ರಾಯಚೂರು | ಟಿಪ್ಪು ನಾಮಫಲಕಕ್ಕೆ ಅಪಮಾನ

Date:

ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕೋಮುವಾದಿ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಡೆದಿದೆ. ಕೃತ್ಯವನ್ನು ಖಂಡಿಸಿ ಮುಸ್ಲಿಂ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಸಿರವಾರದ ಮಟನ್ ಮಾರುಕಟ್ಟೆ ಬಳಿಯಿದ್ದ ಟಿಪ್ಪು ನಾಮಫಲಕಕ್ಕೆ ಬುಧವಾರ ಮುಂಜಾನೆ ದುಷ್ಕರ್ಮಿಗಳು ಅಪಮಾನ ಮಾಡಿದ್ದಾರೆ. ಘಟನೆ ಬೆಳಕಿಗೆ ಬಂದ ಬಳಿಕ, ಮುಸ್ಲಿಂ ಸಮುದಾಯದ ಜನರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಬಂದ ಪೊಲೀಸರು, ದುಷ್ಕರ್ಮಿಗಳನ್ನು ಬಂಧಿಸಿ, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಧರಣಿ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...