ಜನರ ಧ್ವನಿಯಾಗಬೇಕಾದದ್ದು ಪತ್ರಕರ್ತರ ಸಾಮಾಜಿಕ ಜವಾಬ್ದಾರಿ: ರಾಜ್‌ದೀಪ್ ಸರ್ದೇಸಾಯಿ

Date:

‘ರಾಜಕಾರಣಿಗಳ ಸುದ್ದಿಗಿಂತ ಜನರು ಪ್ರತಿನಿತ್ಯ ಎದುರಿಸುತ್ತಿರುವ ಸಮಸ್ಯೆಗಳನ್ನು ಮುನ್ನೆಲೆಗೆ ತರಬೇಕಾದದ್ದು ಪತ್ರಕರ್ತರಾದವರ ಕರ್ತವ್ಯ. ಪತ್ರಕರ್ತರು ತಮ್ಮ ಈ ಕರ್ತವ್ಯದ ಮೂಲಕವೇ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಸಾಮಾಜಿಕ ಜವಾಬ್ದಾರಿ ಮೆರೆಯಬೇಕು’ ಎಂದು ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅಭಿಪ್ರಾಯಿಸಿದರು.

ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ತಮ್ಮ ಹೊಸ ಪುಸ್ತಕ ‘2024: The Election that Surprised India’ ಬಿಡುಗಡೆ ಕಾರ್ಯಕ್ರಮದಲ್ಲಿ ನಡೆಸಿದ ಸಂವಾದದ ವೇಳೆ ಅವರು ಮಾತನಾಡಿದರು.

‘ಸತ್ಯ ಎಷ್ಟೇ ಕಹಿಯಾಗಿದ್ದರೂ ಅದನ್ನು ಹೇಳಲೇಬೇಕಿದೆ. ಕೋವಿಡ್ ಸಂದರ್ಭದಲ್ಲಿ ಕೇವಲ 4 ಲಕ್ಷ ಮೃತಪಟ್ಟಿದ್ದಾರೆಂದು ಸರ್ಕಾರದ ವರದಿಗಳು ಹೇಳುತ್ತಿವೆ. ಕೆಲವೊಂದು ಖಾಸಗಿ ಸಂಸ್ಥೆಗಳು 40 ಲಕ್ಷ ಮೃತಪಟ್ಟರೆಂದು ವರದಿ ಮಾಡಿವೆ. ನಿಜಕ್ಕೂ ಎಷ್ಟು ಜನ ಮೃತಪಟ್ಟಿದ್ದಾರೆ ಎಂಬುದನ್ನು ಅರಿತುಕೊಳ್ಳುವ ಹಕ್ಕು ಈ ದೇಶದ ಪ್ರತಿಯೊಬ್ಬ ಜವಾಬ್ದಾರಿಯುವ ನಾಗರಿಕರಿಗೆ ಇದೆ. ಅದನ್ನು ಪತ್ರಕರ್ತ ಪ್ರಶ್ನಿಸಿದರೆ, ಆತ ಭಾರತ ವಿರೋಧಿ ಹೇಗಾಗುತ್ತಾನೆ?’ ಎಂದು ರಾಜ್‌ದೀಪ್ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನಮ್ಮ ದೇಶದ ವೈವಿಧ್ಯತೆಯೇ ಸುಭದ್ರವಾದ ಪಂಚಾಗ. 140 ಕೋಟಿ ಜನರು ವಾಸಿಸುತ್ತಿರುವುದೇ ದೊಡ್ಡ ಸಂಪತ್ತು. ಮುಂಬೈನ ಧಾರಾವಿಯ ಸ್ಲಂನಲ್ಲಿ ವಾಸಿಸುತ್ತಿರುವ ಜನರಿಗೂ, ಉದ್ಯಮಿ ಅಂಬಾನಿಗೂ ಇರುವ ಹಕ್ಕು ಮತದಾನವಾಗಿದೆ. ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕಿನ ಮೂಲಕ 2024ರ ಲೋಕಸಭಾ ಚುನಾವಣೆಯು ಈ ದೇಶದ ಜನರಿಗೆ ಏನು ಬೇಕು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದರು. ಆ ಮೂಲಕ ‘ಚಾರ್ ಸೌ ಪಾರ್’ ಎನ್ನುತ್ತಿದ್ದವರನ್ನೂ ಸೇರಿಸಿ ಎಲ್ಲರ ರಾಜಕೀಯ ಲೆಕ್ಕಾಚಾರವು ಜನರು ಉಲ್ಟಾಪಲ್ಟಾ ಮಾಡಿದರು. 2024ರ ಚುನಾವಣಾ ಫಲಿತಾಂಶವೇ ನನ್ನನ್ನು ಈ ಪುಸ್ತಕ ಬರೆಯಲು ಪ್ರೇರೇಪಿಸಿತು’ ಎಂದು ತಿಳಿಸಿದರು.

