ಉಡುಪಿ | 10 ವರ್ಷಗಳ ನಿರಂತರ ಸೇವೆ: 110 ಕುಟುಂಬಗಳಿಗೆ ರಮಝಾನ್ ಕಿಟ್, ಇನ್ನೂ 80 ಕಿಟ್ ವಿತರಿಸುವ ಗುರಿ : ರಯೀಸ್ ಅಹಮದ್

Date:

ಪವಿತ್ರ ರಮಝಾನ್ ತಿಂಗಳ ಅಂಗವಾಗಿ ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಘಟಕದ ವತಿಯಿಂದ ಅರ್ಹ 110 ಬಡ ಕುಟುಂಬಗಳಿಗೆ ಮಾನವೀಯ ನೆರವಿನ ರೂಪದಲ್ಲಿ ರಮಝಾನ್ ಕಿಟ್‌ಗಳನ್ನು ವಿತರಿಸಲಾಯಿತು. ಕಳೆದ ಹತ್ತು ವರ್ಷಗಳಿಂದ ದಾನಿಗಳ ಸಹಕಾರದೊಂದಿಗೆ ನಿರಂತರವಾಗಿ ಈ ಸೇವಾ ಕಾರ್ಯವನ್ನು ನಡೆಸಿಕೊಂಡು ಬರುತ್ತಿದ್ದಾರೆ, ಈ ವರ್ಷವೂ ಸುಮಾರು 2500 ರೂ. ಮೌಲ್ಯದ ರೇಷನ್ ಕಿಟ್‌ಗಳನ್ನು ಕುಟುಂಬಗಳ ಮನೆ ಬಾಗಿಲಿಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಉಪಯೋಗವಾಗುವ ರೀತಿಯಲ್ಲಿ ಅಗತ್ಯ ದಿನಸಿ ಸಾಮಗ್ರಿಗಳನ್ನು ಒಳಗೊಂಡ ಕಿಟ್‌ಗಳನ್ನು ವಿತರಿಸಲಾಗಿದ್ದು, ರಮಝಾನ್ ಅವಧಿಯಲ್ಲಿ ಯಾರೂ ಸಂಕಷ್ಟಕ್ಕೆ ಒಳಗಾಗಬಾರದು ಎಂಬ ಉದ್ದೇಶವೇ ಈ ಕಾರ್ಯದ ಹಿಂದಿನ ಪ್ರಮುಖ ಆಶಯವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಕುರಿತು ಈ ದಿನ.ಕಾಮ್ ಜೊತೆ ಮಾತನಾಡಿದ ಜಮಾಅತೆ ಇಸ್ಲಾಮೀ ಹಿಂದ್ ಸಮಾಜ ಸೇವಾ ಘಟಕದ ರಯೀಸ್ ಅಹಮದ್ “ದಾನಿಗಳಿಂದ ಸಂಗ್ರಹವಾಗುವ ನೆರವಿನ ಹಣದ ಮೂಲಕ ಕಳೆದ 10 ವರ್ಷಗಳಿಂದ ನಿರಂತರವಾಗಿ ರಮಝಾನ್ ಕಿಟ್‌ಗಳನ್ನು ನೀಡಲಾಗುತ್ತಿದೆ. ಈ ಬಾರಿ 110 ಕುಟುಂಬಗಳಿಗೆ ಕಿಟ್‌ಗಳನ್ನು ಮನೆ ಮನೆಗೆ ತಲುಪಿಸಲಾಗಿದೆ. ಇನ್ನೂ ಹೆಚ್ಚಿನ ಬೇಡಿಕೆ ಇರುವುದರಿಂದ ದಾನಿಗಳಿಂದ ಇನ್ನಷ್ಟು ಸಹಾಯ ಸಂಗ್ರಹವಾಗುವ ನಿರೀಕ್ಷೆಯಿದ್ದು, ರಮಝಾನ್ ಒಳಗಾಗಿ ಇನ್ನೂ 80 ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜದ ವಿವಿಧ ವಲಯಗಳ ದಾನಿಗಳ ಕೈಜೋಡಿಕೆಯಿಂದ ನಡೆಯುತ್ತಿರುವ ಈ ಮಾನವೀಯ ಸೇವೆ, ಬಡ ಕುಟುಂಬಗಳ ಬದುಕಿಗೆ ಆಶಾಕಿರಣವಾಗಿದ್ದು, ರಮಝಾನ್‌ನ ನಿಜವಾದ ಸಂದೇಶವಾದ ಹಂಚಿಕೆ ಮತ್ತು ಕರುಣೆಯನ್ನು ಜೀವಂತವಾಗಿಟ್ಟಿದೆ. ಸಂಕಷ್ಟದಲ್ಲಿರುವ ಕುಟುಂಬಗಳ ಮುಖದಲ್ಲಿ ಮೂಡಿದ ಸಂತಸದ ನಗು, ಈ ಸೇವಾ ಕಾರ್ಯದ ಸಾರ್ಥಕತೆಯನ್ನು ಸಾರುತ್ತಿದೆ.

1009696370
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...