ಅಧಿವೇಶನದಲ್ಲಿ ಆಗಬೇಕಾದ್ದೇನು | ಬೆಳಗಾವಿಯ ಖಾಸಗಿ ‘ಜೈ ಕಿಸಾನ್’ ಮಾರುಕಟ್ಟೆ ಚರ್ಚೆಗೆ ಬರುವುದೇ?

Date:

ಬೆಳಗಾವಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಕೃಷಿ ಎಪಿಎಂಸಿ ಹೋಲ್​ಸೇಲ್ ತರಕಾರಿ ಮಾರುಕಟ್ಟೆ ಇರುವಾಗಲೂ 3 ವರ್ಷದ ಹಿಂದೆ ನಿರ್ಮಾಣವಾಗಿರುವ ಖಾಸಗಿ ಜೈ ಕಿಸಾನ್ ಹೋಲ್ ಸೇಲ್‌ ಮಾರುಕಟ್ಟೆಯು ರೈತರ ಶೋಷಣೆಯ ಪ್ರತೀಕವಾಗಿ ನಿಂತಿದೆ ಎನ್ನುವುದು ರೈತ ಮುಖಂಡರ ಆರೋಪವಾಗಿದೆ.

ಸರ್ಕಾರಿ ಎಪಿಎಂಸಿ ಹೋಲ್​ಸೇಲ್ ತರಕಾರಿ ಮಾರುಕಟ್ಟೆ ಉಳಿಸಬೇಕು. ಖಾಸಗಿ ಮಾರುಕಟ್ಟೆ ಬಂದ್ ಮಾಡಬೇಕು‌. ಎಪಿಎಂಸಿ ಕಾಯ್ದೆ ಪರಿಣಾಮವಾಗಿ ಬೆಳಗಾವಿ ಸರ್ಕಾರಿ ಎಪಿಎಂಸಿ ಮಾರುಕಟ್ಟೆ ಇದ್ದರೂ ಪರ್ಯಾಯವಾಗಿ ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆಗೆ ಅನುಮತಿ ಕೊಡಲಾಗಿದೆಯೆಂದು ಆರೋಪಿಸಿ ವರ್ತಕರು ಹಲವು ವರ್ಷಗ’ಳಿಂದಲೂ ಪ್ರತಿಭಟನೆ ನಡೆಸುತ್ತಿದ್ದರು. 2022ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ವಿರುದ್ಧವೂ ಪ್ರತಿಭಟನೆಗಳನ್ನು ಮಾಡುತ್ತಿದ್ದರು. ಈ ವೇಳೆ ಡಿ ಕೆ ಶಿವಕುಮಾರ್‌ ಅವರು ಭೇಟಿ ನೀಡಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಂಕಷ್ಟ ಈಡೇರಿಸುವುದಾಗಿ ಹಾಗೂ ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್‌ ಮಾಡಿಸುವುದಾಗಿ ಭರವಸೆ ನೀಡಿದ್ದರು. ಇದೀಗ ತಮ್ಮದೇ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿರುವ ಡಿಕೆಶಿ ಈವರೆಗೂ ರೈತರ ಬಳಿ ತಿರುಗಿಯೂ ನೋಡಿಲ್ಲ.

ಎಪಿಎಂಸಿ ಹೋಲ್​ಸೇಲ್ ತರಕಾರಿ ಮಾರುಕಟ್ಟೆ ಕುರಿತಂತೆ ಸರ್ಕಾರ ಉಸಿರೆತ್ತದ ಹಿನ್ನೆಲೆಯಲ್ಲಿ, ಬೆಳಗಾವಿ ಅಧಿವೇಶನದ ವೇಳೆ ರೈತರೇ ಮತ್ತೊಮ್ಮೆ ಸರ್ಕಾರಕ್ಕೆ ಮನವರಿಕೆ ಮಾಡಲು ಮುಂದಾಗಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಜೈ ಕಿಸಾನ್‌ ತರಕಾರಿ ಮಾರುಕಟ್ಟೆ 1

ರೈತ ಮುಖಂಡರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಬೆಳಗಾವಿಯಲ್ಲಿರುವ ಸರ್ಕಾರಿ ಕೃಷಿ ಮಾರುಕಟ್ಟೆಯು ಸರ್ಕಾರದ ಅಧೀನದಲ್ಲಿದ್ದು, ಪ್ರತಿಯೊಂದು ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ನಿಗದಿ ಮಾಡಲಾಗುತ್ತದೆ. ಆದರೆ ನಗರದಲ್ಲಿ ತಲೆ ಎತ್ತಿರುವ ಖಾಸಗಿ ಜೈ ಕಿಸಾನ್ ಮಾರುಕಟ್ಟೆಯಲ್ಲಿ ರೈತರ ಕೃಷಿ ಉತ್ಪನ್ನಗಳಿಗೆ ನಿಶ್ಚಿತ ಬೆಲೆ ನಿಗದಿ ಮಾಡುವವರು ಯಾರು? ಖರೀದಿ ಮಾಡುವವರು ಯಾರು? ಖರೀದಿಸಿದ ನಂತರ ಇಲ್ಲಿನ ಸಗಟು ವ್ಯಾಪಾರಸ್ಥರು ನ್ಯಾಯಯುತವಾದ ಬೆಲೆ ನೀಡುವ ವಿಶ್ವಾಸ ರೈತರಲ್ಲಿ ಇಲ್ಲ. ಇಲ್ಲಿ ರೈತರಿಗೆ ಶೋಷಣೆಯಾಗುತ್ತಿದೆ” ಎಂದು ರೈತ ಮುಖಂಡರ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಜೈ ಕಿಸಾನ್‌ ತರಕಾರಿ ಮಾರುಕಟ್ಟೆ 2

