ಬೀದರ್‌ | ಲೋಕಸಭೆ ಚುನಾವಣೆಯಲ್ಲಿ ಕೆಆರ್‌ಎಸ್ ಪಕ್ಷದಿಂದ ಸ್ಪರ್ಧಿಸುವ ಆಕಾಂಕ್ಷಿಗಳ ಸಂದರ್ಶನ

Date:

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಸ್ಪರ್ಧೆಮಾಡಲಿದ್ದು, ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳು ಸಂದರ್ಶನಕ್ಕೆ ಹಾಜರಾಗಬೇಕೆಂದು ಬೀದರ್‌ ಜಿಲ್ಲಾ ಕೆಆರ್‌ಎಸ್ ಪಕ್ಷ ತಿಳಿಸಿದೆ.

ಬೀದರ್‌ ನಗರದ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಜಿಲ್ಲಾಧ್ಯಕ್ಷ ಹಣಮಂತ ಮಟ್ಟೆ ಮಾತನಾಡಿ, “ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಉತ್ತಮ ಹಾಗೂ ಜನಪರ ಕಾಳಜಿ ಉಳ್ಳ ಪ್ರಾಮಾಣಿಕ ರಾಜಕಾರಣಕ್ಕೆ ರಾಜ್ಯದಲ್ಲಿರುವ ಏಕೈಕ ವೇದಿಕೆಯಾಗಿದೆ. ರಾಜಕೀಯ ಪಕ್ಷಗಳು ಕೇವಲ ಭ್ರಷ್ಟಾಚಾರ, ದುರಾಚಾರ ಹಾಗೂ ಸುಳ್ಳು ಭರವಸೆಗಳಿಂದ ಕೂಡಿರುವುದು ಎಂಬ ಬಲವಾದ ನಂಬಿಕೆ ಬೇರೂರಿರುವ ಕಾಲಘಟ್ಟದಲ್ಲಿ, ನಿರಂತರವಾಗಿ ತನ್ನ ಧ್ಯೇಯ ಮತ್ತು ಸಿದ್ದಾಂತಗಳಿಗೆ ಬದ್ದವಾಗಿ, ಅದರಂತೆ ನಡೆಯುತ್ತಿರುವ ಪಕ್ಷ ಕೇವಲ ಕೆ.ಆರ್.ಎಸ್. ಪಕ್ಷ ಮಾತ್ರ” ಎಂದು ಹೇಳಿದರು.

“ದೇಶದಲ್ಲಿ ಇಂದು ವಿಚಿತ್ರ ಹಾಗೂ ಸಂಧಿಗ್ಧ ಸಂದರ್ಭದಲ್ಲಿದ್ದು, ಪ್ರಾಮಾಣಿಕ ಹಾಗೂ ಜನಪರ ರಾಜಕಾರಣವು ಎಂದಿಗಿಂತ ತೀವ್ರವಾಗಿ ಅಗತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಾಮಾಣಿಕರು, ಕನ್ನಡಪರ ಕಾಳಜಿ, ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚಿಸುವ, ಅಕ್ರಮ ನಡೆಸದೆ ಚುನಾವಣೆ ಎದುರಿಸುವ, ದೇಣಿಗೆ ಮೂಲಕ ಚುನಾವಣಾ ಖರ್ಚು ವೆಚ್ವನ್ನು ಎದುರಿಸುವ ಮನಸ್ಥಿತಿ ಹೊಂದಿದವರು, ಜನಪರ ಕಾಳಜಿ ಉಳ್ಳವರು, ಪ್ರಾದೇಶಿಕತೆ, ಒಕ್ಕೂಟ ವ್ಯವಸ್ಥೆಯಲ್ಲಿ ಹಾಗೂ ಮುಖ್ಯವಾಗಿ ದೇಶದ ಸಂವಿಧಾನದಲ್ಲಿ ನಂಬಿಕೆ ಉಳ್ಳವರು ಕೆಆರ್‌ಎಸ್ ಪಕ್ಷ ಸೇರಿ, ರಾಜ್ಯದ ಅಭಿವೃದ್ಧಿಗೆ ಸಹಕರಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜ.6 ಮತ್ತು 7 ರಂದು ಬೆಂಗಳೂರಿನ ರಾಜಾಜಿ ನಗರದ ಪಕ್ಷದ ಕೇಂದ್ರ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ. ಸಂದರ್ಶನದ ನಂತರ ರಾಜ್ಯ ಸಮಿತಿಯು ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಂಭಾವ್ಯ ಅಭ್ಯರ್ಥಿಗಳು ಎಂದು ಘೋಷಿಸುತ್ತದೆ. ಆದ್ದರಿಂದ ಬೀದರ ಜಿಲ್ಲೆಯಿಂದ ಆಸಕ್ತಿ ಉಳ್ಳವರು ನಿಗದಿಪಡಿಸಿದ ದಿನಾಂಕದಂದು ಸದರಿ ಕಛೇರಿಗೆ ಹಾಜರಾಗುವಂತೆ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ತುಕಾರಾಮ ಗೌರೆ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...