‘ವಾಟ್ಸಾಪ್‌, ಫೇಸ್‌ಬುಕ್ ನಮ್ಮ ಜೀವನದ ನೆಮ್ಮದಿಯನ್ನು ಹಾಳುಗೆಡವುತ್ತಿದೆ. ಈ ಬಗ್ಗೆ ವಿದ್ಯಾರ್ಥಿ, ಯುವಕರು ಜಾಗೃತರಾಗಬೇಕಿದೆ. ನೈಜ ಯುನಿವರ್ಸಿಟಿಗಳಿಗಿಂತ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಕೋಟ್ಯಂತರ ಜನರಿದ್ದಾರೆ. ಎಐ ತಂತ್ರಜ್ಞಾನ ಬಂದಿರುವ ಇಂದಿನ ಆಧುನಿಕ ಸಮಯದಲ್ಲಿ ಸುಳ್ಳುಸುದ್ದಿಗಳ ಬಗ್ಗೆ ಜನರು ಜಾಗರೂಕರಾಗಿರಬೇಕು. ಪುಸ್ತಕ ಓದುವವರಾಗಬೇಕು. ಪುಸ್ತಕದಿಂದ ಜ್ಞಾನ ವೃದ್ಧಿಯಾಗುತ್ತದೆ’ ಎಂದು ರಾಜ್‌ದೀಪ್ ಸರ್ದೇಸಾಯಿ ತಿಳಿಸಿದರು.

ಇದನ್ನು ಓದಿದ್ದೀರಾ? ನಾಲ್ಕೈದು ವರ್ಷ ಬದುಕಿರುತ್ತೇನೆ; ನೀರಿಗಾಗಿ ಹೋರಾಟ ಮಾಡುತ್ತೇನೆ: ದೇವೇಗೌಡ

ಸಂವಾದ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತೆ ಮಾಯಾ ಶರ್ಮಾ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ನಿಸಾರ್ ಅಹ್ಮದ್‌, ಕುಲಪತಿ ಪ್ರೊ.ವಿಜಯನ್ ಇಮ್ಯಾನುಯೆಲ್, ಉಪಕುಲಪತಿಗಳಾದ ಡಾ. ವಿದ್ಯಾ ಶೆಟ್ಟಿ,ಡಾ. ಸಮೀರುದ್ದೀನ್ ಖಾನ್, ರಿಜಿಸ್ಟ್ರಾರ್ ಡಾ. ಸಮೀನಾ ನೂರ್ ಅಹ್ಮದ್, ಡಾ. ನಫೀಸಾ ಅಹ್ಮದ್, ಲಿಟ್ಲ್ ಫ್ಲವರ್ ಶಾಲೆಯ ಚೇರ್‌ಮೆನ್ ಇಕ್ಬಾಲ್ ಅಹ್ಮದ್ ಅಹ್ಮದ್ ಸೇರಿದಂತೆ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...