ಧಾರವಾಡ | ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತನ್ನದೇ ಆದ ಯೋಜನೆಗಳಿವೆ : ಜಿಲ್ಲಾಧಿಕಾರಿ ದಿವ್ಯಪ್ರಭು

Date:

ಕಳೆದ ಆರು ತಿಂಗಳಿನಿಂದ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತಮ್ಮದೇ ಯೋಜನೆಗಳನ್ನು ಹೊಂದಿರುವುದಾಗಿ ತಿಳಿಸಿದರು.

ಧಾರವಾಡ ನಗರದ ಜರ್ನಲಿಸ್ಟ್ ಗಿಲ್ಡ್ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ಸಂವಾದ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ನೂತನ ಜಿಲ್ಲಾಧಿಕಾರಿ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಸರ್ಕಾರಕ್ಕೆ 92 ಕೋಟಿ ಹಣಕಾಸಿನ ನೆರವಿಗಾಗಿ ಕೋರಲಾಗಿದೆ. ಪ್ರಸ್ತುತ ಸಾಲಿನಲ್ಲೇ ಚಾಲನೆ ಆರಂಭಗೊಳ್ಳಬಹುದು” ಎಂದರು.

ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಶೈಕ್ಷಣಿಕ ಮಟ್ಟ ಅದರಲ್ಲಿಯೂ ಎಸ್.ಎಸ್.ಎಲ್.ಸಿ ಯಲ್ಲಿ 22ನೇ ಸ್ಥಾನ ಪಡೆದಿದ್ದು ಮನಸ್ಸಿಗೆ ನೋವುಂಟು ಮಾಡಿತು. ವಿದ್ಯಾಕಾಶಿಯಲ್ಲಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿದ್ದು ಸರಿಯಲ್ಲ. ಅದಕ್ಕಾಗಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಕರಿಗೆ ಪರೀಕ್ಷೆ, ಕಾರ್ಯಾಗಾರ ನಡೆಸುವ ಹಲವಾರು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಖಾಸಗಿ ಸಹಭಾಗಿತ್ವದಲ್ಲಿ ಪೌಷ್ಠಿಕಾಂಶದ ಆಹಾರ ವಿತರಣೆಗೆ ಅಷ್ಟೇ ಅಲ್ಲದೇ ಅಪೌಷ್ಠಿಕತೆಗೆ ಕಾರಣ ಕಂಡು ಹಿಡಿದು ಅದರ ನಿವಾರಣೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಇದನ್ನು ಓದಿದ್ದೀರಾ? ಶೀಘ್ರವೇ ಒಳಮೀಸಲಾತಿ ಕಲ್ಪಿಸಲು ಸಿಎಂ, ಡಿಸಿಎಂಗೆ ಮನವಿ ಮಾಡಿದ್ದೇವೆ: ಕೆ ಎಚ್‌ ಮುನಿಯಪ್ಪ

ನಗರದ ಕೆಲಗೇರಿ ಕೆರೆ ಅತ್ಯಂತ ಫುರಾತವಾದದ್ದು ಸಾಕಷ್ಟು ವಿಸ್ತಾರವಾಗಿದ್ದು ಇದರೊಂದಿಗೆ ಗ್ರಾಮೀಣ ಮಟ್ಟದಲ್ಲಿರುವ 110 ಕೆರೆ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಯನ್ನು ಇನ್ನಷ್ಟು ಆಧುನೀಕರಣಗೊಳಿಸಲಾಗುತ್ತಿದೆ. ನೂತನ ಯಂತ್ರಗಳ, ಎಮ್ಆರ್‌ಐ ಸ್ಕ್ಯಾನ್, ಸಿಟಿ ಸ್ಕ್ಯಾನ್ ಸೇರಿದಂತೆ ಹೊಸ-ಹೊಸ ಯಂತ್ರಗಳನ್ನು ಆಳವಡಿಸಲಾಗುವದು. ಜಿಲ್ಲಾಸ್ಪತ್ರೆಯಲ್ಲಿ ಜನರ ಒತ್ತಡ ಹೆಚ್ಚಾಗುತ್ತಿದೆ. ಹೀಗಾಗಿ ಪಾರ್ಕಿಂಗ್ ಸಮಸ್ಯೆ ಮತ್ತು ಆಟೋ ಮೀಟರ್ ಅಳವಡಿಕೆಯ ಸಮಸ್ಯೆ ಬಗೆಹರಿಸಲು ತಿಳಿಸಿದರು.

ಜರ್ನಲಿಸ್ಟ್ ಗಿಲ್ಡ್ ಅಧ್ಯಕ್ಷ ಬಸವರಾಜ ಹೊಂಗಲ ಸ್ವಾಗತಿಸಿದರು, ಕಾರ್ಯದರ್ಶಿ ನಿಜಗುಣಿ ದಿಂಡಲಕೊಪ್ಪ ಪರಿಚಯಿಸಿದರು. ಗಿಲ್ಡ್ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...