ಉಡುಪಿ | ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಬೇಕು

Date:

ಉಡುಪಿ ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತಗೊಳ್ಳುತ್ತಿದೆ. ಕಾಮಗಾರಿಯನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

1004634785

ಇಂದ್ರಾಳಿ ರೈಲ್ವೇ ಮೇಲ್ಸುತುವೆ ಸೇತುವೆ ಕಾಮಗಾರಿಯು 2018 ರಿಂದಲೇ ಪ್ರಾರಂಭವಾದರೂ ಈವರೆಗೂ ಸಹ ಪೂರ್ಣಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಡಾಗುವುದರ ಜೊತೆಗೆ ಅನೇಕ ಅಪಘಾತಗಳು, ಸಾವು ನೋವುಗಳು ಆಗಿವೆ. ಸಾರ್ವಜನಿಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇವೆಲ್ಲವುಗಳಿಗೂ ಜಿಲ್ಲಾಡಳಿತ ಉತ್ತರ ನೀಡಬೇಕು. ಆದರೆ, ಕಾಮಗಾರಿಯ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಸಾಗದೇ ಪೂರ್ಣಗೊಂಡಿರುವುದಿಲ್ಲ. ಕಳೆದ ಆರು ತಿಂಗಳಿನಿAದ ನಾವುಗಳು ನಿರಂತರವಾಗಿ ಸಭೆ ಹಾಗೂ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ನಡೆಸುತ್ತಿದ್ದೇವೆ. ಆದರೂ ಸಹ ಕಾಮಗಾರಿಯ ವೇಗವಾಗಿ ಆಗುತ್ತಿಲ್ಲ. ಅಭಿಯಂತರರು ಹಾಗೂ ಗುತ್ತಿಗೆದಾರರು ಈ ಎಲ್ಲವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕಾಮಗಾರಿಯ ಪ್ರಗತಿಯ ವೇಗವನ್ನು ಹೆಚ್ಚಿಸಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಕಾನೂನು ರೀತಿಯಲ್ಲಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದರು.
ಈಗಾಗಲೇ ಕಬ್ಬಿಣದ ಗರ್ಡಲ್ಸ್ನ ಫ್ಯಾಬ್ರಿಕೇಷನ್ ವರ್ಕ್ಸ್ ಪೂರ್ಣಗೊಂಡಿದೆ. ಇವುಗಳ ಇನ್ಸ್ಫೆಕ್ಷನ್ ಕಾರ್ಯಗಳನ್ನು ರೈಲ್ವೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜಂಟಿಯಾಗಿ ಕೈಗೊಂಡು ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದ ಅವರು, ಕಬ್ಬಿಣದ ಗರ್ಡಲ್ಸ್ ಅನ್ನು ಸೇತುವೆಯಾಗಿ ಅಳವಡಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ತಯಾರಿಗಳನ್ನು ಈಗಿನಿಂದಲೇ ಜೊತೆ ಜೊತೆಯಾಗಿ ಕೈಗೊಳ್ಳಬೇಕೆಂದು ಅಭಿಯಂತರುಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ 169 ಎ ಯ ಕರಾವಳಿ ಬೈಪಾಸ್‌ನಿಂದ ಮಲ್ಪೆವರೆಗಿನ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣ ಪ್ರಮಾಣದಲ್ಲಿ ತ್ವರಿತವಾಗಿ ಕೈಗೊಳ್ಳಬೇಕು. ವಿದ್ಯುತ್ ಕಂಬಗಳನ್ನು ಬದಲಾವಣೆ ಕಾರ್ಯವನ್ನು ಆದಷ್ಟು ತ್ವರಿತವಾಗಿ ಕೈಗೊಳ್ಳಬೇಕು. ಆಸ್ತಿಯ ಮಾಲೀಕರು ಇದಕ್ಕೆ ಸಹಕರಿಸಬೇಕು. ಭೂ ಸ್ವಾಧೀನ ಹಣವನ್ನು ಮುಂಚಿತವಾಗಿಯೇ ಠೇವಣಿ ಇಡಬೇಕು ಎಂದ ಅವರು, ಕಾಮಗಾರಿ ಕೈಗೊಳ್ಳುವಲ್ಲಿ ಯಾವುದೇ ರೀತಿಯ ಅಡಚಣೆಗಳು ಉಂಟಾದಲ್ಲಿ ಪೊಲೀಸ್ ಇಲಾಖೆಯ ನೆರವು ಪಡೆಯಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ-ಅಂಬಲಪಾಡಿಯ ಅಂಡರ್‌ಪಾಸ್ ರಸ್ತೆಯ ಕಾಮಗಾರಿಯನ್ನು ಇನ್ನೂ ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಳೆಗಾಲ ಪ್ರಾರಂಭವಾಗಿ ಕಾಮಗಾರಿಗೆ ಅಡಚಣೆಗಳು ಆಗುವ ಸಾಧ್ಯತೆ ಇರುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಸಹಾಯಕ ಕಮೀಷನರ್ ಮಹೇಶ್ಚಂದ್ರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಶೃಂಗೇರಿ-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...