ಕಾಂಗ್ರೆಸ್‌ ಸರ್ಕಾರದ ಕಥೆ ‘ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತ್ತು’ ಎಂಬಂತಾಗಿದೆ: ಬಿಜೆಪಿ ಟೀಕೆ

Date:

  • ‘ಬರದ ಬೇಗೆಯಲ್ಲಿ ರಾಜ್ಯದ ಜನತೆ ಬಸವಳಿಯುತ್ತಿದೆ’
  • ‘ಸಚಿವರು ಮಾತ್ರ ಜಾತಿಗೊಂದು ಡಿಸಿಎಂ ಕೇಳುತ್ತಿದ್ದಾರೆ’

“ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತ್ತು” ಎಂಬ ಗಾದೆ ಮಾತು ಕಾಂಗ್ರೆಸ್‌ ಸರ್ಕಾರಕ್ಕೆ ಅತ್ಯಂತ ಸೂಕ್ತ. ರಾಜ್ಯದ ಜನತೆ ಮಳೆ ಇಲ್ಲದೇ, ಬರದ ಬೇಗೆಯಲ್ಲಿ ಬಸವಳಿಯುತ್ತಿದ್ದರೆ, “ಕೈ” ಸರ್ಕಾರದ ಸಚಿವರುಗಳು ಮಾತ್ರ ಜಾತಿಗೊಂದು ಡಿಸಿಎಂ ಪಟ್ಟ ನೀಡಿ ಎಂದು ಲಾಬಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಕಾಂಗ್ರೆಸ್‌ನಲ್ಲಿ ಎದ್ದಿರುವ ಮೂವರ ಡಿಸಿಎಂ ನೇಮಕ ವಿಚಾರವಾಗಿ ಟ್ವೀಟ್‌ ಮಾಡಿರುವ ಬಿಜೆಪಿ, “103 ವರ್ಷಗಳ ನಂತರ ರಾಜ್ಯದಲ್ಲಿ ಕಂಡು ಕೇಳರಿಯದಂತಹ ಬರ ಕಾಣಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಆಸರೆಯಾಗುವ ಬದಲು, ಕುರ್ಚಿಗಾಗಿ ಕಚ್ಚಾಟ ನಡೆಸುತ್ತಿದೆ ಕಾಂಗ್ರೆಸ್” ಎಂದು ವಾಗ್ದಾಳಿ ನಡೆಸಿದೆ.

“ಲೋಕಸಭಾ ಚುನಾವಣೆ ಬಳಿಕ ಸರ್ಕಾರವೇ ಇರುವುದಿಲ್ಲ ಎಂಬುದನ್ನು ಸಚಿವರು ಹೇಳುತ್ತಾರೆಂದರೆ, ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಖಾತ್ರಿಯಾದಂತೆ” ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾತೆತ್ತಿದರೆ ಮೋದಿ

“ತಮ್ಮ ಜವಾಬ್ದಾರಿ, ಅಧಿಕಾರವನ್ನು ಮರೆತ ಸಿದ್ದರಾಮಯ್ಯರವರು ಮಾತೆತ್ತಿದರೆ ಪ್ರಧಾನಿ ನರೇಂದ್ರ ಮೋದಿ ಅವರು
ಅವರು ಮಧ್ಯಪ್ರವೇಶಿಸಬೇಕು ಎನ್ನುತ್ತಾರೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೂ ಅವರು ಮೋದಿಯವರ ಮೊರೆ ಹೋದರೂ ಅಚ್ಚರಿಯಲ್ಲ” ಎಂದು ಲೇವಡಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿವಾದ | ಸುಪ್ರೀಂಗೆ ಅರ್ಜಿ ಸಲ್ಲಿಸಿದ ಇಬ್ಬರು ರೈತರು

“ಬಿಕೆ ಹರಿಪ್ರಸಾದ್‌ ಅವರು ಸಿಎಂ ಬದಲಿಸುವ ಮಾತನಾಡುತ್ತಿದ್ದಾರೆ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು, ಮೂರು ಡಿಸಿಎಂ ಸ್ಥಾನಕ್ಕಾಗಿ ಕಿತ್ತಾಟ ಜೋರಾಗಿದೆ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು, ರಾಜ್ಯ ಸರ್ಕಾರದ ವೈಫಲ್ಯದಿಂದ ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ತೀವ್ರಗೊಂಡಿದೆ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು, ಶ್ಯಾಡೋ ಸಿಎಂ ಹಾವಳಿ ಹೆಚ್ಚಾಗಿ, ರಾಜ್ಯದ‌ ಸಚಿವರು ಹಾಗೂ ಅಧಿಕಾರಿಗಳು ಬೇಸತ್ತಿದ್ದಾರೆ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು, ಹಾಗೂ ರಾಜ್ಯದಲ್ಲಿ ಕಮಿಷನ್‌, ಕಲೆಕ್ಷನ್‌, ವರ್ಗಾವಣೆ ದಂಧೆ ಹೆಚ್ಚಾಗಿದೆ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು!” ಎಂದು ಬಿಜೆಪಿ ವ್ಯಂಗ್ಯವಾಡಿದೆ.

“ಪ್ರಧಾನಿ ಮೋದಿಯವರಿಗೆ ದೇಶ ಮುನ್ನಡೆಸುವ ಜವಾಬ್ದಾರಿ ಇದೆ. ನಿಮಗೂ ರಾಜ್ಯದ ಜವಾಬ್ದಾರಿ ಇದೆ. ಮೊದಲು ನಿಮ್ಮ ಒಳ ಜಗಳದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ, ರಾಜ್ಯದ ಜನರ ಹಿತ ಕಾಪಾಡಲು ಮಾಡಬೇಕಾದ ಕೆಲಸಗಳನ್ನು ಮಾಡಿ, ಮುಖ್ಯಮಂತ್ರಿ ಸ್ಥಾನದ ಜವಾಬ್ದಾರಿ ನಿರ್ವಹಿಸಿ” ಎಂದು ಕುಟುಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...