ಬೀದರ್ ಬಂದ್ | ಬೆಳ್ಳಂ ಬೆಳಿಗ್ಗೆಯೇ ಶುರುವಾದ ಪ್ರತಿಭಟನೆ : ಸಂಪೂರ್ಣ ಸ್ತಬ್ಧ

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಸ್ವಾಭಿಮಾನಿ ಡಾ.ಬಿ.ಆರ್. ಅಂಬೇಡ್ಕರ್ ವಾದಿಗಳ ಸಮಿತಿ ಗುರುವಾರ ಕರೆ ನೀಡಿರುವ ಬೀದರ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಂದ್ ಹಿನ್ನೆಲೆಯಲ್ಲಿ ಬೀದರ್ ತಾಲ್ಲೂಕು ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.ನಗರ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

1002448811

ಅಂಗಡಿ, ಮಳಿಗೆಗಳು, ಮಾಲ್‌ಗಳು ಬಾಗಿಲು ತೆರೆದಿಲ್ಲ. ಸಂಪೂರ್ಣ ಸ್ತಬ್ಧವಾಗಿದೆ.ಜನರು ಅಗತ್ಯ ಕೆಲಸಕ್ಕಾಗಿ ಕಾರು, ಬೈಕ್, ಆಟೋ ಮೊರೆ ಹೋದರೂ, ಜನ ಸಂಚಾರ ವಿರಳವಾಗಿದ್ದು, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ವೃತ್ತ, ರಸ್ತೆಗಳು ಬಿಕೋ ಎನ್ನುತ್ತಿವೆ.ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002449190
ನೌಬಾದ್ ಬಸವೇಶ್ವರ ವೃತ್ತದ ಬಳಿ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಡಾ.ಅಂಬೇಡ್ಕರ್ ವೃತ್ತ, ನೌಬಾದ್ ಚೌಳಿ ಕಮಾನ್ ಬಳಿ ವಿವಿಧ ಸಂಘಟನೆಗಳ ಮುಖಂಡರು ಬೈಕ್ ರ್ಯಾಲಿ ನಡೆಸಿ ಅಮಿತ್ ಶಾ ವಜಾಕ್ಕೆ ಆಗ್ರಹಿಸಿದರು. ಅಮಿತ್ ಶಾ ಅವರ ಅಣುಕು ಶವಯಾತ್ರೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

1002448965
ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಇಲ್ಲದೇ ಬಿಕೋ ಎನ್ನುತ್ತಿದೆ.

ನಗರದ ಕೇಂದ್ರ ಬಸ್ ನಿಲ್ದಾಣ, ಡಾ.ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಗುಂಪಾ ಕಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.ಪ್ರತಿಭಟನಾ ಜಾಥಾ ಸಾಗುವ ಮಾರ್ಗಗಳಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ.

1002449007

ಔಷಧ ಅಂಗಡಿ, ಪೆಟ್ರೊಲ್ ಬಂಕ್, ದಿನಪತ್ರಿಕೆ, ಹೂವು, ಹಾಲಿನ ವ್ಯಾಪಾರಕ್ಕೆ ಬೆಳಿಗ್ಗೆ ಯಾವುದೇ ತೊಂದರೆ ಆಗದಂತೆ ಬಂದ್ ನಿಂದ ವಿನಾಯ್ತಿ ನೀಡಲಾಗಿತ್ತು.ದೂರದ ಊರುಗಳಿಂದ ಬಸ್, ರೈಲು ಮೂಲಕ ನಗರಕ್ಕೆ ಬಂದವರಿಗೆ ಒಂದು ಕಡೆಯಿಂದ ಇನ್ನೊಂದು ಕಡೆಗೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದೇ ಜನರು ಪರದಾಡುತ್ತಿರುವ ದೃಶ್ಯಗಳು ಕಂಡುಬಂದಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...