ಬೀದರ್‌ | ಸ್ವಾವಲಂಬಿ ಬದುಕಿಗೆ ಐಟಿಐ ಶಿಕ್ಷಣ ಪೂರಕ: ಶಾಸಕ ಪ್ರಭು ಚವ್ಹಾಣ

Date:

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಸಾಕಷ್ಟು ಪರಿಶ್ರಮ ಅವಶ್ಯಕತೆಯಿದೆ. ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಐಟಿಐ ಶಿಕ್ಷಣ ನೆರವಾಗಲಿದೆ ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ ಚವ್ಹಾಣ ಹೇಳಿದರು.

ಔರಾದ್(ಬಿ) ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾದ 2023ನೇ ಸಾಲಿನ ಕುಶಲಕರ್ಮಿಗಳ ಘಟಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ” ಔರಾದ್ ಐಟಿಐ ಕಾಲೇಜಿನಲ್ಲಿ ಸುಸಜ್ಜಿತ ಕಟ್ಟಡ, ಯಂತ್ರೋಪಕರಣಗಳು, ನುರಿತ ಬೋಧಕ ಸಿಬ್ಬಂದಿ, ಅಗತ್ಯ ಕಂಪ್ಯೂಟರ್ ವ್ಯವಸ್ಥೆಯನ್ನು ಹೊಂದಿದ್ದು, ಈ ಭಾಗದಲ್ಲಿಯೇ ಮಾದರಿ ಕಾಲೇಜಾಗಿ ಮಾರ್ಪಟ್ಟಿದೆ. ಬಡ ಮಕ್ಕಳಿಗೆ ಕೌಶಲ್ಯ ತರಬೇತಿ ಕಲ್ಪಿಸಿ ಉದ್ಯೋಗಗಳನ್ನು ಕಲ್ಪಿಸಲು ನೆರವಾಗುತ್ತಿದೆ. ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ ಯಶಸ್ಸು ಗಳಿಸಬೇಕೆಂದು” ಸಲಹೆ ನೀಡಿದರು.

“ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಿ ಕೆಲಸ ಮಾಡುತ್ತಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಲೇಜಿನಿಂದ ಬರುವ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದ್ದೇನೆ. ಇಂದಿನ ಅವಶ್ಯಕತೆಗೆ ಅನುಗುಣ ತಂತ್ರಜ್ಞಾನದ ಕಲಿಕೆಗಾಗಿ 30 ಕಂಪ್ಯೂಟರ್‌ಗಳ ಖರೀದಿಗೆ ಅನುದಾನ ಮೀಸಲಿಡಲಾಗಿದೆ. ಕಾಲೇಜಿನ ಅಭಿವೃದ್ಧಿಗೆ ಸದಾ ಸಿದ್ಧನಿದ್ದು, ಮುಂದಿನ ದಿನಗಳಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ” ಪ್ರಾಚಾರ್ಯರಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ಉಪನ್ಯಾಸ ನೀಡಿದ ಮಲ್ಲಿಕಾರ್ಜುನ ಟಂಕಸಾಲೆ ಮಾತನಾಡಿ, “ವಿದ್ಯಾರ್ಥಿಗಳು ಕಾಟಾಚಾರಕ್ಕೆ ಕಲಿಯದೇ ಸುಂದರ ಜೀವನ ರೂಪಿಸಿಕೊಳ್ಳುವ ಕನಸಿನೊಂದಿಗೆ ಶ್ರಮ ವಹಿಸಬೇಕು. ಕಾಲೇಜಿನಲ್ಲಿ ಕಲಿಕೆಗೆ ಬೇಕಾದ ಎಲ್ಲ ಸೌಕರ್ಯಗಳು ಲಭ್ಯವಿದ್ದು, ಇದರ ಸದುಪಯೋಗ ಪಡೆದಲ್ಲಿ ಮಾತ್ರ ಉತ್ತಮ ಉದ್ಯೋಗಗಳನ್ನು ಪಡೆಯಲು ಸಾಧ್ಯ” ಎಂದರು.

ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಶೈಲಜಾ ಮಾತನಾಡಿ, “ಔರಾದ ಸರಕಾರಿ ಐಟಿಐ ಕಾಲೇಜು ಗಡಿ ಭಾಗದಲ್ಲಿದ್ದರೂ, ಡಿಜಿಟಲ್ ರೂಮ್, ರೊಬೊಟಿಕ್, ಸಿಎನ್‌ಸಿ, ಇತ್ತೀಚಿನ ವರ್ಷನ್‌ನ ಗಣಕಯಂತ್ರಗಳು
ಮತ್ತು ಕ್ರಿಯಾಶೀಲ ಸಿಬ್ಬಂದಿಯಿದ್ದಾರೆ. ಮಕ್ಕಳು ಉಳಿದುಕೊಳ್ಳಲು ಉತ್ತಮ ಹಾಸ್ಟಲ್ ವ್ಯವಸ್ಥೆಯೂ ಇದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಇಲ್ಲಿದೆ” ಎಂದು ವರ್ಣಿಸಿದರು.

ಕಾಲೇಜು ಪ್ರಾಚಾರ್ಯ ಯುಸೂಫಮಿಯ್ಯ ಜೋಜನಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಸ್ಥೆಯಲ್ಲಿ ಉತ್ತೀರ್ಣರಾದ ಕುಶಲಕರ್ಮಿಗಳಿಗೆ ಶಾಲು ಹೊದಿಸಿ, ನೆನಪಿನ ಕಾಣಿಕೆಯೊಂದಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು. ಇದೇ ವೇಳೆ ಮಾಜಿ ಯೋಧರು ಹಾಗೂ ಮಕ್ಕಳ ಪಾಲಕರಾದ ದಿಲಿಪಕುಮಾರ ಸಿದ್ದೇಶ್ವರ ಹಾಗೂ ತಂತ್ರಜ್ಞಾನದಲ್ಲಿ ಡಾಕ್ಟರೇಟ್ ಪಡೆದ ಪಾಲಿಟೆಕ್ನಿಕ್ ಉಪನ್ಯಾಸಕ ಡಾ.ಸಂಜೀವ ಕುಮಾರ ಅವರನ್ನು ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

ಕಾರ್ಯಕ್ರಮದಲ್ಲಿ ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ಆಶೋಕ ಅಲ್ಮಾಜೆ, ಶ್ರೀನಿವಾಸ ಖೂಬಾ, ಉಪನ್ಯಾಸಕ ಹಣಮಂತ ಕಾಳೆ, ಸಂಸ್ಥೆಯ ಆಡಳಿತ ಅಧಿಕಾರಿ ಅನೀಲಕುಮಾರ ಶಾಂತಪೂರೆ, ಕಛೇರಿ ಅಧೀಕ್ಷಕ ಸುದರ್ಶನಕುಮಾರ ಮಂಗಲಗಿಕರ ಹಾಗೂ ಇತರರಿದ್ದರು. ಹುಲಸೂರೆ ಚಂದ್ರಕಾಂತ ನಿರೂಪಿಸಿದರು. ಧನರಾಜ ಸ್ವಾಮಿ ಸ್ವಾಗತಿಸಿದರು. ಸಂಗಮೇಶ ಮರಖಲೆ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...