ತುಮಕೂರು ಜಿಲ್ಲಾ ಪಂಚಾಯತಿಗೆ ಜೆ.ಎಸ್.ಜೆ.ಬಿ. ರಾಷ್ಟ್ರ ಪ್ರಶಸ್ತಿ

Date:

 ತುಮಕೂರು ಜಿಲ್ಲಾ ಪಂಚಾಯಿತಿಯು 2024-25ನೇ ಸಾಲಿನಲ್ಲಿ 9,885 ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಶಕ್ತಿ ಇಲಾಖೆ ನೀಡುವ “ಜಲ ಸಂಚಾಯಿ- ಜನ ಭಾಗಿದಾರಿ” (ಜೆ.ಎಸ್.ಜೆ.ಬಿ) ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದೆ.

ನವದೆಹಲಿಯಲ್ಲಿ ನವೆಂಬರ್ 18ರಂದು ನಡೆದ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರ ಉಪಸ್ಥಿತಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ನೀಡಿದ ಪ್ರಶಸ್ತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಜಿ. ಪ್ರಭು ಅವರು ಸ್ವೀಕರಿಸಿದರು.

1002377170

ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅವರ ಮಾರ್ಗದರ್ಶನ ಮತ್ತು ನಿರ್ದೇಶನದಲ್ಲಿ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ 2738 ಗ್ರಾಮಗಳಲ್ಲಿ 9,885 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಜಲ ಮೂಲದ ಸಂರಕ್ಷಣೆಯಡಿ ಅಂತರ್ಜಲ ವೃದ್ಧಿಗಾಗಿ, ನೀರು ಸಂರಕ್ಷಣೆಗೆ ಆದ್ಯತೆ ನೀಡಲಾಗಿದ್ದು, ಕಂದಕ ಬದು, ಕೆರೆ ಹೂಳೆತ್ತುವುದು, ಕಟ್ಟೆ ಅಭಿವೃದ್ಧಿ, ಕಾಲುವೆ ಅಭಿವೃದ್ಧಿ, ಬೆಟ್ಟಗಳಲ್ಲಿ ಸಮಪಾತಳಿ ಕಂದಕ ಬದುಗಳ ನಿರ್ಮಾಣ, ಕಲ್ಯಾಣಿಗಳ ಅಭಿವೃದ್ಧಿ, ಚೆಕ್ ಡ್ಯಾಮ್ ನಿರ್ಮಾಣ, ಇಂಗು ಗುಂಡಿ ಸೇರಿದಂತೆ ಹಲವು ಕಾಮಗಾರಿಗಳಿಂದ ನೀರು ಶೇಖರಣೆಗೊಂಡು ಅಂತರ್ಜಲ ಮಟ್ಟ ಹೆಚ್ಚಲು ಕಾರಣವಾಗಿದೆ.

1002377131

ಜಿಲ್ಲೆಯಲ್ಲಿ ವಿಶೇಷವಾಗಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮಿಷನ್-500 ಅಭಿಯಾನ ಕೈಗೊಂಡು ರೈತರ ಜಮೀನುಗಳಲ್ಲಿ ಬದು ಕಾಮಗಾರಿಗಳನ್ನು ಅನುಷ್ಟಾನಿಸಲಾಗಿದೆ. ಈ ಎಲ್ಲಾ ಕಾಮಗಾರಿಗಳ ಪರಿಣಾಮವಾಗಿ “ಜಲ ಸಂರಕ್ಷಣೆ-ಜನರ ಭಾಗವಹಿಸುವಿಕೆ ಅಭಿಯಾನ” ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಈ ಪ್ರಶಸ್ತಿ ಲಭಿಸಿದೆ.

ಈ ಪ್ರಶಸ್ತಿ ಸಮಾರಂಭದಲ್ಲಿ ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಭಾಗಿಯಾಗಿದ್ದರು.

ಈ ಸಂತಸದ ವಿಷಯವನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರೊಂದಿಗೆ ಹಂಚಿಕೊಳ್ಳಲಾಯಿತು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...