇಟೆಯಲ್ಲಿ ಕೆಲವು ವರ್ಷಗಳಿಂದ ಹೀಗೆಯೇ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿಗಳು ಮಧ್ಯ ಪ್ರವೇಶ ಮಾಡಿ, ತಾಲೂಕು ಹಂತದಲ್ಲಿ ಧ್ವಜಾರೋಹಣವನ್ನು ಆಯಾ ಕ್ಷೇತ್ರದ ಶಾಸಕರು ನೆರವೇರಿಸಬೇಕೆಂಬ ಆದೇಶ ಹೊರಡಿಸಬೇಕು. ಆ ಮೂಲಕ ಜನಪ್ರತಿನಿಧಿಗಳು ಹಕ್ಕು ಮತ್ತು ಘಟನೆಯನ್ನು ರಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...