ಮತ್ತೆ 240 ಉದ್ಯೋಗಿಗಳನ್ನು ವಜಾ ಮಾಡಿದ ಇನ್ಫೋಸಿಸ್!

Date:

ಇತ್ತೀಚೆಗಷ್ಟೇ 400 ಟ್ರೈನಿ ಉದ್ಯೋಗಿಗಳನ್ನು ವಜಾಗೊಳಿಸಿದ್ದ ಉದ್ಯಮಿ ನಾರಾಯಣ ಮೂರ್ತಿ ಅವರ ಇನ್ಫೋಸಿಸ್ ಸಂಸ್ಥೆ, ಇದೀಗ ಮತ್ತೆ 240 ಟ್ರೈನಿ ಉದ್ಯೋಗಿಗಳನ್ನು ವಜಾಗೊಳಿಸಿದೆ.

ಮೈಸೂರಿನಲ್ಲಿ ಇನ್ಫೋಸಿಸ್ ಕ್ಯಾಂಪಸ್‌ಗೆ ಟ್ರೈನಿ ಉದ್ಯೋಗಿಗಳಾಗಿ ಆಯ್ಕೆಯಾಗಿದ್ದ 240 ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಉದ್ಯೋಗಿಗಳು ಆಂತರಿಕ ಮೌಲ್ಯಮಾಪನಗಳಲ್ಲಿ ಉತ್ತೀರ್ಣರಾಗಿಲ್ಲ ಕಾರಣ ವಜಾಗೊಳಿಸಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಉದ್ಯೋಗ ಕಳೆದುಕೊಂಡಿರುವ 240 ಟ್ರೈನಿ ಉದ್ಯೋಗಿಗಳನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಂಸ್ಥೆ ನೇಮಕ ಮಾಡಿಕೊಂಡಿತ್ತು. ಆದರೆ, ಆರೇ ತಿಂಗಳಲ್ಲಿ ಅವರನ್ನು ಸಂಸ್ಥೆಯಿಂದ ಹೊರಹಾಕಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೂ ಹಲವು ಟ್ರೈನಿ ಉದ್ಯೋಗಿಗಳ ಆಂತರಿಕ ಮೌಲ್ಯಮಾಪನವನ್ನು ಸಂಸ್ಥೆಯು ನಡೆಸುತ್ತಿದ್ದು, ಆ ಫಲಿತಾಂಶಗಳು ಬಂದ ಬಳಿಕ, ಇನ್ನೂ ಹಲವರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಆದಾಗ್ಯೂ, ಹಾಲಿ ವಜಾಗೊಂಡಿರುವವರು 240 ಮಂದಿ ಅಲ್ಲ. 370 ಮಂದಿ ಎಂದು ಉದ್ಯೋಗ ಕಳೆದುಕೊಂಡಿರುವ ಟ್ರೈನಿಯೊಬ್ಬರು ಹೇಳಿದ್ದಾರೆ.

ಇನ್ಫೋಸಿಸ್ ರೀತಿಯ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಮಾಡಲು ಉತ್ಸುಕರಾಗಿದ್ದೆವು. ನಾನಾ ರೀತಿಯ ಕನಸು ಕಂಡಿದ್ದೆವು. ಆದರೆ, ಕಂಪನಿಯು ತನ್ನ ಉತ್ಸಾಹ, ಕನಸುಗಳಿಗೆ ತಣ್ಣೀರು ಎರಚಿದೆ ಎಂದು ವಜಾಗೊಂಡವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದೇ ವರ್ಷದ ಫೆಬ್ರವರಿಯಲ್ಲಿ, ಮೈಸೂರಿನಲ್ಲಿರುವ ಇನ್ಫೋಸಿನ್‌ ಕ್ಯಾಪಂಸ್‌ನಲ್ಲಿ ಹಲವು ತಿಂಗಳುಗಳ ಕಾಲ ಮೂಲಭೂತ ತರಬೇತಿ ಪಡೆದ 400ಕ್ಕೂ ಹೆಚ್ಚು ಹೊಸ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಲಾಗಿತ್ತು. ಇನ್ಫೋಸಿಸ್‌ನ ಧೋರಣೆಯ ವಿರುದ್ಧ ಐಟಿ ವಲಯದ ಸಂಘಟನೆಯಾದ ‘ನಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಉದ್ಯೋಗಿಗಳ ಸೆನೆಟ್’ (NITES) ಕಾರ್ಮಿಕ ಸಚಿವಾಲಯಕ್ಕೆ ದೂರು ನೀಡಿತ್ತು. ಮಾತ್ರವಲ್ಲದೆ, ವಜಾಗೊಳಿಸಲಾಗಿರುವ ಉದ್ಯೋಗಿಗಳ ಸಂಖ್ಯೆ 300 ಅಲ್ಲ, 700 ಎಂದು ವಾದಿಸಿತ್ತು. ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...