ದ್ವೇಷ ಭಾಷಣವನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬುವುದು ಖೇದಕರ: ಸಾಲಿಡಾರಿಟಿ ಯೂತ್ ಮೂವ್ಮೆಂಟ್

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಗಂಭೀರ ಹಲ್ಲೆ ನಡೆದಿದ್ದು, ಸ್ಥಳದಲ್ಲೇ ಒಬ್ಬನು ಮೃತನಾಗಿದ್ದಾನೆ, ಇನ್ನೊಬ್ಬ ಯುವಕ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯು ಕೋಮು ದ್ವೇಷದ ರಾಜಕಾರಣಕ್ಕೆ ತತ್ತರಿಸಿದೆ. ಇಷ್ಟೆಲ್ಲ ಬೆಳವಣಿಗೆ ನಡೆಯುತ್ತಿದ್ದರೂ ಗೃಹ ಇಲಾಖೆ ದ್ವೇಷ ಭಾಷಣವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬುವುದು ಖೇದಕರ ಎಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ತಿಳಿಸಿದೆ.

ಬಂಟ್ವಾಳದಲ್ಲಿ ಅಮಾಯಕ ಯುವಕ ರಹೀಂ ಕೊಲೆ ಪ್ರಕರಣವನ್ನು ಖಂಡಿಸಿರುವ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಘಟಕವು, ಅಮಾಯಕರು ಕೋಮು ರಾಜಕೀಯಕ್ಕೆ ಬಲಿಯಾಗುತ್ತಿರುವುದಕ್ಕೆ ಇದು ಮತ್ತೊಂದು ನಿದರ್ಶನವಾಗಿದೆ.‌ ಹೆಣದ ಮೇಲಿನ ರಾಜಕಾರಣ ಮತ್ತು ಕೊಲ್ಲುವ ಸಂಸ್ಕೃತಿಯನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು ಈ ಅಮಾನುಷ ಕೃತ್ಯ ನಡೆಸಿರುವ ಅಪರಾಧಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸುತ್ತೇವೆ. ಎಂದು ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಈ ಬಗೆಯ ಕೋಮು ದ್ವೇಷ ಪ್ರೇರಿತ ಕೊಲೆ ಮತ್ತು ಹಲ್ಲೆಗಳು ನಿರಂತರವಾಗಿ ನಡೆಯುತ್ತಿದ್ದು, ಇದಕ್ಕೆ ಪ್ರಮುಖ ಕಾರಣ ಯುವಕರಲ್ಲಿ ಕೋಮು ದ್ವೇಷವನ್ನು ಬಿತ್ತುತ್ತಿರುವ ದ್ವೇಷ ಭಾಷಣಕಾರರು. ತಮ್ಮ ದ್ವೇಷಭಾಷಣಗಳಿಂದ ಯುವಕರನ್ನು ತಪ್ಪುದಾರಿಗೆ ತಳ್ಳುತ್ತಿರುವ ದ್ವೇಷ ಭಾಷಣಕಾರರನ್ನು ಪೊಲೀಸರು ಗುರುತಿಸಿ ತಕ್ಷಣ ಬಂಧಿಸಬೇಕು. ಇಂತಹ ಕೃತ್ಯ ಪುನಾರವರ್ತಿಸದಂತೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದರೂ ಸಹ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬುದು ಖೇದಕರ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಂಗಳೂರು | ಯುವಕ ರಹಿಮಾನ್ ಕೊಲೆ ಪ್ರಕರಣ: ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಎಫ್‌ಐಆರ್

ಈ ಹಿಂದೆ ನಡೆದ ಮಾಬ್ ಲಿಂಚಿಂಗ್ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಮೇಲೆ ಕಾನೂನು ಕ್ರಮ ಜರುಗಿಸದೇ ಇರುವುದು ಸಹ ಈ ಕ್ರಿಮಿನಲ್ ಕೆಲಸಗಳಿಗೆ ಕುಮ್ಮಕ್ಕು ನೀಡಿದಂತಾಗಿದೆ. ಗೃಹ ಸಚಿವರು ಮತ್ತು ಮಾನ್ಯ ಮುಖ್ಯಮಂತ್ರಿಗಳು ಈ ಬಗ್ಗೆ ವಿಶೇಷ ಕಾಳಜಿ ವಹಿಸಿ ಅಮಾಯಕ ಯುವಕರ ಕುಟುಂಬಕ್ಕೆ ನ್ಯಾಯ ಸಿಗುವಂತೆ ಮಾಡಬೇಕು. ಇಂತಹ ಪ್ರಕರಣಗಳಲ್ಲಿ ತಪಿತ್ತಸ್ಥರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಬೇಕು ಎಂದು ಸಾಲಿಡಾರಿಟಿ ಒತ್ತಾಯಿಸಿದೆ.

ಈ ಹಿಂದೆ ಕುಡುಪುವಿನಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸಿದ ಪೋಲಿಸ್ ಕಮಿಷನರ್ ಅವರು ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣವಾಗಿ ವಿಫಲರಾಗಿರುವುದಕ್ಕೆ ಈ ಹತ್ಯೆ ನಡೆಯಲು ಕಾರಣವಾಗಿದೆ ಎಂಬುದು ಮೇಲ್ನೋಟಕ್ಕೆ ಸತ್ಯ. ಆದ್ದರಿಂದ ಪೋಲಿಸ್ ಆಯುಕ್ತರನ್ನು ತಕ್ಷಣ ಬದಲಿಸಿ ಬೇರೆಯವರನ್ನು ನೇಮಿಸಬೇಕು ಹಾಗೂ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ನಡೆಸಲು ವಿಶೇಷ ತಂಡ ಹಾಗೂ ತನಿಖಾಧಿಕಾರಿಯನ್ನು ನೇಮಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ಕರ್ನಾಟಕವು ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...