ಜೈನಮುನಿ ಹತ್ಯೆ ಪ್ರಕರಣ | ಜುಲೈ 17ರವರೆಗೆ ಆರೋಪಿಗಳು ಪೊಲೀಸ್ ಕಸ್ಟಡಿಗೆ

Date:

  • ಆರೋಪಿಗಳನ್ನು ಜು.17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ
  • ಜುಲೈ 5ರಂದು ರಾತ್ರಿ ಜೈನಮುನಿಯನ್ನು ಹತ್ಯೆ ಮಾಡಿದ್ದ ಆರೋಪಿಗಳು

ಬೆಳಗಾವಿ ಜಿಲ್ಲೆಯ ಹಿರೇಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಂಗಳವಾರ​ ಆದೇಶಿಸಿದೆ.

ಜುಲೈ 17ರವರೆಗೆ ಪ್ರಕರಣದ ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನ್ ​​ಸಾಬ್ ಅನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ. ಕಸ್ಟಡಿಗೆ ಪಡೆದುಕೊಂಡಿರುವ ಚಿಕ್ಕೋಡಿ ಪೊಲೀಸರು, ಪ್ರಕರಣದ ಸಂಬಂಧ ಇನ್ನಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್​, ಡಿವೈಎಸ್​ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ವಿವರಗಳನ್ನು ಕಲೆ ಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ | ಸೌಜನ್ಯ ಪ್ರಕರಣವೇನು? 11 ವರ್ಷಗಳ ತನಿಖೆ ಹಳಿತಪ್ಪಿದ್ದು ಹೇಗೆ? ನಿಜಕ್ಕೂ ಅಪರಾಧಿಗಳಾರು? ಕಂಪ್ಲೀಟ್ ಡೀಟೇಲ್ಸ್‌

ಕಳೆದ ಜುಲೈ 5ರಂದು ರಾತ್ರಿ ಜೈನಮುನಿಯನ್ನು ಹತ್ಯೆ ಮಾಡಲಾಗಿತ್ತು. ಜು.6ರಂದು ನಾಪತ್ತೆಯಾಗಿರುವುದಾಗಿ ಸುದ್ದಿ ಹಬ್ಬಿತ್ತು. ಬಂಧನದ ಬಳಿಕ ಅವರನ್ನು ಹತ್ಯೆ ಮಾಡಿ, ಶವವನ್ನು ಕೊಳವೆ ಬಾವಿಗೆ ಹಾಕಿರುವುದಾಗಿ ಆರೋಪಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆರೋಪಿಗಳು ನೀಡಿದ ವಿವರವನ್ನು ಕಲೆಹಾಕಿ, ಪತ್ತೆ ಹಚ್ಚಿದಾಗ ಕಟಕಬಾವಿ ಗ್ರಾಮದ ಬಳಿಯ ಕೊಳವೆ ಬಾವಿಯಲ್ಲಿ ಮೃತದೇಹದ ತುಂಡುಗಳು ಪತ್ತೆಯಾಗಿದ್ದವು.

ಪಾರದರ್ಶಕ ತನಿಖೆಯನ್ನು ಸರ್ಕಾರ ನಡೆಸಬೇಕು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತದಲ್ಲಿರುವ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಮಂಗಳವಾರ ಭೇಟಿ ನೀಡಿದೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ದೇಶದ ಗಮನ ಸೆಳೆದಿರುವ ಪ್ರಕರಣ. ಹಾಗಾಗಿ, ಈ ಪ್ರಕರಣದ ಸತ್ಯಾಸತ್ಯತೆ ಅರಿಯಲು ಭೇಟಿ ನೀಡಿದ್ದೇವೆ. ಘಟನೆ ಸಂಬಂಧ ಆಶ್ರಮದ ಬಲ್ಲವರೊಂದಿಗೆ ಮಾಹಿತಿ ಪಡೆದಿದ್ದೇವೆ. ಒಬ್ಬರ ಹೆಸರನ್ನು ಮುಚ್ಚಿಡುವ ಪ್ರಯತ್ನ ನಡೆದಿದೆ. ಬಿಜೆಪಿ ಸರ್ಕಾರ ಇದ್ದಾಗ ಕೂಡ ಪ್ರಮುಖ ಪ್ರಕರಣಗಳನ್ನು ಸಿಬಿಐ, ಎನ್‌ಐಎಗೆ ನೀಡಲಾಗಿತ್ತು. ಹಾಗಾಗಿ, ಈ ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆಯನ್ನು ಸರ್ಕಾರ ನಡೆಸಬೇಕು. ಮುನಿಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಶಾಸಕರಾದ ಮಹೇಶ್ ಟೆಂಗಿನಕಾಯಿ, ಅಭಯ್ ಪಾಟೀಲ್ ಈ ವೇಳೆ ಜೊತೆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...