ಸಿಂದಗಿ ʼಹೈಟೆಕ್ʼ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಮರೀಚಿಕೆ: ಪ್ರಯಾಣಿಕರು ಕಂಗಾಲು

Date:

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೈಟೆಕ್ ಚೆನ್ನವೀರ ಸ್ವಾಮೀಜಿ ಬಸ್ ನಿಲ್ದಾಣದಲ್ಲಿ ಮೂಲ ಸೌಕರ್ಯವಿಲ್ಲದೆ ಸೊರಗಿ ಹೋಗಿದೆ. ಇದರ ಮಧ್ಯೆ ನಿತ್ಯವೂ ಜನಜಂಗುಳಿಯಿಂದ ಕೂಡಿರುವ ನಿಲ್ದಾಣದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಪ್ರಯಾಣಿಕರಿಗೆ ಅಭದ್ರತೆ ಕಾಡುತ್ತಿದೆ.

ಸಾರಿಗೆ ಇಲಾಖೆಗೆ ಅತಿಹೆಚ್ಚು ಆದಾಯ ನೀಡುವ ಸಿಂದಗಿ ಡೀಪೋದಿಂದ ನಿತ್ಯ 112 ಮಾರ್ಗಗಳಲ್ಲಿ ಬಸ್‌ಗಳು ಸಂಚರಿಸುತ್ತವೆ. ರಾಜ್ಯ, ಮಹಾರಾಷ್ಟ್ರ ಹಾಗೂ ಗೋವಾಕ್ಕೆ ಸಂಚರಿಸುವ ಬಸ್ಸುಗಳು ಬಂದು, ಹೋಗುತ್ತವೆ. ಸಾವಿರಾರು ಪ್ರಯಾಣಿಕರು ಭೇಟಿ ನೀಡುತ್ತಾರೆ. ಆದರೆ, ಮೂಲ ಸೌಲಭ್ಯಗಳ ವ್ಯವಸ್ಥೆ ಇಲ್ಲದಿರುವುದರಿಂದ ಪರದಾಡುವಂತಾಗಿದೆ.

ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಉಗುಳಿದ ಗುಟ್ಕಾ ಕಲೆಗಳು ಪ್ರಯಾಣಿಕರಲ್ಲಿ ಹೇಸಿಗೆ ಹುಟ್ಟಿಸುತ್ತಿದೆ, ಗಬ್ಬೆದ್ದು ನಾರುತ್ತಿರುವ ಶೌಚಾಲಯದ ದುರ್ವಾಸನೆಗೆ ಪ್ರಯಾಣಿಕರು ಮೂಗು ಮುಚ್ಚಿಕೊಳ್ಳುವಂತಾಗಿದೆ. ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲದ ಕಾರಣ ಜನರು ನಿಲ್ದಾಣದ ಕಾಂಪೌಂಡ್ ಗೋಡೆಗೆ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸಿಂದಗಿ ಬಸ್‌ ನಿಲ್ದಾಣ 1

“ಸರಿಯಾದ ಆಸನಗಳ ವ್ಯವಸ್ಥೆ ಇಲ್ಲ. ಪ್ರಯಾಣಿಸುವ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನಿಂತುಕೊಂಡೇ ತಮ್ಮೂರಿನ ಬಸ್ ಬರುವಿಕೆಗಾಗಿ ಕಾಯುವಂತಹ ದುಃಸ್ಥಿತಿ ಎದುರಾಗಿದೆ. ನಿತ್ಯ ಜನ ಜಂಗುಳಿಯಿಂದ ಕೂಡಿರುವ ಈ ನಿಲ್ದಾಣದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಹಾಗಾಗಿ ಕೂಡಲೇ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು” ಎನ್ನುತ್ತಾರೆ ಪ್ರಯಾಣಿಕರು.

“ದ್ವಿಚಕ್ರ ವಾಹನದ ಶುಲ್ಕ ಸಹಿತ ನಿಲುಗಡೆ ಶುರುವಾಗದೆ ದಶಕಗಳೇ ಕಳೆಯಿತು. ಒಂದು ಬಾರಿಯೂ ಟೆಂಡರ್ ಬೋರ್ಡ್ ಕಾಣಿಸಲಿಲ್ಲ. ಬೈಕ್ ನಿಲ್ಲಿಸುವ ಸವಾರರ ಬಳಿ ₹200 ವಸೂಲಿ ಮಾಡುವ ಟೆಂಡರ್‌ದಾರರು ಚೀಟಿ ನೀಡಿ, ಅದರ ಮೇಲೆ ಕೆಎಸ್‌ಆರ್‌ಟಿಸಿ ಸೀಲ್ ಹಾಕಿ ಕೊಡುತ್ತಾರೆ. ಕೇಳಿದರೆ ಬೆದರಿಕೆ ಹಾಕುತ್ತಿದ್ದಾರೆ” ಎಂಬುದು ಸಾರ್ವಜನಿಕರ ಗಂಭೀರ ಆರೋಪವಾಗಿದೆ.

