ದಲಿತ ರಾಜ್ಯಪಾಲರಿಗೆ ಅವಮಾನ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ

Date:

ದಲಿತ ಸಮುದಾಯಕ್ಕೆ ಸೇರಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕಾಂಗ್ರೆಸ್ ಶಾಸಕ, ಸಚಿವರ ನಡೆ ಖಂಡಿಸಿ ಹಾಗೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಕಲಬುರಗಿ, ಬೀದರ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.

ಕಲಬುರಗಿ ನಗರದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಫಲಕಗಳನ್ನು ಪ್ರದರ್ಶಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿದರು.

WhatsApp Image 2024 08 22 at 9.40.27 PM
ಕಲಬುರಗಿಯ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು.

ʼಸಿಎಂ ಸಿದ್ದರಾಮಯ್ಯನವರಿಗೆ ಬೆಂಬಲಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ರಾಜ್ಯಪಾಲರ ಭಾವಚಿತ್ರಕ್ಕೆ ಅವಮಾನಿಸಿ ಅವರ ಭಾವಚಿತ್ರ ದಹಿಸಲಾಗಿದೆ. ಸಚಿವರಾದ ಜಮೀರ್ ಅಹಮ್ಮದ್‌ ಖಾನ್, ಕೃಷ್ಣಬೈರೇಗೌಡ, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ರಾಜ್ಯಪಾಲರಿಗೆ ಅವಮಾನಿಸಿದ ಕಾಂಗ್ರೆಸ್ಸಿಗರ ವಿರುದ್ಧ ಪೊಲೀಸ್‌ ಇಲಾಖೆ ಸ್ವಯಂಪ್ರೇರಿತ ದೂರು ದಾಖಲಿಸಬೇಕುʼ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ,ನಗರಾಧ್ಯಕ್ಷ ಚಂದು ಪಾಟೀಲ, ಎಂಎಲ್ಸಿ ಶಶೀಲ ನಮೋಶಿ, ಶಾಸಕರಾದ ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ಶೋಭಾ ಬಾಣಿ, ಅರುಣಕುಮಾರ ಪಾಟೀಲ್, ಮಾಜಿ ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ದತ್ತಾತ್ರೇಯ ಪಾಟೀಲ್ ರೇವೂರ ಸೇರಿದಂತೆ ಮುಖಂಡರಾದ ಶರಣಪ್ಪ ತಳವಾರ, ಅವ್ವಣ್ಣ ಮ್ಯಾಕೇರಿ, ಅಂಬಾರಾಯ ಅಷ್ಟಗಿ, ಡಾ.ಸುಧಾ ಹಾಲ್ಕಾಯಿ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

ಬೀದರ್‌ : ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬೀದರ್‌ ನಗರದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ಗಣೇಶ ಮೈದಾನದಿಂದ ಆರಂಭಗೊಂಡು ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತ, ಛತ್ರಪತಿ ಶಿವಾಜಿ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿದರು. ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ಮಾಜಿ ಸಚಿವ, ಶಾಸಕ ಪ್ರಭು ಚವ್ಹಾಣ, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ್‌ ಹಾಗೂ ಶರಣು ಸಲಗರ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಮೆರವಣಿಗೆಯುದ್ದಕ್ಕೂ ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2024 08 22 at 8.24.51 PM
ಸಿಎಂ ಸಿದ್ದರಾಮಯ್ಯನವರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ʼರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ದೂರು ಆಧರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಆದರೆ ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಶಾಸಕರು, ಸಚಿವರು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರನ್ನು ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿರುವುದು ಅತ್ಯಂತ ಖಂಡನೀಯʼ ಎಂದರು.

ʼಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾಗೆ ಬಂದ ಗತಿ ತಮಗೂ ಬರುತ್ತದೆ. ನಾವು ಕಾಂಗ್ರೆಸ್ಸಿಗರು ರಾಜಭವನಕ್ಕೆ ನುಗ್ಗಿ ತಮ್ಮನ್ನು ಓಡಿಸುವ ಕೆಲಸ ಮಾಡುತ್ತೇವೆʼ ಎಂದು ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜಾ ಹೇಳಿಕೆ ನೀಡಿದ್ದಾರೆ. ಸಚಿವರಾದ ಜಮೀರ್ ಅಹಮ್ಮದ್ ಖಾನ್, ಕೃಷ್ಣ ಬೈರೇಗೌಡ, ದಿನೇಶ ಗುಂಡುರಾವ್, ಈಶ್ವರ್ ಖಂಡ್ರೆ ಹಾಗೂ ಶಾಸಕ ನಂಜೇಗೌಡ ಅವರು ರಾಜ್ಯಪಾಲರನ್ನು ನಿಂದಿಸಿದ್ದಾರೆ. ಇವರ ವಿರುದ್ಧ ಜಾತಿ ನಿಂದನೆ, ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತಕ್ಷಣ ಕಾನೂನು ಕ್ರಮ ಜರುಗಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಮುಖ್ಯ ನಿರ್ಧಾರಗಳಿಂದ ಹಿಂದೆ ಸರಿದ ಮೋದಿ, ಇದು ಪ್ರಜಾಸತ್ತೆಯ ಗೆಲುವು

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಮಾಜಿ ಶಾಸಕ ಗುಂಡಪ್ಪಾ ವಕೀಲ, ಬುಡಾ ಮಾಜಿ ಅಧ್ಯಕ್ಷ ಬಾಬು ವಾಲಿ, ಮುಖಂಡ ಈಶ್ವರ್‌ ಸಿಂಗ್‌ ಠಾಕೂರ್‌, ಬಿಜೆಪಿ ನಗರ ಘಟಕ ಅಧ್ಯಕ್ಷ ಶಶಿಧರ್‌ ಹೊಸಳ್ಳಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪೀರಪ್ಪಾ ಔರಾದೆ, ಕಿರಣ ಪಾಟೀಲ್‌, ಶಿವಾನಂದ ಮಂಠಾಳಕರ್‌ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...