ಉಡುಪಿ | 2.40 ಕೋಟಿ ರೂ ವೆಚ್ಚದಲ್ಲಿ ರೈಲು ನಿಲ್ದಾಣಕ್ಕೆ ಹೊಸ ಮೆರುಗು : ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಉಡುಪಿ ರೈಲು ನಿಲ್ದಾಣದ ಪ್ರಯಾಣಿಕರ ಬಹು ದಿನಗಳ ಬೇಡಿಕೆ ಈಡೇರಿದೆ. ಸುಮಾರು 2.40 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪ್ರಯಾಣಿಕರ ಸೌಲಭ್ಯಗಳು ಜಿಲ್ಲಾಡಳಿತದ ಸಹಕಾರದೊಂದಿಗೆ ಲೋಕಾರ್ಪಣೆಗೊಂಡಿದೆ. ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಉಡುಪಿ ರೈಲ್ವೆ ನಿಲ್ದಾಣಕ್ಕೆ ಹೊಸ ಕಾಯಕಲ್ಪ ನೀಡಿ ಹೊಸ ಮೆರುಗಿನೊಂದಿಗೆ ಕರಾವಳಿ ಭಾಗದ ಜನರಿಗೆ ಲಭ್ಯವಾಗಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಇಂದು ಉಡುಪಿ ರೈಲು ನಿಲ್ದಾಣ ಪರಿಸರದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿ. ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕರಾವಳಿ ಜಿಲ್ಲೆಗಳ ಎಲ್ಲ ರೈಲು ನಿಲ್ದಾಣಗಳ ಮೇಲ್ದರ್ಜೆಗಾಗಿ 100 ಕೋಟಿ ರೂ ಗಳ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅನುಮೋದನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಥಮ ಹಂತದ ಕಾಮಗಾರಿಗಳಲ್ಲಿ ಪ್ಲಾಟ್ ಫಾರ್ಮ್ 2 ಅನ್ನು 2.6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಹಿರಿಯ ನಾಗರಿಕರ ಅನುಕೂಲಕ್ಕಾಗಿ 3 ಲಿಫ್ಟ್ಗಳನ್ನು ಅಳವಡಿಸಲಾಗುವುದು. ಬಾರಕೂರು-ಮುಲ್ಕಿ ರೈಲ್ವೆ ಪ್ಲಾಟ್ ಫಾರ್ಮ್ಗಳನ್ನು 4.28 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ 105 ಕೋಟಿ ರೂ. ವೆಚ್ಚದಲ್ಲಿ 10 ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ದೊರೆಯಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳೂರಿನಿಂದ ಕಾರವಾರದವರೆಗೆ ದ್ವಿಪಥ ರೈಲ್ವೆ ಹಳಿಗಳು ಈಗಿನ ಅವಶ್ಯಕತೆಯಾಗಿದ್ದು, ಇದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು. ಇದರ ಜೊತೆಗೆ ಮಡಗಾಂವ್ – ಮಂಗಳೂರು ವಂದೇ ಭಾರತ್ ರೈಲನ್ನು ಮುಂಬೈವರೆಗೆ ಮತ್ತು ಬೆಂಗಳೂರು-ಮಂಗಳೂರು ರೈಲನ್ನು ಕಾರವಾರದವರೆಗೆ ವಿಸ್ತರಣೆ ಮಾಡಿದಲ್ಲಿ ಕರಾವಳಿಯ ಜನರಿಗೆ ಬಹಳ ಅನುಕೂಲವಾಗಲಿದ್ದು, ಈ ನಿಟ್ಟಿನಲ್ಲಿ ಕೊಂಕಣ ರೈಲ್ವೆಯೊಂದಿಗೆ ಸಮಾಲೋಚಿಸಿ ಅಡಚಣೆಗಳನ್ನು ನಿವಾರಿಸುವ ಹಾಗೂ ಉಡುಪಿ ರೈಲು ನಿಲ್ದಾಣಕ್ಕೆ ಶ್ರೀಕೃಷ್ಣ ರೈಲು ನಿಲ್ದಾಣ ಎಂದು ಹೆಸರಿಸಲು ಪ್ರಯತ್ನ ನಡೆಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಯಶ್‌ಪಾಲ್ ಎ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕೊಂಕಣ ರೈಲ್ವೆ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಝಾ, ಕಾರವಾರ ವಲಯ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...