ಸಿಂದಗಿ ಬಸ್‌ ನಿಲ್ದಾಣ 1 1

“ದೂರದ ಊರಿನಿಂದ ಬರುವ ಪ್ರಯಾಣಿಕರಿಗೆ ರಾತ್ರಿ ತಂಗಲು ಯಾತ್ರಾ ನಿವಾಸದ ಸೌಲಭ್ಯ ಇಲ್ಲದಂತಾಗಿದೆ. ಕಟ್ಟಡವು ಹೆಸರಿಗೆ ಮಾತ್ರವಿದ್ದು, ಜನರಿಗೆ ಉಪಯೋಗವಾಗುತ್ತಿಲ್ಲ. ಹಲವಾರು ವರ್ಷಗಳಿಂದ ರೂಮುಗಳು ಪಾಳು ಬಿದ್ದಿವೆ. ಗೇಟ್‌ಗೆ ಬೀಗ ಜಡಿಯಲಾಗಿದೆ. ಕಳೆದ ತಿಂಗಳು ಜರುಗಿದ ಗ್ಯಾರಂಟಿ ಸಭೆಯಲ್ಲಿ ಕೆಎಸ್‌ಆರ್‌ಟಿಸಿ ಲಾಭದಲ್ಲಿರುವುದಾಗಿ ನಿರ್ವಾಹಕ ಅಧಿಕಾರಿ ಎಸ್ ಬಿ ನಾಗಾವಿ ಹೇಳಿದ್ದರು. ಆದಾಯದಲ್ಲಿ ಮುಂದೆ ಇರುವ ಸಿಂದಗಿ ಘಟಕ ಹಿಂದೆ ಬಿದ್ದಿರುವುದೇಕೆ” ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಸಿಂದಗಿ ಬಸ್‌ ನಿಲ್ದಾಣ 2

“ಗ್ರಾಮೀಣ ಭಾಗಕ್ಕೆ ಸರಿಯಾದ ಸಮಯಕ್ಕೆ ಬಸ್‌ಗಳು ಬರುವುದಿಲ್ಲ. ಕೇಳಿದರೆ ಬಸ್ ಕೆಟ್ಟಿವೆ ಎಂಬ ಸಬೂಬ್ ಹೇಳುತ್ತಾರೆ. ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲ. ಮಹಿಳಾ ವಿಶ್ರಾಂತಿ ಕೊಠಡಿ ಇಲ್ಲ, ಸರಿಯಾದ ವ್ಯವಸ್ಥೆಯೂ ಇಲ್ಲ. ನಿಲ್ದಾಣದಲ್ಲಿ ಪಡ್ಡೆ ಹುಡುಗರ ಹಾವಳಿ ಹೆಚ್ಚಾಗಿದೆ” ಎಂದು ಯುವಜನ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ ತಳವಾರ ಆರೋಪಿಸಿದರು.

ಇದನ್ನೂ ಓದಿದ್ದೀರಾ? ವಿಜಯನಗರ | ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಾಹ್ನವಿ ನೇಮಕ

“ಬಸ್ ನಿಲ್ದಾಣದಲ್ಲಿ ಹೆಚ್ಚಿ ಆಸನಗಳ ಅಳವಡಿಕೆ ಹಾಗೂ ಸಿಸಿಟಿವಿ ಅಳವಡಿಕೆಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಯಾತ್ರಾ ನಿವಾಸ ಟೆಂಡರ್ ಆಗಿದ್ದು, ಆರಂಭಿಸಲು ಸೂಚನೆ ನೀಡಲಾಗಿದೆ. ಬಸ್ ನಿಲ್ದಾಣದಲ್ಲಿ ಮೂಲ ಸೌಲಭ್ಯ ಕಲ್ಪಿಸಲಾಗುವುದು” ಎಂದು ಸಿಂದಗಿ ಘಟಕದ ಮ್ಯಾನೇಜರ್ ವಿಠ್ಠಲ ನಡುವಿನ ಅವರು ಪ್ರತಕ್ರಿಯಿಸಿದ್ದಾರೆ.

ಇನ್ನಾದರೂ ಜನ ಪ್ರತಿನಿದಿಗಳು ಹಾಗೂ ಅಧಿಕಾರಿಗಳು ಇತ್ತ ಗಮನಹರಿಸಿ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...