ಯಾವುದೇ ಪ್ರಕರಣವಿರಲಿ, ಸರ್ಕಾರ ಯಾರ ರಕ್ಷಣೆಗೂ ಮುಂದಾಗುವುದಿಲ್ಲ: ಸದನಕ್ಕೆ ಸಿಎಂ ಭರವಸೆ

Date:

  • ಈ ಪ್ರಕರಣ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ
  • ಸರ್ಕಾರ ಯಾರ ರಕ್ಷಣೆಗೂ ನಿಂತಿಲ್ಲ: ಸಿದ್ದರಾಮಯ್ಯ

ಜೈನಮುನಿ ಹತ್ಯೆ, ಟಿ ನರಸೀಪುರದಲ್ಲಿ ನಡೆದ ಹತ್ಯೆ ಹಾಗೂ ಕಲಬುರ್ಗಿ ಪ್ರಕರಣ ಸೇರಿ ಯಾವುದೇ ಪ್ರಕರಣವಿರಲಿ, ಸರ್ಕಾರ ಯಾರ ರಕ್ಷಣೆಗೂ ಮುಂದಾಗುವುದಿಲ್ಲ. ನಮ್ಮ ಪೊಲೀಸರಿಂದಲೇ ಎಲ್ಲ ಆಯಾಮಗಳಿಂದಲೂ ತನಿಖೆ ಮಾಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಮಂಗಳವಾರ ನಡೆದ ಏಳನೇ ದಿನದ ಕಲಾಪದಲ್ಲಿ ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕರು ಸದನದಲ್ಲಿ ಪಟ್ಟು ಹಿಡಿದಾಗ ಮಧ್ಯ ಪ್ರವೇಶಿಸಿ ಮಾತನಾಡಿದ ಅವರು, “ಯಾವುದೇ ಪ್ರಕರಣ ಇರಲಿ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ. ಪ್ರಾಮಾಣಿಕವಾಗಿ ಯಾರೇ ತಪ್ಪಿತಸ್ಥರು ಇದ್ದರೂ ಅವರು ಎಷ್ಟೇ ದೊಡ್ಡವರು ಆಗಿರಲಿ ಅವರಿಗೆ ಶಿಕ್ಷೆ ಕೊಡಿಸುತ್ತೇವೆ” ಎಂದು ಭರವಸೆ ನೀಡಿದರು.

ಪರಮೇಶ್ವರ್‌ ಶ್ಲಾಘನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕೋಡಿಯ ನಂದಿಪರ್ವತದ ಜೈನಮುನಿ ಕಾಮಕುಮಾರ ನಂದಿ ಹತ್ಯೆ ಪ್ರಕರಣದಲ್ಲಿ ನಮ್ಮ ಪೊಲೀಸರ ಶ್ರಮವನ್ನು ನಾವು ಶ್ಲಾಘಿಸುತ್ತೇವೆ. ಕೇವಲ ಆರು ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ, ಜೈನಮುನಿ ಅವರ ದೇಹವನ್ನು ಪತ್ತೆ ಮಾಡಿದ್ದಾರೆ. ಅವರ ಕಾರ್ಯವನ್ನು ನಾನು ನಮ್ಮ ಸರ್ಕಾರ ಶ್ಲಾಘಿಸಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ಜೈನಮುನಿ ಹತ್ಯೆ, ಟಿ ನರಸೀಪುರದ ಯುವ ಬ್ರಿಗೇಡ್‌ ಕಾರ್ಯಕರ್ತನ ಹತ್ಯೆ ವಿಚಾರವಾಗಿ ನಡೆದ ಚರ್ಚೆಯಲ್ಲಿ ಪ್ರತಿಪಕ್ಷದ ನಾಯಕರಿಗೆ ಉತ್ತರಿಸಿದ ಗೃಹ ಸಚಿವರು, “ನಮ್ಮ ಪೊಲೀಸರು ಯಾವುದೇ ಮಾಹಿತಿ ಮುಚ್ಚಿಡುವ ಪ್ರಯತ್ನ ಮಾಡಿಲ್ಲ. ಅನೇಕ ವಿಚಾರಗಳು ಪೊಲೀಸರ ಬಳಿ ಇವೆ. ತನಿಖೆ ನಡೆಯುತ್ತಿರುವುದರಿಂದ ಅದನ್ನು ಸದನದಲ್ಲಿ ಹೇಳಲು ಸಾಧ್ಯವಿಲ್ಲ. ಅಪರಾಧಿಗಳಿಗೆ ಶಿಕ್ಷೆ ಕೊಡುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಜೈನಮುನಿ ಹತ್ಯೆ ಪ್ರಕರಣ | ಜುಲೈ 17ರವರೆಗೆ ಆರೋಪಿಗಳು ಪೊಲೀಸ್ ಕಸ್ಟಡಿಗೆ

“ಜೈನಮುನಿಯ ಬರ್ಬರ ಹತ್ಯೆ ನಾವು ಎಂದೂ ಕಂಡಿರಲಿಲ್ಲ. ನಿಜಕ್ಕೂ ನೋವು ತಂದಿದೆ. ಜೈನಮುನಿ ಸರ್ವವನ್ನೂ ತ್ಯಾಗ ಮಾಡಿ ಧರ್ಮದ ಸೇವೆಗೆ ಅರ್ಪಿಸಿಕೊಂಡವರನ್ನು ಭೂಮಿ ಮೇಲೆ ಬದುಕಲು ಬಿಡಲ್ಲ ಎಂದರೆ ಸಮಾಜ ಯಾವ ಕಡೆಗೆ ಹೋಗುತ್ತಿದೆ? ನಿಜಕ್ಕೂ ನನಗೆ ಭಯವಾಗುತ್ತಿದೆ” ಎಂದು ಪರಮೇಶ್ವರ್‌ ತಿಳಿಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, “ಜೈನ ಮುನಿಯ ಹತ್ಯೆ ಪ್ರಕರಣದಲ್ಲಿ ಕೆಲವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ. ಹೀಗಾಗಿ ನಾವು ಸಿಬಿಐಗೆ ಈ ಪ್ರಕರಣ ವಹಿಸುವಂತೆ ಕೋರುತ್ತಿದ್ದೇವೆ. ನಾವು ನಮ್ಮ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ನಾವು ಧರಣಿ ಕೈಗೊಳ್ಳುತ್ತೇವೆ” ಎಂದು ಸದನದ ಬಾವಿಗಿಳಿದರು.

ಸಭಾಧ್ಯಕ್ಷರು ಮಧ್ಯಪ್ರವೇಶಿಸಿ, ”ಬೆಳಗ್ಗೆಯಿಂದ ನೋಡುತ್ತಿರುವೆ, ಬಿಜೆಪಿ ಸದಸ್ಯರು ಸದನ ನಡೆಯಲು ಬಿಡುತ್ತಿಲ್ಲ. ಬರೀ ನೆಪಗಳನ್ನು ಹುಡುಕಿಕೊಂಡು ಸದನದ ಘನತೆ ಹಾಳು ಮಾಡುತ್ತಿದ್ದಾರೆ” ಎಂದು ಕಟುವಾಗಿಯೇ ಮಾತನಾಡಿ, ಸದನವನ್ನು 15 ನಿಮಿಷ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...