“2022ರಲ್ಲಿ ಭಾರತೀಯ ಕೃಷಿಕ ಸಮಾಜದ ರೈತ ಸಂಘಟನೆ ಮತ್ತು ಸರ್ಕಾರಿ ಎಪಿಎಂಸಿ ಸಗಟು ವ್ಯಾಪಾರಸ್ಥರು ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಿದಾಗ ಇಂದಿನ ಉಪಮುಖ್ಯಮಂತ್ರಿ ಆಗಮಿಸಿ ಉಪವಾಸ ಕೈ ಬಿಡುವಂತೆ ಮನವಿ ಮಾಡಿ ನಮ್ಮ ಸರ್ಕಾರ ಬಂದ ನಂತರ ನಿಮ್ಮ ಬೇಡಿಕೆ ಈಡೇರಿಸುತ್ತೇವೆಂದು ಹೇಳಿದ್ದರು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಈ ಕಡೆ ಗಮನ ಹರಿಸಿಲ್ಲ” ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೈ ಕಿಸಾನ್‌ ತರಕಾರಿ ಮಾರುಕಟ್ಟೆ 3

“ಬೆಳಗಾವಿ ನಗರದಲ್ಲಿ ನಿರ್ಮಾಣವಾಗಿರುವ ಜೈ ಕಿಸಾನ್ ಖಾಸಗಿ ತರಕಾರಿ ಮಾರುಕಟ್ಟೆ ಪ್ರಾರಂಭವಾದುದರಿಂದ ಎಪಿಎಂಸಿಯಲ್ಲಿನ ಸಗಟು ತರಕಾರಿ ಮಾರುಕಟ್ಟೆಯು 03 ವರ್ಷಗಳಿಂದ ಸಂಪೂರ್ಣವಾಗಿ ತರಕಾರಿ ವ್ಯಾಪಾರವಿಲ್ಲದೆ ಮುಚ್ಚಿದೆ. ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆಯಲ್ಲಿ ಸರ್ಕಾರವನ್ನು ನಂಬಿ ಮಳಿಗೆ ಪಡೆದ ನಾವು ಎಲ್ಲ ವ್ಯಾಪಾರಸ್ಥರು ಆರ್ಥಿಕ, ದೈಹಿಕ ಮತ್ತು ಮಾನಸಿಕವಾಗಿ ಕುಂದಿದ್ದೆವೆ. ನಮ್ಮನ್ನು ನಂಬಿದ ಕುಟುಂಬ ಸದಸ್ಯರು ಕೂಲಿ ಕಾರ್ಮಿಕರು ವಾಹನ ಚಾಲಕರು(ಮಾಲೀಕರು) ಗುಮಾಸ್ತರು ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದೇವೆ” ಎಂದು ಕಳವಳ ವ್ಯಕ್ತಪಡಿಸಿದರು.

ಜೈ ಕಿಸಾನ್‌ ತರಕಾರಿ ಮಾರುಕಟ್ಟೆ 4

“ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆಯನ್ನು ಎಪಿಎಂಸಿಗೆ ಸ್ಥಳಾಂತರಿಸಿ ವ್ಯಾಪಾರ ವಹಿವಾಟು ಸುಗಮವಾಗಿ ನಡೆದುಕೊಂಡು ಹೋಗುವಂತೆ ಮಾಡಬೇಕು. ಇಲ್ಲವಾದಲ್ಲಿ ತಮ್ಮ ಕಚೇರಿಯ ಮುಂದೆ ಎಲ್ಲ ವ್ಯಾಪಾಸ್ಥರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಅನಿವಾರ್ಯತೆ ಎದುರಾಗುತ್ತದೆ” ಎಂದು ಸರ್ಕಾರಿ ಎಪಿಎಂಸಿ ಮಾರುಕಟ್ಪೆಯ ಸಗಟು ವ್ಯಾಪಾರಸ್ಥರು ಹಾಗೂ ಇಲ್ಲಿ ಕೆಲಸ ಮಾಡುವ ಹಮಾಲರು ಸರ್ಕಾರಕ್ಕೆ ಎಚ್ಚರಿಕೆ‌ ನೀಡಿದ್ದಾರೆ.

ಜೈ ಕಿಸಾನ್‌ ತರಕಾರಿ ಮಾರುಕಟ್ಟೆ

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಈ ವೇಳೆ ಸಗಟು ವ್ಯಾಪಾರಸ್ಥರು, ಹಮಾಲರು ಮತ್ತು ವಾಹನ ಚಾಲಕರು ಜೊತೆಗೂಡಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ನ್ಯಾಯಕ್ಕಾಗಿ ಹೋರಾಡುವುದಾಗಿ ಹೇಳಿಕೊಂಡಿದ್ದಾರೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...