ಉಡುಪಿ | ಪಹಲ್ಗಾಮ್‌ ಭಯೋತ್ಪಾದಕ ದಾಳಿ: ಮುಸ್ಲಿಂ ಒಕ್ಕೂಟ ಖಂಡನೆ

Date:

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 27 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಘಟನೆಯು ಅಮಾನವೀಯವಾಗಿದ್ದು ಇದನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.

ಧರ್ಮದ ಹೆಸರಲ್ಲಿ ಕೊಲ್ಲುವ, ಹಿಂಸೆಯನ್ನು ಪ್ರಚೋದಿಸುವ ಕೃತ್ಯ ಖಂಡನಾರ್ಹವಾಗಿದ್ದು ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ವಕ್ತಾರ ಇಕ್ಬಾಲ್ ಮನ್ನಾ ಆಗ್ರಹಿಸಿದ್ದಾರೆ‌.

ಮೃತರ ಕುಟುಂಬಕ್ಕೆ ತಮ್ಮ ಆಪ್ತರನ್ನು ಕಳೆದುಕೊಂಡ ದುಃಖವನ್ನು ಭರಿಸುವ ಶಕ್ತಿಯನ್ನು ದೇವನು ದಯಪಾಲಿಸಲಿಯೆಂದು ಈ ಸಂದರ್ಭದಲ್ಲಿ ಪ್ರಾರ್ಥಿಸುತ್ತೇವೆ ಎಂದು ಒಕ್ಕೂಟದ ಮಾಧ್ಯಮ ವಕ್ತಾರ ಇಕ್ಬಾಲ್ ಮನ್ನಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...